ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದ ಸನ್ 2020-21ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ ಮಹಾಸಭೆ ಮಂಗಳವಾರ ಸೆ.28ರಂದು ಮುಂಜಾನೆ 11ಗಂಟೆಗೆ ಸಂಘದ ಅಧ್ಯಕ್ಷ ಹನುಮಂತ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಸಂಘದ ಕಾರ್ಯಾಲಯದಲ್ಲಿ ನಡೆಯಲಿದೆ.
ಸಂಘದ ವಾರ್ಷಿಕ ಆಯಾ-ವ್ಯಯದ ಅನುಮೋದನೆ, ವಾರ್ಷಿಕ ವರದಿ, 2020-21ನೇ ಸಾಲಿನ ನಿವ್ಹಳ ಲಾಭದ ವಿಭಾಗಣೆ ಸೇರಿದಂತೆ ಸಂಘದ ಸಮಗ್ರ ಪ್ರಗತಿಗಾಗಿ ಹಲವಾರು ವಿಷಯಗಳನ್ನು ಚರ್ಚಿಸಲಿದ್ದು, ಸಂಘದ ಆಡಳಿತ ಮಂಡಳಿ ಸದಸ್ಯರು, ಸರ್ವ ಸದಸ್ಯರು, ಗ್ರಾಹಕರು ಈ ಮಹಾಸಭೆಯಲ್ಲಿ ಹಾಜರಿರಬೇಕು. ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದರ ಜೋತೆಗೆ ದೈಹಿಕ ಅಂತರ ಕಾಪಾಡಿಕೊಳ್ಳಬೇಕೆಂದು ಸಂಘದ ಮುಖ್ಯಕಾರ್ಯನಿರ್ವಾಹಕ ನಿಂಗಪ್ಪ ನೀಲಣ್ಣವರ ಪತ್ರಿಕಾ ಪ್ರಕಟನೆಗೆ ತಿಳಿಸಿದ್ದಾರೆ.
