Breaking News
Home / ಬೆಳಗಾವಿ / ತಮ್ಮ ಮಗುವಿಗೆ ಪೋಲಿಯೊ ಹನಿ ಹಾಕಿಸಿ: ಡಾ.ಸರಸ್ವತಿ ತಂಬಾಕೆ

ತಮ್ಮ ಮಗುವಿಗೆ ಪೋಲಿಯೊ ಹನಿ ಹಾಕಿಸಿ: ಡಾ.ಸರಸ್ವತಿ ತಂಬಾಕೆ

Spread the love

ತಮ್ಮ ಮಗುವಿಗೆ ಪೋಲಿಯೊ ಹನಿ ಹಾಕಿಸಿ: ಡಾ.ಸರಸ್ವತಿ ತಂಬಾಕೆ

ಬೆಟಗೇರಿ:ಆರೋಗ್ಯ ಇಲಾಖೆಯು ರಾಜ್ಯಾದ್ಯಂತ ಭಾನುವಾರ ಡಿ.21ರಂದು ಪಲ್ಸ್ ಪೋಲಿಯೊ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಪೋಲಿಯೊ ಹನಿ ಸುರಕ್ಷಿತವಾಗಿದ್ದು, ತಮ್ಮ ಮಕ್ಕಳಿಗೆ ತಪ್ಪದೇ ಡಿ.21ರಂದು ಪೋಲಿಯೊ ಹನಿ ಹಾಕಿಸಿಕೊಳ್ಳಿ ಎಂದು ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸರಸ್ವತಿ ತಂಬಾಕೆ ಹೇಳಿದ್ದಾರೆ.
ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಶುಕ್ರವಾರ ಡಿ.19 ರಂದು ಬೆಟಗೇರಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯ ಮಕ್ಕಳಿಂದ ಪಲ್ಸ್ ಪೋಲಿಯೊ ಹನಿ ಹಾಕಿಸಿಕೊಳ್ಳುವ ಕುರಿತು ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು .
ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಎಲ್ಲಾ ಹಳ್ಳಿಗಳ ಸ್ಥಳೀಯ ನಾಗರಿಕರು ತಮ್ಮ ಮನೆಯಲ್ಲಿರುವ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಿಸಿಕೊಳ್ಳಬೇಕು ಸೂಚಿಸಿದ್ದಾರೆ. ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಎಲ್ಲಾ ಹಳ್ಳಿಗಳಲ್ಲಿ ಪಲ್ಸ್ ಪೋಲಿಯೊ ಲಸಿಕೆ ಹಾಕುವ ವ್ಯವಸ್ಥೆ ಮಾಡಲಾಗಿದೆ. ಸ್ಥಳೀಯರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಡಾ.ಸರಸ್ವತಿ ತಂಬಾಕೆ ತಿಳಿಸಿದ್ದಾರೆ.
ಸ್ಥಳೀಯ ಪಿಎಚ್‍ಸಿ ಆಯುಷ ವೈದ್ಯಾಧಿಕಾರಿ ರೋಹಿಣಿ ಹುಂಡೆಕರ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಅರ್ಜುನ ಕರಾಟೆ, ಅಕ್ಷತಾ ಗಿವಾರಿ, ಅಂಜನಾ ಬಡಿಗೇರ, ಲಕ್ಷ್ಮೀ ಬಳಿಗಾರ, ಮಾಲಾ ದೇಯಣ್ಣವರ, ಭಾರತಿ ಅಜ್ಜನಕಟ್ಟಿ, ಸಕೂಬಾಯಿ ಕಂಬಾರ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ, ಉಭಯ ಶಾಲೆಯ ಶಿಕ್ಷಕರು, ಶಾಲಾ ಮಕ್ಕಳು ಮತ್ತಿತರರು ಇದ್ದರು.


Spread the love

About inmudalgi

Check Also

ಶಬರಿಮಲೈಗೆ ಪಾದಯಾತ್ರೆ ಕೈಗೊಂಡ ಅಯ್ಯಪ್ಪ ಮಾಲಾಧಾರಿಗಳು

Spread the loveಶಬರಿಮಲೈಗೆ ಪಾದಯಾತ್ರೆ ಕೈಗೊಂಡ ಅಯ್ಯಪ್ಪ ಮಾಲಾಧಾರಿಗಳು ಮೂಡಲಗಿ:-ಪಟ್ಟಣದಿಂದ ಶಬರಿಮಲೈಗೆ ಪಾದಯಾತ್ರೆ ಕೈಗೊಂಡಿರುವ ಶ್ರೀ ಅಯ್ಯಪ್ಪ ಮಾಲಾಧಾರಿಗಳು. ಮೂಡಲಗಿಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ