ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದ ಸನ್ 2024-25ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ ಮಹಾಸಭೆ ಸಂಘದ ಅಧ್ಯಕ್ಷ ಮಹಾದೇವ ಕಂಬಿ ಅವರ ಅಧ್ಯಕ್ಷತೆಯಲ್ಲಿ ಸೆ.10ರಂದು ಮುಂಜಾನೆ 11ಗಂಟೆಗೆ ಸಂಘದ ಕಾರ್ಯಾಲಯದಲ್ಲಿ ನಡೆಯಲಿದೆ.
ಸಂಘದ ವಾರ್ಷಿಕ ಆಯಾ-ವ್ಯಯ ಅನುಮೋದನೆ, ಕಾರ್ಯ ಚಟುವಟಿಕೆ, ವಾರ್ಷಿಕ ವರದಿ, ಸನ್ 2024-25ನೇ ಸಾಲಿನ ನಿವ್ಹಳ ಲಾಭದ ವಿಭಾಗಣೆ, ಇತರೆ ಸಹಕಾರ ಸಂಘಗಳಲ್ಲಿ ಸಂಘದ ಸದಸ್ಯತ್ವದ ಅನುಮೋದನೆ ಸೇರಿದಂತೆ 27 ವಿಷಯಗಳ ಕುರಿತು ಹಾಗೂ ಸಂಘದ ಸಮಗ್ರ ಪ್ರಗತಿಗಾಗಿ ಹಲವಾರು ವಿಷಯಗಳನ್ನು ಚರ್ಚಿಸಲಿದ್ದು, ಸಂಘದ ಆಡಳಿತ ಮಂಡಳಿ ಸದಸ್ಯರು, ಸರ್ವ ಸದಸ್ಯರು, ಗ್ರಾಹಕರು ಈ ಮಹಾಸಭೆಯಲ್ಲಿ ಹಾಜರಿರಬೇಕೆಂದು ಸಂಘದ ಮುಖ್ಯಕಾರ್ಯನಿರ್ವಾಹಕ ಎನ್.ಎ.ನೀಲಣ್ಣವರ ಪತ್ರಿಕಾ ಪ್ರಕಟನೆಗೆ ತಿಳಿಸಿದ್ದಾರೆ.