Breaking News
Home / ಬೆಳಗಾವಿ / ಪ್ರತಿಯೊಬ್ಬರೂ ತಮ್ಮಲ್ಲಿ ದೇಶಾಭಿಮಾನ ಬೆಳಸಿಕೊಳ್ಳಬೇಕು: ಈರಪ್ಪ ದೇಯಣ್ಣವರ

ಪ್ರತಿಯೊಬ್ಬರೂ ತಮ್ಮಲ್ಲಿ ದೇಶಾಭಿಮಾನ ಬೆಳಸಿಕೊಳ್ಳಬೇಕು: ಈರಪ್ಪ ದೇಯಣ್ಣವರ

Spread the love

ಬೆಟಗೇರಿ:ದೇಶಕ್ಕಾಗಿ ತಮ್ಮ ಬದುಕನ್ನೆ ತ್ಯಾಗ ಮಾಡಿದ ಮಹಾನ್ ವ್ಯಕ್ತಿಗಳನ್ನು ಇಂದು ಪ್ರತಿಯೊಬ್ಬರೂ ಸ್ಮರಿಸಬೇಕು ಎಂದು ಬೆಟಗೇರಿ ತಾಪಂ ಮಾಜಿ ಸದಸ್ಯ ಈರಪ್ಪ ದೇಯಣ್ಣವರ ಹೇಳಿದರು.

ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಚೈತನ್ಯ ಗ್ರಪ್ಸ್‍ನ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ಆ.15ರಂದು ನಡೆದ 79ನೇ ವರ್ಷದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ತಾಪಂ ಮಾಜಿ ಸದಸ್ಯ ಈರಪ್ಪ ದೇಯಣ್ಣವರ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಇಂದು ಪ್ರತಿಯೊಬ್ಬರೂ ತಮ್ಮಲ್ಲಿ ದೇಶಾಭಿಮಾನ ಬೆಳಸಿಕೊಳ್ಳಬೇಕು ಎಂದರು.
ಉಭಯ ಮಾಧ್ಯಮ ಪ್ರಾಥಮಿಕ ಶಾಲೆಯ ಮಕ್ಕಳು ದೇಶಕ್ಕಾಗಿ ತಮ್ಮ ಬದುಕನ್ನೆ ತ್ಯಾಗಗೈದ ಮಹಾನ್ ವೀರ ಪುರುಷ ಮತ್ತು ಮಹಿಳೆಯರ ರೂಪಕದ ವೇಷಭೂಷಣ ತೊಟ್ಟು ಎಲ್ಲರ ಗಮನ ಸೆಳೆದರು. ಮಹಾತ್ಮಗಾಂಧೀಜಿ ಮತ್ತು ಡಾ.ಬಿ.ಆರ್.ಅಂಬೇಡ್ಕರ ಭಾವ ಚಿತ್ರಕ್ಕೆ ಪೂಜೆ, ಪುಷ್ಪ ಸಮರ್ಪನೆ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಿಹಿ ವಿತರಣೆ ಸಡಗರದಿಂದ ನಡೆಯಿತು.
ಸ್ಥಳೀಯ ಶಿಕ್ಷಣಪ್ರೇಮಿಗಳಾದ ಬಸಪ್ಪ ಮೇಳೆಣ್ಣವರ, ರಮೇಶ ನಾಯ್ಕ, ಎಸ್.ವೈ.ಪಾಟೀಲ, ಆಡಳಿತಾಧಿಕಾರಿ ರವಿ ಭರಮನಾಯ್ಕ, ಚೈತನ್ಯ ಗ್ರುಪ್ಸ್‍ನ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಕಮಲಾಕ್ಷಿ ನಾಯ್ಕ, ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ವಿದ್ಯಾಶ್ರೀ ಜನ್ಮಟ್ಟಿ, ಕಾವೇರಿ ಹೊಸಮಠ, ದೀಪಾ ಪಾಟೀಲ, ಸುಧಾ ಪಾಟೀಲ, ಉಭಯ ಮಾಧ್ಯಮ ಪ್ರಾಥಮಿಕ ಶಾಲೆಯ ಶಿಕ್ಷಕರು, ಶಿಕ್ಷಕಿಯರು, ಸಿಬ್ಬಂದಿವರ್ಗ, ವಿದ್ಯಾರ್ಥಿಗಳು, ಪಾಲಕರು, ಶಿಕ್ಷಣಪ್ರೇಮಿಗಳು, ಇತರರು ಇದ್ದರು.


Spread the love

About inmudalgi

Check Also

ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ. ಮುಖ್ಯೋಪಾದ್ಯಾಯ — ಚಂದ್ರಕಾಂತ ಬಿ. ಪೂಜೇರಿ

Spread the loveಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ