ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಕಾರ್ಯಾಲಯದಲ್ಲಿ ಆ.15ರಂದು 79ನೇ ಸ್ವಾತಂತ್ರ್ಯೋತ್ಸವ ಸಡಗರದಿಂದ ಆಚರಣೆ ನಡೆಯಿತು.
ಬೆಟಗೇರಿ ಗ್ರಾಪಂ ಅಧ್ಯಕ್ಷೆ ಯಲ್ಲವ್ವ ಲಕ್ಷ್ಮಣ ಚಂದರಗಿ ಧ್ವಜಾರೋಹಣ ನೆರವೇರಿಸಿದರು. ಮಹಾತ್ಮಗಾಂಧೀಜಿ ಮತ್ತು ಡಾ.ಬಿ.ಆರ್.ಅಂಬೇಡ್ಕರ ಭಾವ ಚಿತ್ರಕ್ಕೆ ಪೂಜೆ, ಪುಷ್ಪ ಸಮರ್ಪನೆ, ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ವಿತರಣೆ ನಡೆಯಿತು.
ಸ್ಥಳೀಯ ಗ್ರಾಮ ಪಂಚಾಯ್ತಿ ಪಿಡಿಒ ಎಂ.ಎಲ್ ಯಡ್ರಾಂವಿ, ಕಾರ್ಯದರ್ಶಿ ಬಸವರಾಜ ಪಣದಿ, ಮಾರುತಿ ತಳವಾರ, ಸುರೇಶ ಬಾಣಸಿ, ವಿಠಲ ಚಂದರಗಿ, ಮಂಜು ಕಂಬಿ, ಈರಣ್ಣ ದಂಡಿನ, ಶಿವಪ್ಪ ಐದುಡ್ಡಿ, ಇಲ್ಲಿಯ ಗ್ರಾಪಂ ಸದಸ್ಯರು, ಸಿಬ್ಬಂದಿ, ರಾಜಕೀಯ ಮುಖಂಡರು, ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು, ಶಿಕ್ಷಕಿಯರು, ಗ್ರಾಮಸ್ಥರು, ಮತ್ತೀತರರು ಇದ್ದರು.