Breaking News
Home / ಬೆಳಗಾವಿ / ಆನಂದಕಂದರು ಕನ್ನಡ ನಾಡಿನ ಶ್ರೇಷ್ಠ ಸಾಹಿತಿಯಾಗಿದ್ದರು:ಸುಣಧೋಳಿ ಶಿವಾನಂದ ಶ್ರೀಗಳು

ಆನಂದಕಂದರು ಕನ್ನಡ ನಾಡಿನ ಶ್ರೇಷ್ಠ ಸಾಹಿತಿಯಾಗಿದ್ದರು:ಸುಣಧೋಳಿ ಶಿವಾನಂದ ಶ್ರೀಗಳು

Spread the love

ಬೆಟಗೇರಿ:ಇಂದು ಪ್ರತಿಯೊಬ್ಬರೂ ಸಾಹಿತ್ಯಾಭಿರುಚಿ ಮತ್ತು ಕನ್ನಡಾಭಿಮಾನ ಬೆಳಸಿಕೊಳ್ಳಬೇಕು. ಆನಂದಕಂದರು ಅಪ್ಪಟದೇಶಿ ಕವಿ ಮತ್ತು ಕನ್ನಡ ನಾಡಿನ ಶ್ರೇಷ್ಠ ಸಾಹಿತಿಯಾಗಿದ್ದರು ಎಂದು ಸುಣಧೋಳಿ ಶಿವಾನಂದ ಮಹಾಸ್ವಾಮೀಜಿ ಹೇಳಿದರು.
ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಕರ್ನಾಟಕ ರಕ್ಷಣಾ ವೇದಿಕೆ, ಗ್ರಾಮ ಪಂಚಾಯತಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಸ್ಥಳೀಯ ಶ್ರೀ ಗಜಾನನ ವೇದಿಕೆಯಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ನ.4ರಂದು ನಡೆದ ಡಾ.ಬೆಟಗೇರಿ ಕೃಷ್ಣಶರ್ಮರ ದಿವ್ಯ ಸ್ಮರಣೋತ್ಸವ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.
ಸ್ಥಳೀಯ ಯುವಕರು, ಕರವೇ ಸದಸ್ಯರಲ್ಲಿ ಕ್ರೀಯಾಶೀಲ ವ್ಯಕ್ತಿತ್ವ ಮತ್ತು ಒಗ್ಗಟ್ಟುತನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ, ಡಾ. ಬೆಟಗೇರಿ ಕೃಷ್ಣಶರ್ಮರ ದಿವ್ಯಸ್ಮರಣೋತ್ಸವ ಕಾರ್ಯಕ್ರಮದ ಮೂಲಕ ಇಂದಿನ ಯುವಪೀಳಿಗೆಗೆ ಪರಿಚಯಿಸುತ್ತಿರುವದು ಶ್ಲಾಘನೀಯವಾಗಿದೆ. ಸ್ಥಳೀಯರು ವಿವಿಧ ಕಾರ್ಯಕ್ರಮಗಳಿಗೆ ನೀಡುತ್ತಿರುವ ಸಹಾಯ, ಸಹಕಾರ ಮೆಚ್ಚುವಂತದ್ದಾಗಿದೆ ಎಂದು ಸುಣಧೋಳಿ ಶಿವಾನಂದ ಶ್ರೀಗಳು ಅಭಿಪ್ರಯಿಸಿದರು.
ಸ್ಥಳೀಯ ಕರವೇ ಅಧ್ಯಕ್ಷ ಈರಣ್ಣ ಬಳಿಗಾರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸ್ಥಳೀಯ ಯುವ ಚಿಂತಕ ಅರುಣ ಸವತಿಕಾಯಿ ಡಾ.ಬೆಟಗೇರಿ ಕೃಷ್ಣಶರ್ಮರ ಬದುಕು ಮತ್ತು ಬರಹದ ಕುರಿತು ಉಪನ್ಯಾಸ ನೀಡಿದರು. ಗೋಕಾಕ ಬಿಇಒ ಜಿ.ಬಿ.ಬಳಿಗಾರ ಜ್ಯೋತಿ ಬೆಳಗಿಸಿ ಉದ್ಘಾಟನೆ ನೆರವೇರಿಸಿದರು. ಶ್ರೀಗಳು, ಗಣ್ಯರು ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರನ್ನು ಇಲ್ಲಿಯ ಕರವೇ ವತಿಯಿಂದ ಸತ್ಕರಿಸಿದರು. ಜಿ ಕನ್ನಡ ವಾಹಿನಿಯ ಸರಿಗಮಪ ಖ್ಯಾತಿಯ ದೀಯಾ ಹೆಗಡೆ ಮತ್ತು ಜ್ಞಾನೇಶ ಅವರಿಂದ ಸಂಗೀತ ಹಾಗೂ ಹಾಸ್ಯ ಕಲಾವಿದ ಶರಣು ಯಮನೂರ ಅವರಿಂದ ಹಾಸ್ಯ ಕಾರ್ಯಕ್ರಮ ಜರುಗಿತು.

ರೈತರು ಕೈಗೊಂಡ ಪ್ರತಿಭಟನೆಗೆ ಬೆಂಬಲ: ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್‍ನಲ್ಲಿ ಕಳೆದ ಐದಾರು ದಿನಗಳಿಂದ ಕಬ್ಬು ಹಂಗಾಮು ಆರಂಭಿಸುವ ಮುನ್ನವೇ ಕಾರ್ಖಾನೆ ಮಾಲೀಕರು ಪ್ರತಿ ಟನ್ ಕಬ್ಬಿಗೆ 3500/- ರೂ ನಿಗದಿತ ಬೆಲೆ ನೀಡುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು, ಸಮಸ್ತ ರೈತರು ಮಾಡುತ್ತಿರುವ ಪ್ರತಿಭಟನೆಗೆ ಈ ಸಮಾರಂಭದಲ್ಲಿ ಉಪಸ್ಥಿತರಿದ್ದ ಕಲಾವಿದರು, ಸಾಹಿತಿ, ಶ್ರೀಗಳು ಹಾಗೂ ಸ್ಥಳೀಯರು ವೇಳೆ ರೈತರ ಹೋರಾಟದ ಪರ ಬೆಂಬಲ ವ್ಯಕ್ತಪಡಿಸಿದರು.
ರಂಗಭೂಮಿ ಹಿರಿಯ ಕಲಾವಿದ ಈಶ್ವರಚಂದ್ರ ಬೆಟಗೇರಿ, ಮೂಡಲಗಿ ಬಿಇಒ ಪಿ.ಬಿ.ಹಿರೇಮಠ, ಸ್ಥಳೀಯ ಗ್ರಾಪಂ ಅಧ್ಯಕ್ಷೆ ಯಲ್ಲವ್ವ ಚಂದರಗಿ, ಪಿಕೆಪಿಎಸ್ ಅಧ್ಯಕ್ಷ ಬಸವಂತ ಕೋಣಿ, ಮಹಾದೇವ ಕಂಬಿ, ಬಸವರಾಜ ಪಣದಿ, ಮಂಜು ಪತ್ತಾರ, ವಿಜಯ ಹಿರೇಮಠ, ಮಾಯಪ್ಪ ಕೋಣಿ, ಶಂಭು ಹಿರೇಮಠ, ವೀರಭದ್ರ ದೇಯಣ್ಣವರ, ರಾಘು ಬೆಟಗೇರಿ, ಮಹಾದೇವ ತಪಸಿ, ಫಿರೋಜ್ ಮಿರ್ಜಾನಾಯ್ಕ, ಶಿವು ನಾಯ್ಕರ, ಕಾರ್ತಿಕ ತೆರದಾಳ, ಬಸವರಾಜ ದೇಯನ್ನವರ, ಈರಣ್ಣ ದಂಡಿನ, ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಕನ್ನಡಪರ ಹೋರಾಟಗಾರರು, ವಿವಿಧ ಸಂಘ, ಸಂಸ್ಥೆಗಳ ಆಡಳಿತ ಮಂಡಳಿ ಪದಾಧಿಕಾರಿಗಳು, ಸದಸ್ಯರು, ಗಣ್ಯರು, ಸ್ಥಳೀಯ ಕರವೇ ಪದಾಧಿಕಾರಿಗಳು, ಸದಸ್ಯರು, ಕನ್ನಡಾಭಿಮಾನಿಗಳು, ಗ್ರಾಮಸ್ಥರು ಇದ್ದರು.


Spread the love

About inmudalgi

Check Also

ಕೃಷಿಕ ಸಮಾಜ ಹಾಗೂ ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರ ತುಕ್ಕಾನಟ್ಟಿ ಇವರ ಸಹಯೋಗದಲ್ಲಿ ಕಿಸಾನ ಗೋಷ್ಠಿ ಕಾರ್ಯಕ್ರಮ

Spread the loveಮೂಡಲಗಿ :ರೈತ ದಿನಾಚರಣೆಯ ಅಂಗವಾಗಿ ಗೋಕಾಕ ಕೃಷಿ ಇಲಾಖೆಯ ವತಿಯಿಂದ ಆತ್ಮ (ATMA) ಯೋಜನೆ, ಗೋಕಾಕ್/ಮೂಡಲಗಿ ತಾಲೂಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ