ಬೆಟಗೇರಿ ಪಿಕೆಪಿಎಸ್ಗೆ 13.86ಲಕ್ಷ ರೂಪಾಯಿ ಲಾಭ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸನ್2022-23ನೇ ಸಾಲಿನ ವಾರ್ಷಿಕ ಸರ್ವಸಾಧಾರಣ ಸಭೆ ಸೆ.25ರಂದು ಸಂಘದ ಕಾರ್ಯಾಲಯದಲ್ಲಿ ನಡೆಯಿತು.
ಸಂಘದ ಮುಖ್ಯಕಾರ್ಯನಿರ್ವಾಹಕ ಅಡಿವೆಪ್ಪ ಮುರಗೋಡ ವಾರ್ಷಿಕ ವರದಿ ಮಂಡಿಸಿ ಮಾತನಾಡಿದ ಅವರು, ಸಂಘವು ಸನ್2022-23ನೇ ಸಾಲಿನಲ್ಲಿ ಸಂಘವು ಒಟ್ಟು 13,86,281 ರೂ.ಗಳ ನಿವ್ವಳ ಲಾಭ ಗಳಿಸಿದೆ. ಸಂಘದ ಶೇರು ಸದಸ್ಯರಿಗೆ ಶೇ5ರಷ್ಟು ಡಿವ್ಹಿಡೆಂಡ್ ವಿತರಿಸಲಾಗುವದು ಎಂದು ತಿಳಿಸಿದರು.
ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಸೋಮಗೌಡ್ರ ಅಧ್ಯಕ್ಷತೆ ವಹಿಸಿದ್ದರು. ನ್ಯಾಯವಾದಿ ಎಂ.ಐ.ನೀಲಣ್ಣವರ ಸಹಕಾರಿ ಸಂಘಗಳ ಪ್ರಗತಿ, ಪ್ರಯೋಜನಗಳ ಕುರಿತು ಮಾತನಾಡಿದರು. ಸಂಘದ ಶೇರ ಸದಸ್ಯರು, ಗ್ರಾಹಕರು, ನಾಗರಿಕರ ಜೊತೆ ಆಡಳಿತ ಮಂಡಳಿ ಸದಸ್ಯರು ಸಂಘದ ಸಮಗ್ರ ಪ್ರಗತಿ, ಸಂಘದಿಂದ ದೊರಕುವ ವಿವಿಧ ಸಾಲ, ಸೌಲಭ್ಯಗಳ ಕುರಿತು ಚರ್ಚಿಸಿದರು.
ಈ ವೇಳೆ ಸಂಘದ ಆಡಳಿತ ಮಂಡಳಿ ಸದಸ್ಯರು, ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಗಣ್ಯರು, ಸಹಕಾರಿ ಮುಖಂಡರು, ಶೇರ ಸದಸ್ಯರು, ಗ್ರಾಹಕರು, ಸಂಘದ ಸಿಬ್ಬಂದಿ ವರ್ಗ, ಇತರರು ಇದ್ದರು.