ವರದಿ: ಅಡಿವೇಶ ಮುಧೋಳ.
ಬೆಟಗೇರಿ:ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಪ್ರತಿ ವರ್ಷ ನೀಡುವ ಜಿಲ್ಲಾ ಮಟ್ಟದ ಅತ್ಯುತ್ತಮ ಸಂಘಗಳ ವಿಭಾಗದಲ್ಲಿ ಸನ್ 2025-26ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಸಂಘÀÀವೆಂದು ಗುರುತಿಸಿ ಚಾಂಪಿಯನ್ ಪ್ರಶಸ್ತಿಯನ್ನು ಗೋಕಾಕ ತಾಲೂಕಿನ ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘ ಪಡೆದುಕೊಂಡಿದೆ.
ಜು.20ರಂದು ನಡೆದ ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ 2025-26ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ ಮಹಾ ಸಭೆಯಲ್ಲಿ ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹಾಗೂ ಸದಸ್ಯರು,ಪದಾಧಿಕಾರಿಗಳು ಗೋಕಾಕ ತಾಲೂಕಿನ ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿ ಅಧ್ಯಕ್ಷ ಮಹಾದೇವ ಕಂಬಿ ಮತ್ತು ಮುಖ್ಯ ಕಾರ್ಯನಿರ್ವಾಹಕ ನಿಂಗಪ್ಪ ನೀಲಣ್ಣವರ ಹಾಗೂ ಸದಸ್ಯರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಸಂಘÀÀವೆಂದು ಚಾಂಪಿಯನ್ ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು.
ಬಾಕ್ಸ್ ಐಟಮ್: ಐದು ಬಾರಿ ಚಾಂಪಿಯನ್ ಪ್ರಶಸ್ತಿ: ಗೋಕಾಕ ತಾಲೂಕಿನ ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘ ಸನ್ 2017, 2018, 2019,2024, 2026 ಸಾಲಿನಲ್ಲ್ಲಿ ಜಿಲ್ಲಾ ಮಟ್ಟದ ಅತ್ಯುತ್ತಮ ಸಂಘÀÀವೆಂದು ಗುರುತಿಸಿ ಚಾಂಪಿಯನ್ ಪ್ರಶಸ್ತಿಯನ್ನು ಪಡೆದು ಬೆಳಗಾವಿ ಜಿಲ್ಲೆಯಲ್ಲಿಯೇ ಹಲವು ಬಾರಿ ಚಾಂಪಿಯನ್ ಸ್ಥಾನಮಾನ ಗಳಿಸಿಕೊಂಡಿದೆ. ಅಲ್ಲದೇ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ವತಿಯಿಂದ ಸನ್2024ರಲ್ಲಿ ಶ್ರೇಷ್ಠ ಸಹಕಾರಿ ಸಂಘ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಗೋಕಾಕ ತಾಲೂಕಾ ಮಟ್ಟದ ಅತ್ಯುತ್ತಮ ಸಂಘವೆಂದು ಹಲವಾರು ಸಲ ಸತತ ಪ್ರಥಮ ಪ್ರಶಸ್ತಿಗಳನ್ನು ಕೊಂಡಿದೆ. ಹೀಗಾಗಿ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಕ್ಷೇತ್ರದಲ್ಲಿ ತನ್ನದೇ ಚಾಂಪಿಯನ್ ಸ್ಥಾನ ಉಳಿಸಿಕೊಂಡು ಸಾಗಿದೆ.
ಈ ವೇಳೆ ಸ್ಥಳೀಯ ಸಂಘದ ಅಧ್ಯಕ್ಷ ಮಹಾದೇವ ಕಂಬಿ, ಯಲ್ಲಾಲಿಂಗ ದೇಯಣ್ಣವರ, ಅರ್ಜುನ ಬ್ಯಾಗಿ, ಮಹಾದೇವ ಮಾಳೇದ, ಬಸಪ್ಪ ತೋಟಗಿ,ಶಿವಪ್ಪ ಬಳಿಗಾರ, ಮುಖ್ಯ ಕಾರ್ಯನಿರ್ವಾಹಕ ನಿಂಗಪ್ಪ ನೀಲಣ್ಣವರ, ಡಾ. ವೀರಣ್ಣ ಕೌಜಲಗಿ, ಗೋಪಾಲ ಭಂಡಾರ, ಅಡಿವೆಪ್ಪ ಮುರಗೋಡ, ಬೀರಪ್ಪ ಬಿರಾದಾರ ಪಾಟೀಲ, ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು, ಸಿಬ್ಬಂದಿ ವರ್ಗ, ವಿವಿಧ ತಾಲೂಕಾ ಮಟ್ಟದ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಆಡಳಿತ ಮಂಡಳಿ ಅಧ್ಯಕ್ಷರು,ಸದಸ್ಯರು, ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿ ಸದಸ್ಯರು ಹಾಗೂ ಸಹಕಾರಿ ಧುರೀಣರು, ಗಣ್ಯರು, ಮತ್ತೀತರರು ಇದ್ದರು.
IN MUDALGI Latest Kannada News