Breaking News
Home / ಬೆಳಗಾವಿ / ವಿದ್ಯಾರ್ಥಿ ಈರಯ್ಯ ಮತ್ತು ಅಮರ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ

ವಿದ್ಯಾರ್ಥಿ ಈರಯ್ಯ ಮತ್ತು ಅಮರ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ

Spread the love

ಬೆಟಗೇರಿ:ಚಿಕ್ಕೋಡಿ ಶೈಕ್ಷಣೀಕ ಜಿಲ್ಲಾ ಶಿಕ್ಷಣ ಇಲಾಖಾ ಸಹಯೋಗದಲ್ಲಿ ಗೋಕಾಕ ಮಹರ್ಷಿ ವಾಲ್ಮಿಕಿ ಕ್ರೀಡಾಂಗಣದಲ್ಲಿ ಇತೀಚೆಗೆ ನಡೆದ 17 ವರ್ಷದೊಳಗಿನ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಗೋಕಾಕ ತಾಲೂಕಿನ ಗೋಸಬಾಳ ಸರಕಾರಿ ಹಿರಿಯ ಪ್ರಾಥಮಿಕ ಹಾಗೂ ಉನ್ನತೀಕರಿಸಿದ ಪ್ರೌಢ ಶಾಲೆಯ ವಿದ್ಯಾರ್ಥಿಗಳಾದ ಕುಮಾರ ಈರಯ್ಯ ಶಿವಲಿಂಗಯ್ಯ ಹಿರೇಮಠ ಇತನು 5 ಕಿ.ಮೀ ನಡಿಗೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಕುಮಾರ ಅಮರ ಮುತ್ತೆಪ್ಪ ವಡೇರ ಇತನು ಚಕ್ರ ಎಸೆತ ಮತ್ತು ಹ್ಯಾಮರ್ ಎಸೆತ ಹಾಗೂ 100 ಮೀಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ: ಮೂಡಲಗಿ ಬಿಇಒ ಪಿ.ಬಿ.ಹಿರೇಮಠ, ಗೋಸಬಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸಿದ್ರಾಮ ಲೋಕನ್ನವರ, ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ಸಿದ್ದು ವಾಲಿಮರದ, ಉಭಯ ಶಾಲೆಯ ಶಿಕ್ಷಕರು, ಅತಿಥಿ ಶಿಕ್ಷಕರು, ಎಸ್‍ಡಿಎಮ್‍ಸಿ ಅಧ್ಯಕ್ಷ ಶಂಕರಯ್ಯ ಮಠದ ಮತ್ತು ಸದಸ್ಯರು, ಶಿಕ್ಷಣಪ್ರೇಮಿಗಳು, ಸ್ಥಳೀಯರು ವಿದ್ಯಾರ್ಥಿ ಕುಮಾರ ಈರಯ್ಯ ಹಿರೇಮಠ, ಅಮರ ವಡೇರ ಅವರು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾದ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


Spread the love

About inmudalgi

Check Also

ವಿದ್ಯಾರ್ಥಿ ಶಂಕರಾನಂದ ಮುಧೋಳ,ವಿದ್ಯಾರ್ಥಿನಿ ಪ್ರಿಯಾಂಕಾ ತಡಸಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ

Spread the loveವಿದ್ಯಾರ್ಥಿ ಶಂಕರಾನಂದ ಮುಧೋಳ,ವಿದ್ಯಾರ್ಥಿನಿ ಪ್ರಿಯಾಂಕಾ ತಡಸಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ ಬೆಟಗೇರಿ:ಚಿಕ್ಕೋಡಿ ಶೈಕ್ಷಣೀಕ ಜಿಲ್ಲಾ ಶಿಕ್ಷಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ