Breaking News
Home / ಬೆಳಗಾವಿ / ಬೆಟಗೇರಿ: ಡಿ.27ರಂದು 28ನೇ ವರ್ಷದ ಶ್ರೀಅಯ್ಯಪ್ಪ ಸ್ವಾಮಿ ಮಹಾಪೂಜೆ

ಬೆಟಗೇರಿ: ಡಿ.27ರಂದು 28ನೇ ವರ್ಷದ ಶ್ರೀಅಯ್ಯಪ್ಪ ಸ್ವಾಮಿ ಮಹಾಪೂಜೆ

Spread the love

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಓಂ ಶ್ರೀಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯವರ ಆಶ್ರಯದಲ್ಲಿ 28ನೇ ವರ್ಷದ ಓಂ ಶ್ರೀಅಯ್ಯಪ್ಪ ಸ್ವಾಮಿ ಮಹಾಪೂಜೆ, ಧರ್ಮಸಭೆ, ಅನ್ನಸಂತರ್ಪನೆ, ಹಾಗೂ ದಾನಿಗಳಿಗೆ ಸತ್ಕಾರ ಸಮಾರಂಭ ಡಿ.27ರಂದು ಸ್ಥಳೀಯ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸನ್ನಿದಾನದಲ್ಲಿ ನಡೆಯಲಿದೆ.
ಅಂದು ಮುಂಜಾನೆ 10 ಗಂಟೆಗೆ ಸುತ್ತಲಿನ ಹಲವು ನಗರ ಪಟ್ಟಣ, ಹಳ್ಳಿಗಳಿಂದ ಆಗಮಿಸಿದ ಅಯ್ಯಪ್ಪ ಸ್ವಾಮಿ ಮಾಲಾಧಾರಿ, ಸಂತ, ಶರಣ, ಗಣ್ಯರನ್ನು ಬರಮಾಡಿಕೊಳ್ಳುವದು, ಸಂಜೆ 4 ಗಂಟೆಗೆ ಸುಮಂಗಲೆಯರಿಂದ ಆರತಿ, ಕುಂಭ, ಸಕಲ ವಾದ್ಯ ಮೇಳಗಳೊಂದಿಗೆ ಆನೆಯ ಮೇಲೆ ಅಯ್ಯಪ್ಪಸ್ವಾಮಿ ಮೂರ್ತಿಯೊಂದಿಗೆ ಭವ್ಯ ಮೆರವಣಿಗೆ ಸ್ಥಳೀಯ ಬಸವೇಶ್ವರ ವೃತ್ತದಿಂದ ಅಯ್ಯಪ್ಪಸ್ವಾಮಿ ಸನ್ನಿದಾನದ ತನಕ ಜರುಗಲಿದೆ.
ಸಂಜೆ 6 ಗಂಟೆಗೆ ಅಗ್ನಿಪೂಜೆ, ಮಾಲಾದಾರಿಗಳಿಂದ ಬೆಂಕಿ ಪಾದ ನಡೆಯುವುದು, ಸಂಜೆ 6:30ಗಂಟೆಗೆ ಅಯ್ಯಪ್ಪ ಸ್ವಾಮಿ ಮಹಾಪೂಜೆ, ಮಹಾಭಿಷೇಕ ನಡೆದು, 7 ಗಂಟೆಗೆ ಧರ್ಮಸಭೆ, ದಾನಿಗಳಿಗೆ ಸತ್ಕಾರ ಸಮಾರಂಭ ಹಾಗೂ ರಾತ್ರಿ 8 ಗಂಟೆಗೆ ಮಹಾಪ್ರಸಾದ ನಡೆಯಲಿದೆ.
ಸುಕ್ಷೇತ್ರ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ದಿವ್ಯ ಸಾನಿಧ್ಯ, ಮಮದಾಪೂರದ ಮೌನಮಲ್ಲಿಕಾರ್ಜುನ ಸ್ವಾಮೀಜಿ, ಭಾಗೋಜಿಕೊಪ್ಪದ ಡಾ.ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ, ಸುಣಧೋಳಿಯ ಅಭಿನವ ಶಿವಾನಂದ ಸ್ವಾಮೀಜಿ, ಕಡಕೋಳದ ಸಿದ್ದರಾಯ ಅಜ್ಜನವರು, ಈರಯ್ಯ ಹಿರೇಮಠ, ಸಂಗಯ್ಯ ಹಿರೇಮಠ, ಹನುಮಂತ ವಡೇರ, ಮುತ್ತೆಪ್ಪ ವಡೇರ ನೇತೃತ್ವ, ಸ್ಥಳೀಯ ಹಾಗೂ ಸುತ್ತಲಿನ ಹಲವು ನಗರ, ಪಟ್ಟಣ, ಹಳ್ಳಿಗಳ ನೂರಾರು ಜನ ಅಯ್ಯಪ್ಪ ಸ್ವಾಮಿ ಮಾಲಾಧಾರಿ ಗುರುಸ್ವಾಮಿಗಳ ಸಮ್ಮುಖ ವಹಿಸಲಿದ್ದಾರೆ.
ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟ ಅಧ್ಯಕ್ಷ ಮತ್ತು ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ, ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಸಮಾರಂಭ ಉದ್ಘಾಟನೆ, ತಾಪಂ ಮಾಜಿ ಸದಸ್ಯ ಬಸವಂತ ಕೋಣಿ ಅಧ್ಯಕ್ಷತೆ, ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯಾಧ್ಯಕ್ಷ ರಾಜೇಂದ್ರ ಸಣ್ಣಕ್ಕಿ, ತಾಪಂ ಮಾಜಿ ಸದಸ್ಯ ಲಕ್ಷ್ಮಣ ನೀಲಣ್ಣವರ, ಗ್ರಾಪಂ ಅಧ್ಯಕ್ಷೆ ಯಲ್ಲವ್ವ ಚಂದರಗಿ, ಸಾಂವಕ್ಕ ಬಾಣಸಿ ಜ್ಯೊತಿ ಪ್ರಜ್ವಲಿಸಲಿದ್ದಾರೆ.
ಸ್ಥಳೀಯ ಬೀರಸಿದ್ಧೇಶ್ವರ ಕಮಿಟಿ ಅಧ್ಯಕ್ಷ ಸುಭಾಷ ಕರೆಣ್ಣವರ ಸೇರಿದಂತೆ ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಜಿಪಂ, ತಾಪಂ, ಗ್ರಾಪಂ ಮಾಜಿ ಮತ್ತು ಹಾಲಿ ಅಧ್ಯಕ್ಷರು, ಸದಸ್ಯರು, ವಿವಿಧ ಸಂಘಗಳ ಅಧ್ಯಕ್ಷರು, ಸದಸ್ಯರು, ಗಣ್ಯರು, ಸಂತ ಶರಣರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಇಲ್ಲಿಯ ಓಂ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಪ್ರಕಟನೆಯಲ್ಲಿ ತಿಳಿಸಿದೆ.


Spread the love

About inmudalgi

Check Also

ತಮ್ಮ ಮಗುವಿಗೆ ತಪ್ಪದೇ ಪೋಲಿಯೊ ಹನಿ ಹಾಕಿಸಿ : ಲಕ್ಷ್ಮಣ ಚಂದರಗಿ

Spread the love ತಮ್ಮ ಮಗುವಿಗೆ ತಪ್ಪದೇ ಪೋಲಿಯೊ ಹನಿ ಹಾಕಿಸಿ : ಲಕ್ಷ್ಮಣ ಚಂದರಗಿ ಬೆಟಗೇರಿ:ನಿಮ್ಮ ಮನೆಯಲ್ಲಿರುವ ಐದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ