
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದÀಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ನ.4ರಂದು ಸ್ಥಳೀಯ ಕರ್ನಾಟಕ ರಕ್ಷಣಾ ವೇದಿಕೆ, ಗ್ರಾಮ ಪಂಚಾಯತಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಡಾ.ಬೆಟಗೇರಿ ಕೃಷ್ಣಶರ್ಮರ ದಿವ್ಯ ಸ್ಮರಣೋತ್ಸವ ಸಮಾರಂಭ ಜರುಗಲಿದೆ.
ನ.4ರಂದು ಸಂಜೆ 7 ಗಂಟೆಗೆ ಸ್ಥಳೀಯ ಗಜಾನನ ವೇದಿಕೆ ಮೇಲೆ ಡಾ.ಬೆಟಗೇರಿ ಕೃಷ್ಣಶರ್ಮರ ದಿವ್ಯ ಸ್ಮರಣೋತ್ಸವ ಕಾರ್ಯಕ್ರಮ ಜರುಗಲಿದೆ. ಸುಣಧೋಳಿ ಅಭಿನವ ಶಿವಾನಂದ ಸ್ವಾಮೀಜಿ ದಿವ್ಯ ಸಾನಿಧ್ಯ, ಶಾಸಕ ಬಾಲಚಂದ್ರ ಜಾರಕಿಹೊಳಿ ಉದ್ಘಾಟನೆ ನೆರವೇರಿಸಲಿದ್ದಾರೆ. ಬೆಟಗೇರಿ ಕರವೇ ಅಧ್ಯಕ್ಷ ಈರಣ್ಣ ಬಳಿಗಾರ ಅಧ್ಯಕ್ಷತೆ ವಹಿಸಲಿದ್ದು, ರಂಗಭೂಮಿ ಹಿರಿಯ ಕಲಾವಿದ ಈಶ್ವರಚಂದ್ರ ಬೆಟಗೇರಿ, ಗೋಕಾಕ ಕಸಾಪ ಅಧ್ಯಕ್ಷೆ ಭಾರತಿ ಮದಭಾಂವಿ, ಗೋಕಾಕ ತಾಲೂಕಾ ದಂಡಾಧಿಕಾರಿ ಮೋಹನ ಭಸ್ಮೆ, ಗೋಕಾಕ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪರಶುರಾಮ ಗಸ್ತಿ, ಗೋಕಾಕ ಬಿಇಒ ಜಿ.ಬಿ.ಬಳಿಗಾರ, ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಬಿ.ಹಿರೇಮಠ ಗೌರವಾನ್ವಿತ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಸ್ಥಳೀಯ ಗ್ರಾಪಂ ಅಧ್ಯಕ್ಷೆ ಯಲ್ಲವ್ವ ಚಂದರಗಿ, ಪಿಕೆಪಿಎಸ್ ಅಧ್ಯಕ್ಷ ಬಸವಂತ ಕೋಣಿ, ಹಾಉಸಸಂಘದ ಅಧ್ಯಕ್ಷ ಮಹಾದೇವ ಕಂಬಿ ಮುಖ್ಯಅತಿಥಿಗಳಾಗಿ, ಯುವ ಚಿಂತಕ ಡಾ.ಅರುಣ ಸವತಿಕಾಯಿ ಅವರಿಂದ ಉಪನ್ಯಾಸ, ಜಿ ಕನ್ನಡ ವಾಹಿನಿಯ ಸರಿಗಮಪ ಖ್ಯಾತಿಯ ದೀಯಾ ಹೆಗಡೆ ಮತ್ತು ಜ್ಞಾನೇಶ ಅವರಿಂದ ಸಂಜೆ 8:30 ಗಂಟೆಗೆ ಸಂಗೀತ ರಸಮಂಜರಿ, ಹಸ್ಯ ಕಲಾವಿದ ಶರಣು ಯಮನೂರ ಅವರಿಂದ ಹಾಸ್ಯ ಕಾರ್ಯಕ್ರಮ ನಡೆಯಲಿದೆ.
ಸ್ಥಳೀಯ ಕನ್ನಡ ಪರ ಹೋರಾಟಗಾರರು, ಸಾಹಿತಿ-ಶರಣರು, ಗಣ್ಯರು, ಗ್ರಾಪಂ ಹಾಗೂ ವಿವಿಧ ಸಂಘ, ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷರು, ಸದಸ್ಯರು, ಯುವಕರು, ಕರವೇ ಪದಾಧಿಕಾರಿಗಳು, ಸದಸ್ಯರು, ಈ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸ್ಥಳೀಯ ಕರವೇ ಅಧ್ಯಕ್ಷ ಈರಣ್ಣ ಬಳಿಗಾರ ಪತ್ರಿಕಾ ಪ್ರಕಟನೆಗೆ ತಿಳಿಸಿದ್ದಾರೆ.
IN MUDALGI Latest Kannada News