Breaking News
Home / ಬೆಳಗಾವಿ / ಬೆಟಗೇರಿ ಗ್ರಾಮ ಪಂಚಾಯತಿ ಪಿಡಿಒ ಎಮ್.ಎಲ್.ಯಡ್ರಾಂವಿಗೆ ಸತ್ಕಾರ

ಬೆಟಗೇರಿ ಗ್ರಾಮ ಪಂಚಾಯತಿ ಪಿಡಿಒ ಎಮ್.ಎಲ್.ಯಡ್ರಾಂವಿಗೆ ಸತ್ಕಾರ

Spread the love

ಬೆಟಗೇರಿ ಗ್ರಾಮ ಪಂಚಾಯತಿ ಪಿಡಿಒ ಎಮ್.ಎಲ್.ಯಡ್ರಾಂವಿಗೆ ಸತ್ಕಾರ

ಬೆಟಗೇರಿ:ಬೆಟಗೇರಿ ಗ್ರಾಮ ಪಂಚಾಯತಿ ಪಿಡಿಒ ಎಮ್.ಎಲ್.ಯಡ್ರಾಂವಿ ಅವರು ಗೋಕಾಕ ತಾಲೂಕಾ ಪಂಚಾಯತ್ (ಗ್ರಾಮೀಣ ಉದ್ಯೋಗ ಖಾತ್ರಿ)ಸಹಾಯಕ ನಿರ್ದೇಶಕ ಹುದ್ದೆಗೆ ಪದೋನ್ನತಿ ಹೊಂದಿದ್ದರಿಂದ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಕಾರ್ಯಾಲಯದಲ್ಲಿ ಡಿ.3ರಂದು ಸ್ಥಳೀಯ ಗ್ರಾಪಂ ಆಡಳಿತ ಮಂಡಳಿ ವತಿಯಿಂದ ಪಿಡಿಒ ಎಮ್.ಎಲ್.ಯಡ್ರಾಂವಿ ಅವರಿಗೆ ಸತ್ಕಾರ ಕಾರ್ಯಕ್ರಮ ನಡೆಯಿತು.
ಸ್ಥಳೀಯ ಗ್ರಾಪಂ ಗ್ರಂಥಾಲಯ ಮತ್ತು ಅರಿವು ಕೇಂದ್ರದ ಮೇಲ್ವಿಚಾರಕ ಬಸವರಾಜ ಪಣದಿ ಅವರು ಈ ವೇಳೆ ಮಾತನಾಡಿ, ಗೋಕಾಕ ತಾಲೂಕಾ ಪಂಚಾಯ್ತಿ ಸಹಾಯಕ ನಿರ್ದೇಶಕರಾಗಿ(ಗ್ರಾಮೀಣ ಉದ್ಯೋಗ ಖಾತ್ರಿ) ಹುದ್ದೆಗೆ ಬಡ್ತಿ ಹೊಂದಿದ ಬೆಟಗೇರಿ ಗ್ರಾಪಂ ಪಿಡಿಒ ಎಮ್.ಎಲ್.ಯಡ್ರಾಂವಿ ಅವರ ಸೇವಾ ಕಾರ್ಯವನ್ನು ಶ್ಲಾಘಿಸಿದರು.
ಗ್ರಾಪಂ ಮಾಜಿ ಅಧ್ಯಕ್ಷ ಲಕ್ಷ್ಮಣ ಚಂದರಗಿ, ಬಸವಂತ ಕೋಣಿ, ರಾಮಣ್ಣ ನೀಲಣ್ಣವರ, ಸುರೇಶ ಬಾಣಸಿ, ವಿಠಲ ಚಂದರಗಿ, ಬಸವರಾಜ ಬಾಣಸಿ, ಸಿದ್ರಾಮ ಚಂದರಗಿ, ತುಕಾರಾಮ ಕುರಿ, ಸಾಂವಕ್ಕಾ ಹರಿಜನ, ಗ್ರಾಮ ಪಂಚಾಯತಿ ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿ, ಮತ್ತೀತರರು ಇದ್ದರು.


Spread the love

About inmudalgi

Check Also

*ಅರಭಾವಿ ಆಂಜನೇಯ ದೇವರ ಕಾರ್ತೀಕೋತ್ಸವದಲ್ಲಿ ಪಾಲ್ಗೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ*

Spread the love *ಮೂಡಲಗಿ-* ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಅರಭಾವಿ ಆಂಜನೇಯ ದೇವಸ್ಥಾನಕ್ಕೆ ತೆರಳಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ