ಬೆಟಗೇರಿ:ಯಾರೂ ದೌರ್ಜನ್ಯ, ಶೋಷನೆಗೆ ಒಳಗಾಗಬಾರದು ಎಂಬ ಉದ್ಧೇಶದಿಂದ ಸರ್ಕಾರ ಹಲವು ಕಾರ್ಯಕ್ರಮಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ. ಸಾರ್ವಜನಿಕರು ಇದರ ಸದುಪಯೋಗಪಡೆದುಕೊಳ್ಳಬೇಕು ಎಂದು ಬೆಟಗೇರಿ ಗ್ರಾಮ ಪಂಚಾಯತಿ ಪಿಡಿಒ ಎಚ್.ಎನ್.ಭಾವಿಕಟ್ಟಿ ಹೇಳಿದರು.
ಬೆಳಗಾವಿ ಜಿಪಂ, ಗೋಕಾಕ ತಾಪಂ ಹಾಗೂ ಬೆಟಗೇರಿ ಗ್ರಾಮ ಪಂಚಾಯತಿ ಸಹಯೋಗದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೊಜನೆಯಡಿಯಲ್ಲಿ ದೌರ್ಜನ್ಯ ಮುಕ್ತಿ ಅಭಿಯಾನದ ಪ್ರಯುಕ್ತ ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯ ಮಕ್ಕಳಿಂದ ಇತ್ತೀಚೆಗೆ ಹಮ್ಮಿಕೊಂಡ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಸ್ಥಳೀಯ ಗ್ರಾಪಂ ಗ್ರಂಥಾಲಯ ಮೇಲ್ವಿಚಾರಕ ಬಸವರಾಜ ಪಣದಿ ಪ್ರಾಸ್ತಾವಿಕವಾಗಿ ಮಾತನಾಡಿದ ಬಳಿಕ ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯ ಮಕ್ಕಳಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಜಾಗೃತಿ ಜಾಥಾ ಕಾರ್ಯಾಕ್ರಮ ನಡೆಯಿತು.
ಗ್ರಾಪಂ ಕಾರ್ಯದರ್ಶಿ ಗೌಡಪ್ಪ ಮಾಳೇದ, ಸುರೇಶ ಬಾಣಸಿ, ಉಭಯ ಕನ್ನಡ ಶಾಲೆಗಳ ಮುಖ್ಯ ಶಿಕ್ಷಕರಾದ ವೈ.ಸಿ.ಶೀಗಿಹಳ್ಳಿ, ಆರ್.ಬಿ.ಬೆಟಗೇರಿ, ವಿಠಲ ಚಂದರಗಿ, ಶಿವಪ್ಪ ಐದುಡ್ಡಿ, ತುಕಾರಾಮ ಕುರಿ, ಮಂಜು ಕಂಬಿ, ಗ್ರಾಪಂ ಅಧ್ಯಕ್ಷರು, ಸದಸ್ಯರು, ಸಿಬ್ಬಂದಿ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರು, ಶಾಲಾ ಶಿಕ್ಷಕರು, ಗ್ರಾಮಸ್ಥರು, ಇದ್ದರು.
