ಬೆಟಗೇರಿ: ಅರಭಾಂವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಈಚೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿದರು.
ಈ ವೇಳೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೈನುಗಾಗಾರಿಕೆ ಸಮಸ್ಯೆಗಳ ಕುರಿತು ಸ್ಥಳೀಯ ರೈತರ ಜೋತೆಗೆ ಚರ್ಚಿಸಿ, ಇಲ್ಲಿಯ ಹಾಲು ಉತ್ಪಾದಕರ ಸಹಕಾರಿ ಸಂಘದ ಪ್ರಗತಿ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಸಂಘದ ಮುಖ್ಯಕಾರ್ಯನಿರ್ವಾಹಕ ನಿಂಗಪ್ಪ ನೀಲಣ್ಣವರ, ಸಿಬ್ಬಂದಿ, ರೈತರು, ಗ್ರಾಹಕರು ಇದ್ದರು.
