ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಸ್.ವೈ.ಸಿ ಶಿಕ್ಷಣ ಸಂಸ್ಥೆಯ ಶ್ರೀ ಸದ್ಗುರು ಯಾಲ್ಲಾಲಿಂಗ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿ ಕುಮಾರ ಬಸವರಾಜ ಪಾಟೀಲ ಇತನು ಶ್ರೀ ಅಣ್ಣಾಸಾಹೇಬ ಜೊಲ್ಲೆ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದ ಗುಂಡು ಎಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದ ಗುಂಡು ಎಸೆತ ಸ್ಪರ್ಧೆಗೆ ಆಯ್ಕೆಗೊಂಡಿದ್ದಾನೆ.
ವಿದ್ಯಾರ್ಥಿ ಸಾಧನೆಗೆ ಮೆಚ್ಚುಗೆ: ಸ್ಥಳೀಯ ಎಸ್.ವೈ.ಸಿ ಶಿಕ್ಷಣ ಸಂಸ್ಥೆಯ ಶ್ರೀ ಸದ್ಗುರು ಯಾಲ್ಲಾಲಿಂಗ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು, ಪ್ರಾಚಾರ್ಯರು ಮತ್ತು ಉಪನ್ಯಾಸಕರು, ಸಿಬ್ಬಂದಿ ಕಾಲೇಜು ವಿದ್ಯಾರ್ಥಿ ಬಸವರಾಜ ಪಾಟೀಲ ರಾಜ್ಯ ಮಟ್ಟದ ಗುಂಡು ಎಸೆತ ಸ್ಪರ್ಧೆಗೆ ಆಯ್ಕೆಯಾದ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.