
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಲ್ಲಿ ಸ್ಥಳೀಯ ಕರ್ನಾಟಕ ರಕ್ಷಣಾ ವೇದಿಕೆ ಇವರ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭ ನ.1 ರಂದು ಜರುಗಲಿದೆ.
ನ.1 ರಂದು ಬೆಳಿಗ್ಗೆ 9 ಗಂಟೆಗೆ ಸ್ಥಳೀಯ ವಿವಿಧ ವೃತ್ತದಲ್ಲಿರುವ ಮಹಾನ್ ಪುರುಷರ ಪುತ್ಥಳಿಗಳಿಗೆ ಪೂಜೆ, ಪುಷ್ಪಾರ್ಪಣೆ ಸಮರ್ಪಣೆ ಬಳಿಕ ಇಲ್ಲಿಯ ಅಶ್ವಾರೂಢ ಬಸವೇಶ್ವರ ವೃತ್ತದಿಂದ ಸಂಗೋಳ್ಳಿ ರಾಯಣ್ಣ ವೃತ್ತದವರೆಗೆ ಶಾಲಾ-ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ವಿವಿಧ ರೂಪಕಗಳ, ಜಾನಪದ ಕಲಾ ತಂಡಗಳು ಸೇರಿದಂತೆ ಸಕಲ ವಾದ್ಯಮೇಳಗಳೊಂದಿಗೆ ಭುವನೇಶ್ವರಿ ದೇವಿಯ ಮತ್ತು ಡಾ.ಬೆಟಗೇರಿ ಕೃಷ್ಣಶರ್ಮರ ಭಾವಚಿತ್ರದ ಭವ್ಯ ಮೇರವಣಿಗೆ ಕಾರ್ಯಕ್ರಮ ನಡೆಯಲಿದೆ.
ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಕನ್ನಡ ಪರ ಹೋರಾಟಗಾರರು, ಸಾಹಿತಿ-ಶರಣರು, ಗಣ್ಯರು, ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಸ್ಥಳೀಯ ಯುವಕರು, ಕನ್ನಡಾಭಿಮಾನಿಗಳು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸ್ಥಳೀಯ ಕರವೇ ಅಧ್ಯಕ್ಷ ಈರಣ್ಣ ಬಳಿಗಾರ ಪತ್ರಿಕಾ ಪ್ರಕಟನೆಗೆ ತಿಳಿಸಿದ್ದಾರೆ.
 IN MUDALGI Latest Kannada News
IN MUDALGI Latest Kannada News
				 
			 
		 
			 
						
					 
						
					 
						
					 
					
				