ಡಿ.12ರಂದು ಬೆಟಗೇರಿ ಗ್ರಾಮದೇವತೆ ದ್ಯಾಮವ್ವದೇವಿ ದೇವರ ಕಾರ್ತಿಕೋತ್ಸವ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಕಾರ್ತಿಕ ಮಾಸದ ಪ್ರಯುಕ್ತ ಸ್ಥಳೀಯ ಗ್ರಾಮದೇವತೆ ಶ್ರೀದ್ಯಾಮವ್ವದೇವಿ ದೇವರ ಕಾರ್ತಿಕೋತ್ಸವ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಪ್ರತಿವರ್ಷದಂತೆ ಈ ವರ್ಷವೂ sಶುಕ್ರವಾರ ಡಿ.12 ರಂದು ನಡೆಯಲಿದೆ.
ಡಿ.12 ರಂದು ಬೆಳಿಗ್ಗೆ 7 ಗಂಟೆಗೆ ಸ್ಥಳೀಯ ದ್ಯಾಮವ್ವದೇವಿ ದೇವರ ದೇವಸ್ಥಾನದಲ್ಲಿರುವ ಶ್ರೀದೇವಿಯ ಗದ್ದುಗೆಗೆ ಮಹಾಭಿಷೇಕ, ಮಹಾಪೂಜೆ, ಶ್ರೀದೇವಿ ಶೃಂಗಾರಗೊಳಿಸುವ, ಉಡಿತುಂಬುವದು ಪುರಜನರಿಂದ ಪೂಜೆ ಪುನಸ್ಕಾರ, ನೈವೇದ್ಯ ಸಮರ್ಪನೆ ನಡೆದ ಬಳಿಕ ಮಹಾಪ್ರಸಾದ, ದೀಪೋತ್ಸವ, ಕಾರ್ತಿಕೋತ್ಸವ ಜರುಗಿ ಸಂಪನ್ನಗೊಳ್ಳಲಿದೆ.
ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ರಾಜಕೀಯ ಮುಖಂಡರು, ಗಣ್ಯರು, ಗ್ರಾಮ ಪಂಚಾಯತಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಸದಸ್ಯರು, ಸಂತ ಶರಣರು ಮುಖ್ಯಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಸ್ಥಳೀಯ ಗ್ರಾಮದೇವತೆ ದ್ಯಾಮವ್ವದೇವಿ ದೇವರ ಕಾರ್ತಿಕೋತ್ಸವ ಆಚರಣಾ ಸಮಿತಿ ಪ್ರಕಟನೆಯಲ್ಲಿ ತಿಳಿಸಿದೆ.
IN MUDALGI Latest Kannada News