ವಿಶ್ವದಲ್ಲಿಯೇ ಶ್ರೀಮಂತ ಭಾಷೆ ಕನ್ನಡ: ಪಿಡಿಒ ಎಚ್.ಎನ್.ಭಾವಿಕಟ್ಟಿ
ಬೆಟಗೇರಿ: ಪ್ರತಿಯೊಬ್ಬರೂ ನಮ್ಮ ನಾಡಿನ ಭಾಷೆ, ನೆಲ, ಸಂಸ್ಕøತಿ, ಸಾಹಿತ್ಯದ ಬಗ್ಗೆ ಅಭಿರುಚಿ, ಅಭಿಮಾನ ಬೆಳಸಿಕೊಳ್ಳಬೇಕು ಎಂದು ಬೆಟಗೇರಿ ಗ್ರಾಮ ಪಂಚಾಯತಿ ಪಿಡಿಒ ಎಚ್.ಎನ್.ಭಾವಿಕಟ್ಟಿ ಹೇಳಿದರು.
ಬೆಟಗೇರಿ ಗ್ರಾಮದ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಸೋಮವಾರ ನ.1ರಂದು ನಡೆದ 66ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಾಯಿ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ ಮಾತನಾಡಿ, ವಿಶ್ವದಲ್ಲಿಯೇ ಶ್ರೀಮಂತ ಭಾಷೆ ಕನ್ನಡ, ಕನ್ನಡಕ್ಕೆ ಅದರದೇಯಾದ ಇತಿಹಾಸವಿದೆ. ಎಲ್ಲ ಕ್ಷೇತ್ರದಲ್ಲಿ ಕನ್ನಡ ಬಳಕೆಯಾಗಬೇಕು ಎಂದರು.
ತಾಯಿ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಪಣೆ ನೆರವೇರಿಸಿದ ಬಳಿಕ ಸಿಹಿ ವಿತರಣೆ ಕಾರ್ಯಕ್ರಮ ನಡೆಯಿತು. ಸ್ಥಳೀಯ ಗ್ರಾಪಂ ಗ್ರಂಥಾಲಯ ಮೇಲ್ವಿಚಾರಕ ಬಸವರಾಜ ಪಣದಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಗ್ರಾಪಂ ಕಾರ್ಯದರ್ಶಿ ಗೌಡಪ್ಪ ಮಾಳೇದ, ಬಸವರಾಜ ದೇಯಣ್ಣವರ, ರಮೇಶ ನೀಲಣ್ಣವರ, ಸುರೇಶ ಬಾಣಸಿ, ವಿಠಲ ಚಂದರಗಿ, ಶಿವಪ್ಪ ಐದುಡ್ಡಿ, ಈರಣ್ನ ದಂಡಿನ, ಗ್ರಾಪಂ ಸದಸ್ಯರು, ಸಿಬ್ಬಂದಿ, ಗ್ರಾಮಸ್ಥರು, ಇದ್ದರು.
IN MUDALGI Latest Kannada News