ಶಾಲೆಯ ರಕ್ಷಣಾ ಗೋಡೆ ನಿರ್ಮಾಣ ಕಾಮಗಾರಿ ವೀಕ್ಷಣೆ ಪಿಡಿಒ ಎಚ್.ಎನ್.ಭಾವಿಕಟ್ಟಿ
ಬೆಟಗೇರಿ:ಗ್ರಾಮದ ಪತ್ರೇಪ್ಪನ ತೋಟದ ಸರ್ಕಾರಿ ಕಿರಿಯ ಪ್ರಾಥಮಿಕ ಕನ್ನಡ ಶಾಲೆಯ ಆವರಣದ ನೂತನ ರಕ್ಷಣಾ ಗೋಡೆ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಬೆಟಗೇರಿ ಗ್ರಾಮ ಪಂಚಾಯತಿ ಪಿಡಿಒ ಎಚ್.ಎನ್.ಭಾವಿಕಟ್ಟಿ ಇತ್ತೀಚೆಗೆ ವೀಕ್ಷಣೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದರು.
ಬೆಟಗೇರಿ ಗ್ರಾಮ ಪಂಚಾಯತಿ ಸಹಯೋಗದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಸುಮಾರು 3.25ಲಕ್ಷ ರೂ.ಗಳ ಅನುದಾನದಡಿಯಲ್ಲಿ ಸ್ಥಳೀಯ ಪತ್ರೇಪ್ಪನ ತೋಟದ ಸಕಿಪ್ರಾ ಕನ್ನಡ ಶಾಲೆಯ ಆವರಣದ ರಕ್ಷಣಾ ನೂತನ ಗೋಡೆ ನಿರ್ಮಾಣ ಕಾಮಗಾರಿ, ಸುಮಾರು 4.30ಲಕ್ಷ ರೂ.ಗಳ ವೆಚ್ಚದಲ್ಲಿ ಶೌಚಾಲಯ ನೂತನ ಕಟ್ಟಡ ನಿರ್ಮಾಣ ಕಾರ್ಯ ಕೈಗೊಳ್ಳಲಾಗಿದೆ ಎಂದು ಪಿಡಿಒ ಎಚ್.ಎನ್.ಭಾವಿಕಟ್ಟಿ ತಿಳಿಸಿದರು.
ಇಲ್ಲಿಯ ಪತ್ರೇಪ್ಪನ ತೋಟದ ಸರ್ಕಾರಿ ಕಿರಿಯ ಪ್ರಾಥಮಿಕ ಕನ್ನಡ ಶಾಲೆಯ ಮುಖ್ಯ ಶಿಕ್ಷಕ ಬಿ.ಎ.ಕೋಟಿ ಮಾತನಾಡಿ, ಬೆಟಗೇರಿ ಗ್ರಾಪಂ ಆಡಳಿತದ ಸಹಯೋಗದಲ್ಲಿ ಗ್ರಾಪಂ ಅಧ್ಯಕ್ಷರು, ಸದಸ್ಯರು, ಸಿಬ್ಬಂದಿ, ಹಿರಿಯ ನಾಗರಿಕರು, ಸ್ಥಳೀಯರು ಗ್ರಾಮದ ಮತ್ತು ಇಲ್ಲಿಯ ಎಲ್ಲಾ ಸರ್ಕಾರಿ ಪ್ರಾಥಮಿಕ ಕನ್ನಡ ಶಾಲೆಗಳ ಸಮಗ್ರ ಅಭಿವೃದ್ಧಿಗೆ ನೀಡುತ್ತಿರುವ ಸಹಾಯ, ಸಹಕಾರ ಶ್ಲಾಘನೀಯವಾಗಿದೆ ಎಂದರು.
ಸ್ಥಳೀಯ ಗ್ರಾಪಂ ಕಾರ್ಯದರ್ಶಿ ಗೌಡಪ್ಪ ಮಾಳೇದ, ಸುರೇಶ ಬಾಣಸಿ, ವಿಠಲ ಚಂದರಗಿ, ಹನುಮಂತ ಕಟ್ಟಿಮನಿ, ಶ್ರೀಕಂಠಯ್ಯ ಮಠಪತಿ, ಅನುಸೂಯಾ ಸವದತ್ತಿ, ಸರೋಜಾ ಗುಡಸಿ, ಶಿವಪ್ಪ ಐದುಡ್ಡಿ, ಈರಣ್ಣ ದಂಡಿನ, ಮಾರುತಿ ಬಣಜಿಗೇರ, ಗ್ರಾಪಂ ಸದಸ್ಯರು, ಶಾಲೆಯ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರು, ಇತರರು ಇದ್ದರು.