Breaking News
Home / Recent Posts / ರೈತರು ನಿತ್ಯದ ಕೃಷಿ ಚಟುವಟಿಕೆಗಳ ಜೋತೆಗೆ ಹೈನುಗಾರಿಕೆ ಅಳವಡಿಸಿ

ರೈತರು ನಿತ್ಯದ ಕೃಷಿ ಚಟುವಟಿಕೆಗಳ ಜೋತೆಗೆ ಹೈನುಗಾರಿಕೆ ಅಳವಡಿಸಿ

Spread the love

ಬೆಟಗೇರಿ: ಸ್ಥಳೀಯ ರೈತರು ನಿತ್ಯದ ಕೃಷಿ ಚಟುವಟಿಕೆಗಳ ಜೋತೆಗೆ ಹೈನುಗಾರಿಕೆ ಅಳವಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು. ಕೆಎಂಎಫ್‍ನಿಂದ ಹೈನುಗಾರಿಕೆ ಅಭಿವೃದ್ಧಿಗಾಗಿ ಹಲವಾರು ಸಹಾಯ, ಸೌಲಭ್ಯಗಳಿಗೆವೆ. ರೈತರು ಇವುಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದ ವ್ಯವಸ್ಥಾಪಕ ಡಾ.ವಿ.ಕೆ.ಜೋಶಿ ಹೇಳಿದರು.
ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದ 2021-22ನೇ ಸಾಲಿನ ವಾರ್ಷಿಕ ಸರ್ವಸಾಧಾರಣ ಮಹಾಸಭೆಯಲ್ಲಿ ಮುಖ್ಯಅತಿಥಿಯಾಗಿ ಮಾತನಾಡಿ, ಬೆಳಗಾವಿ ಹಾಲು ಒಕ್ಕೂಟದಿಂದ ಹೈನುಗಾರಿಕೆ ಅಭಿವೃದ್ಧಿಗಾಗಿ ರೈತರಿಗೆ ದೊರಕುವ ವಿವಿಧ ಸಹಾಯ, ಸೌಲಭ್ಯಗಳ ಕುರಿತು ಈ ವೇಳೆ ತಿಳಿಸಿದರು.
ಸಂಘದ ಮುಖ್ಯಕಾರ್ಯನಿರ್ವಾಹಕ ನಿಂಗಪ್ಪ ನೀಲಣ್ಣವರ ವಾರ್ಷಿಕ ವರದಿ ಮಂಡಿಸಿ ಸಂಘವು ಸನ್2021-22ನೇ ಸಾಲಿನಲ್ಲಿ 19,93,170ರೂ.ಗಳ ನಿವ್ವಳ ಲಾಭ ಗಳಿಸಿದೆ. ಸಂಘದ ಶೇರ ಸದಸ್ಯರಿಗೆ ಶೇ20ರಷ್ಟು ಡಿವ್ಹಿಡೆಂಡ್, ಶೇ65ರಷ್ಟು ಒಟ್ಟು 9,22,163ರೂ.ಗಳ ಬೋನಸ್ ಸದಸ್ಯರಿಗೆ ವಿತರಿಸಲಾಗುವದು ಎಂದರು.
ಸಂಘದ ಅಧ್ಯಕ್ಷ ಹನುಮಂತ ಪಾಟೀಲ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಂಘದ ಶೇರ ಸದಸ್ಯರು, ಗ್ರಾಹಕರು, ಗ್ರಾಮದ ಪ್ರಮುಖ ನಾಗರಿಕರ ಜೋತೆ ಆಡಳಿತ ಮಂಡಳಿ ಅಧ್ಯಕ್ಷ ಮತ್ತು ಸದಸ್ಯರು ಸಂಘದ ಸಮಗ್ರ ಪ್ರಗತಿಯ ಕುರಿತು ಹಲವಾರು ವಿಷಯಗಳನ್ನು ಈ ವೇಳೆ ಚರ್ಚಿಸಿದರು.
ಬಹುಮಾನ ವಿತರಣೆ:ಸನ್2021-22ನೇಯ ಸಾಲಿನಲ್ಲಿ ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಆಕಳು ಮತ್ತು ಎಮ್ಮೆ ಹಾಲು ವಿಭಾಗದಲ್ಲಿ ಅತಿ ಹೆಚ್ಚು ಹಾಲು ನೀಡಿದ ಸಂಘದ ಸದಸ್ಯರಿಗೆ ಪ್ರಥಮ, ದ್ವೀತಿಯ, ತೃತೀಯ ಸ್ಥಾನಗಳಿಗೆ ಹಾಗೂ 2ಸಾವಿರ ರೂ ಭೋನಸ್ ಪಡೆದ ಸಂಘದ ಸದಸ್ಯರಿಗೆ ಸ್ಥಳೀಯ ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ತ್ರಾಮದ ಹಾಂಡೆ ಸೇರಿದಂತೆ ಗೃಹೋಪಯೋಗಿ ಉಪಕರಣಗಳನ್ನು ಬಹುಮಾನ ರೂಪದಲ್ಲಿ ನೀಡಿ ಸನ್ಮಾನಿಸಿದರು.
ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದ ಉಪ ವ್ಯವಸ್ಥಾಪಕ ಡಾ.ಆರ್.ಬಿ,ಜಂಬಗಿ, ಬೆಜಿಹಾ ಒಕ್ಕೂಟದ ಗೋಕಾಕ ಘಟಕ ಉಪಕೇಂದ್ರಾಧಿಕಾರಿ ಎಸ್.ಬಿ.ಕರಬಣ್ಣವರ, ಬೀರೇಶ ಖಿಲಾರಿ, ಡಾ.ವಿ.ಎಂ.ಕೌಜಲಗಿ, ಇಲ್ಲಿಯ ಹಾಉಸಸಂಘದ ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿ, ಶೇರ ಸದಸ್ಯರು, ಗ್ರಾಹಕರು, ಇತರರು ಇದ್ದರು.
.


Spread the love

About inmudalgi

Check Also

ಖಾನಟ್ಟಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಉತ್ತಮ ಸಹಕಾರ ಸಂಘ ಪ್ರಶಸ್ತಿ

Spread the loveಮೂಡಲಗಿ : ಬೆಳಗಾವಿ ಜಿಲ್ಲಾ ಉತ್ತಮ ಸಹಕಾರಿ ಸಂಘ ಪ್ರಶಸ್ತಿ  ಬೆಳಗಾವಿಯಲ್ಲಿ ನಡೆದ 71ನೇ ಅಖಿಲ ಭಾರತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ