ಬೆಟಗೇರಿ:ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಹಾಗೂ ಮಾರ್ಗದರ್ಶನದಂತೆ ಬೆಟಗೇರಿ ಗ್ರಾಮದಲ್ಲಿ ಈಗಾಗಲೇ ಹಲವಾರು ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಕೌಜಲಗಿ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದರು.
ಬೆಟಗೇರಿ ಗ್ರಾಮದ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲ್ಲಿ ಜ.5ರಂದು 2020-21 ಸಾಲಿನ ಠೇವಣಿ ಸಂಗ್ರಹ ಮೊತ್ತದ ಯೋಜನೆಯ ಸುಮಾರು 31 ಲಕ್ಷ ರೂ.ಗಳ ಅನುದಾನದಡಿಯಲ್ಲಿ ನೂತನ 2 ಶಾಲಾ ಕೊಠಡಿ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಇಲ್ಲಿಯ ಗ್ರಾಮಸ್ಥರಿಗೆ ಅವಶ್ಯಕ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಶ್ಲಾಘನೀಯವಾಗಿದೆ ಎಂದರು.
ಗೋಕಾಕ ಎನ್‍ಎಸ್‍ಎಫ್ ಪ್ರತಿನಿಧಿ ನಿಂಗಪ್ಪ ಕುರಬೇಟ, ಲಕ್ಷ್ಮಣ ನೀಲಣ್ಣವರ, ಎಸ್‍ಡಿಎಂಸಿ ಅಧ್ಯಕ್ಷ ಕುತುಬು ಮಿರ್ಜಾನಾಯ್ಕ, ಈರಯ್ಯ ಹಿರೇಮಠ, ಈಶ್ವರ ಮುಧೋಳ, ಅಶೋಕ ಕೋಣಿ, ಈರಣ್ಣ ಬಳಿಗಾರ, ಶ್ರೀಶೈಲ ಗಾಣಗಿ, ಗುತ್ತಿಗೆದಾರ ಬಿ.ಪಿ.ಕೋಣಿ, ಈರಪ್ಪ ದೇಯಣ್ಣವರ, ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ, ಶಿವಾಜಿ ನೀಲಣ್ಣವರ, ರಾಮಣ್ಣ ಬಳಿಗಾರ, ಪತ್ರೇಪ್ಪ ನೀಲಣ್ಣವರ, ಸ್ಥಳೀಯರು ಇದ್ದರು.
