Breaking News
Home / ಬೆಳಗಾವಿ / ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪರಿಸರದ ಸ್ವಚ್ಛತೆಗೆ ಪ್ರಯತ್ನಿಸಬೇಕು: ಎಮ್.ಎಲ್.ಯಡ್ರಾಂವಿ

ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪರಿಸರದ ಸ್ವಚ್ಛತೆಗೆ ಪ್ರಯತ್ನಿಸಬೇಕು: ಎಮ್.ಎಲ್.ಯಡ್ರಾಂವಿ

Spread the love

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪರಿಸರದ ಸ್ವಚ್ಛತೆಗೆ ಪ್ರಯತ್ನಿಸಬೇಕು. ಸ್ಥಳೀಯ ಸಾರ್ವಜನಿಕ ಸ್ಥಳಗಳಲ್ಲಿ ಕಸ ಮತ್ತು ತ್ಯಾಜ್ಯ ವಸ್ತುಗಳನ್ನು ಎಲ್ಲಿ ಬೇಕಾದಲ್ಲಿ ಎಸೆಯಬಾರದು. ಕಸದ ತೊಟ್ಟಿಗಳಲ್ಲಿ ಕಸ ಮತ್ತು ತ್ಯಾಜ್ಯ ವಸ್ತುಗಳನ್ನು ಹಾಕಬೇಕು ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಪಿಡಿಒ ಎಮ್.ಎಲ್.ಯಡ್ರಾಂವಿ ಹೇಳಿದರು.
ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಸಹಯೋಗದಲ್ಲಿ ಸೆ.25ರಂದು ನಡೆದ ಸ್ವಚ್ಛತಾ ಹೀ ಸೇವಾ ಸ್ವಚ್ಛತೆಯೇ ಸೇವೆ ಪಾಕ್ಷಿಕ-2025ರ ಅಭಿಯಾನದ ಪ್ರಯುಕ್ತ ಒಂದು ದಿನ, ಒಂದು ಗಂಟೆ, ಎಲ್ಲರೂ ಒಟ್ಟಿಗೆ ಶ್ರಮದಾನದ ಘೋಷ ವಾಕ್ಯದಡಿ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಸ್ಥಳೀಯ ಮನೆ, ಅಂಗಡಿ, ಮುಂಗಟ್ಟುದಾರ ಹಾಗೂ ಸ್ಥಳೀಯರು ಹಸಿ ಮತ್ತು ಒಣ ಕಸಗಳನ್ನು ಬೇರೆ ಬೇರೆ ಮಾಡಿ ಕಸ ತುಂಬುವ ವಾಹನ ತಮ್ಮ ಬಳಿ ಬಂದಾಗ ವಾಹನದಲ್ಲಿ ಹಾಕಬೇಕು. ಸ್ಥಳೀಯರು ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು ಎಂದರು.

ಸ್ಥಳೀಯ ಗ್ರಾಪಂ ಪಿಡಿಒ ಎಮ್.ಎಲ್. ಯಡ್ರಾಂವಿ ಮತ್ತು ಗ್ರಾಪಂ ಎಲ್ಲಾ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು ಕೈಯಲ್ಲಿ ಕಸಬರಿಗೆ ಹಿಡಿದು ಸ್ವತಾ ಒಂದು ದಿನ, ಒಂದು ಗಂಟೆ, ಎಲ್ಲರೂ ಒಟ್ಟಿಗೆ ಸೇರಿ ಬೆಟಗೇರಿ ಗ್ರಾಮದ ವಿವಿಧಡೆ ಪ್ರಮುಖ ಸ್ಥಳಗಳಲ್ಲಿ ಕಸಗೊಡಿಸುವ ಸ್ವಚ್ಛತಾ ಕಾರ್ಯ ನಡೆಯಿತು. ಈ ವೇಳೆ ಸ್ಥಳೀಯ ಹಲವು ಸ್ಥಳಗಳಲ್ಲಿ ಕಸ ಹಾಗೂ ತ್ಯಾಜ್ಯ ವಸ್ತುವನ್ನು ಕಸ ತುಂಬುವ ವಾಹನದಲ್ಲಿ ತುಂಬಿ ಕಸ ವಿಲೇವಾರಿ ಸ್ಥಳಕ್ಕೆ ಸಾಗಿಸಲಾಯಿತು.

ಇಲ್ಲಿಯ ಗ್ರಾಪಂ ಕಾರ್ಯದರ್ಶಿ ಎಮ್.ಪಿ.ತಳವಾರ, ಕರ ವಸೂಲಿಗಾರ ಸುರೇಶ ಬಾಣಸಿ, ಬಸವರಾಜ ಪಣದಿ, ವಿಠಲ ಚಂದರಗಿ, ಶಿವಾನಂದ ಐದುಡ್ಡಿ, ಈರಣ್ಣ ದಂಡಿನ, ಮೇಳೆಪ್ಪ ಹರಿಜನ, ಸಾಂವಕ್ಕ ಹರಿಜನ, ಶಿವಾನಂದ ತೋಟಗಿ, ಸ್ಥಳೀಯ ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಗ್ರಾಪಂ ಸಿಬ್ಬಂದಿ, ಸ್ಥಳೀಯರು ಇದ್ದರು.


Spread the love

About inmudalgi

Check Also

ರಾಜ್ಯದಲ್ಲಿ ಉಪ್ಪಾರ ಸಮುದಾಯ ಸಾಮಾಜಿಕ ಆರ್ಥಿಕ ಮತ್ತು ರಾಜಕೀಯವಾಗಿ ಅತ್ಯಂತ ಹಿಂದುಳಿದ ಸಮಾಜವಾಗಿದೆ – ನಿಗಮದ ಅಧ್ಯಕ್ಷ ಭರಮಣ್ಣ ಉಪ್ಪಾರ

Spread the loveಮೂಡಲಗಿ: ರಾಜ್ಯದಲ್ಲಿ ಉಪ್ಪಾರ ಸಮುದಾಯದವರು ಸಾಮಾಜಿಕವಾಗಿ ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಅತ್ಯಂತ ಹಿಂದುಳಿದ ಸಮಾಜವಾಗಿದೆ ಎಂದು ಉಪ್ಪಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ