Breaking News
Home / ಬೆಳಗಾವಿ / ವಸತಿ ಸಹಿತ ಉಚಿತ ಶಿಕ್ಷಣಕ್ಕಾಗಿ ಯಶಸ್ವಿಯಾಗಿ ನಡೆದ ಸ್ಪರ್ಧಾತ್ಮಕ ಪರೀಕ್ಷೆ

ವಸತಿ ಸಹಿತ ಉಚಿತ ಶಿಕ್ಷಣಕ್ಕಾಗಿ ಯಶಸ್ವಿಯಾಗಿ ನಡೆದ ಸ್ಪರ್ಧಾತ್ಮಕ ಪರೀಕ್ಷೆ

Spread the love

ವರದಿ: ಅಡಿವೇಶ ಮುಧೋಳ.
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಬೆಟಗೇರಿ ಕೃಷ್ಣಶರ್ಮ ಚೈತನ್ಯ ಶಾಲೆಯಲ್ಲಿ ಅಕ್ಷರದಾಸೋಹಿ ದಿ. ಎಸ್.ಎಸ್.ಹೊರಟ್ಟಿ ವಿದ್ಯಾ ವಿಕಾಸ ಪ್ರತಿಷ್ಠಾನದ ಅಡಿಯಲ್ಲಿ ವಸತಿ ಸಹಿತ ಉಚಿತ ಶಿಕ್ಷಣದ ಸ್ಪರ್ಧಾತ್ಮಕ ಪರೀಕ್ಷೆ ರವಿವಾರ ಮಾ.8ರಂದು ಯಶಸ್ವಿಯಾಗಿ ಜರುಗಿತು.
ವಸತಿ ಸಹಿತ ಉಚಿತ ಶಿಕ್ಷಣಕ್ಕಾಗಿ ಪ್ರಸ್ತುತ 3 ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈ ಸ್ಪರ್ಧಾತ್ಮಕ ಪರೀಕ್ಷೆ ಹಮ್ಮಿಕೊಳ್ಳಲಾಯಿತು. ಬೆಳಗಾವಿ, ಬಾಗಲಕೋಟ, ವಿಜಯಪುರ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಿಂದ ಸುಮಾರು 600ಕ್ಕೂ ಅಧಿಕ 3 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು ಈ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಿದ್ದರು.
ಈ ಪರೀಕ್ಷೆಯಲ್ಲಿ ಆಯ್ಕೆಗೊಂಡ ವಿದ್ಯಾರ್ಥಿಗಳಿಗೆ 4 ಮತ್ತು 5 ನೇ ತರಗತಿಗೆ 2 ವರ್ಷ ಕನ್ನಡ ಮಾಧ್ಯಮದಲ್ಲಿ ಸಂಪೂರ್ಣ ವಸತಿ ಸಹಿತ ಉಚಿತ ಶಿಕ್ಷಣ ನೀಡಲಾಗುವುದು ಎಂದು ಪ್ರತಿಷ್ಠಾನದ ಆಯೋಜಕ ಸಮಿತಿ ಸಂಚಾಲಕ ರವಿ ಭರಮನಾಯ್ಕ ತಿಳಿಸಿದರು. ಈ ವೇಳೆ ಅಪಾರ ಸಂಖ್ಯೆಯಲ್ಲಿ ವಿದ್ಯಾರ್ಥಿ ಪಾಲಕರು ಶಾಲಾ ಮಕ್ಕಳು, ನಾಗರಿಕರು ಇದ್ದರು.
ಸ್ಪರ್ಧಾತ್ಮಕ ಪರೀಕ್ಷೆ ಬರೆದು ಪರೀಕ್ಷಾ ಕೊಠಡಿಯಿಂದ ಹೊರ
ಬರುತ್ತಿರುವ ಶಾಲಾ ಮಕ್ಕಳು.


Spread the love

About inmudalgi

Check Also

ಫೆ. 19ರಿಂದ ಹೊನಕುಪ್ಪಿ ಚಂದ್ರಮ್ಮಾದೇವಿ ಜಾತ್ರೆ

Spread the loveಮೂಡಲಗಿ: ‘ಮೂಡಲಗಿ ತಾಲ್ಲೂಕಿನ ಹೊನಕುಪ್ಪಿಯ ಚಂದ್ರಮ್ಮಾದೇವಿ ಜಾತ್ರೆಯು ಫೆ. 19ರಿಂದ ಫೆ. 23ರ ವರೆಗೆ ಜರುಗಲಿದ್ದು, ಜಾತ್ರೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ