Breaking News
Home / ತಾಲ್ಲೂಕು (page 208)

ತಾಲ್ಲೂಕು

ಮೂಡಲಗಿಯಲ್ಲಿ ಸಿದ್ಧ ಸಮಾಧಿ ಯೋಗ ಶಿಬಿರ

ಮೂಡಲಗಿ: ಮನುಷ್ಯನ ಮಾನಸಿ, ದೈಹಿಕ ಹಾಗೂ ವಿಚಾರವಂತರಾಗಿಸಲು ಅತ್ಯಂತ ಉಪಯುಕ್ತವಾಗಿರುವ ಸಿದ್ಧ ಸಮಾಧಿ ಯೋಗ ಶಿಬಿರವನ್ನು ನಗರದ ಆರಾಧ್ಯ ದೈವ ಶ್ರೀ ಶಿವಬೋಧ ರಂಗ ಮಠದಲ್ಲಿ ಬೆಂಗಳೂರಿನ ಋಷಿ ಸಂಸ್ಕøತಿ ವಿದ್ಯಾ ಕೇಂದ್ರ ಶಾಖೆ ಮೂಡಲಗಿ ಇವರ ಆಶ್ರಯದಲ್ಲಿ ಏ. 18 ರವಿವಾರ ಸಾಂಯಕಾಲ 6-00 ಗಂಟೆಗೆ ಪರಿಚಯ ಕಾರ್ಯಕ್ರಮ, ಏ. 19 ರಿಂದ ತರಗತಿಗಳು ಪ್ರಾರಂಭವಾಗುವದು. ಯೋಗ ಗುರುಜೀ ಅರುಣ ತಿಕೋಟಿಕರ ಗುರುಜೀ ಆಗಮಿಸಲಿದ್ದಾರೆ ಎಂದು ಸಂಘಟಕರಾದ ಪುಲಕೇಶಿ …

Read More »

ಮಂಗಲ ಅಂಗಡಿ ಪರ ಸಂಸದ ಈರಣ್ಣ ಕಡಾಡಿ ಬಿರುಸಿನ ಪ್ರಚಾರ

ಮಂಗಲ ಅಂಗಡಿ ಪರ ಸಂಸದ ಈರಣ್ಣ ಕಡಾಡಿ ಬಿರುಸಿನ ಪ್ರಚಾರ ಮೂಡಲಗಿ: ವಿಶ್ವಮಾನ್ಯ ನಾಯಕರಾದ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲು ಏ. 17 ರಂದು ಕಮಲ ಗುರ್ತಿಗೆ ತಮ್ಮ ಅಮೂಲ್ಯವಾದ ಮತವನ್ನು ನೀಡಿ ಬಾರಿ ಅಂತರದಿಂದ ಗೆಲ್ಲಿಸಬೇಕೆಂದು ರಾಜ್ಯ ಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಮತದಾರರಲ್ಲಿ ಮನವಿ ಮಾಡಿದರು. ಗುರುವಾರ  ರಂದು ಮೂಡಲಗಿ ನಗರದ ಕರೆಮ್ಮಾ ವೃತ್ತದಿಂದ ಪ್ರಾರಂಭವಾದ …

Read More »

ಪಂಚಮಸಾಲಿ ಮುಖಂಡರಿಂದ ಮುಖ್ಯಮಂತ್ರಿಗೆ ಮನವಿ

ಪಂಚಮಸಾಲಿ ಮುಖಂಡರಿಂದ ಮುಖ್ಯಮಂತ್ರಿಗೆ ಮನವಿ ಮೂಡಲಗಿ – ಪಂಚಮಸಾಲಿ ಸಮುದಾಯಕ್ಕೆ ೨ಎ ಮೀಸಲಾತಿ ಕೇಳುವ ತಮ್ಮ ನ್ಯಾಯಯುತ ಬೇಡಿಕೆ ಬೇಗನೆ ಈಡೇರಿಸಬೇಕೆಂದು ಪಂಚಮಸಾಲಿ ಲಿಂಗಾಯತ ಅಭಿವೃದ್ಧಿ ಸಮಿತಿಯ ವತಿಯಿಂದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು. ಬೆಳಗಾವಿ ಲೋಕಸಭಾ ಉಪಚುನಾವಣೆಯ ಪ್ರಚಾರ ಕಾರ್ಯಕ್ಕಾಗಿ ಆಗಮಿಸಿದ್ದ ಸಿಎಂ ಅವರಿಗೆ ಪಂಚಮಸಾಲಿ ನಿಯೋಗ ಭೇಟಿ ಮಾಡಿ ಮನವಿ ಸಲ್ಲಿಸಿತು. ಕೃಷಿ ಕುಟುಂಬದಿಂದ ಬಂದಿರುವ ಪಂಚಮಸಾಲಿ ಲಿಂಗಾಯತ ಸಮುದಾಯವು ಶೈಕ್ಷಣಿಕ ವಾಗಿ, …

Read More »

ಅರಭಾಂವಿ ಕ್ಷೇತ್ರದಲ್ಲಿ ಬಾಲಚಂದ್ರ ಜಾರಕಿಹೊಳಿಯವರ ಶಕ್ತಿಯಿಂದ ಬಿಜೆಪಿಗೆ ಶೇಕಡಾ 80 ರಷ್ಟು ಮತಗಳು ಲಭಿಸಲಿವೆ – ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ

ಮೂಡಲಗಿ: ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಕಳೆದ ಮೂರ್ನಾಲ್ಕು ದಿನಗಳಿಂದ ಕ್ಷೇತ್ರದಲ್ಲಿ ಬಿಜೆಪಿ ಪ್ರಚಾರ ಕಾರ್ಯದಲ್ಲಿ ತೊಡಗಿರುವದರಿಂದ ಬಿಜೆಪಿಗೆ ಆನೆ ಬಲ ಬಂದಿದ್ದು, ಅರಭಾಂವಿ ಕ್ಷೇತ್ರದಲ್ಲಿ ಬಾಲಚಂದ್ರ ಜಾರಕಿಹೊಳಿಯವರ ಶಕ್ತಿಯಿಂದ ಬಿಜೆಪಿಗೆ ಶೇಕಡಾ 80 ರಷ್ಟು ಮತಗಳು ಲಭಿಸಲಿವೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ವಿಶ್ವಾಸ ವ್ಯಕ್ತಪಡಿಸಿದರು. ಬುಧವಾರ ಸಂಜೆ ಪಟ್ಟಣದ ಬಸವ ಮಂಟಪದಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ ಅಂಗಡಿ ಅವರ ಪ್ರಚಾರಾರ್ಥವಾಗಿ ನಡೆದ ಸಾರ್ವಜನಿಕ …

Read More »

:ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಅವರ ತತ್ವಾರ್ದಶಗಳನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು- ಸುಭಾಷ ಜಂಬಗಿ

ಬೆಟಗೇರಿ:ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಅವರ ತತ್ವಾರ್ದಶಗಳನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಬೆಟಗೇರಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ ಶಿಕ್ಷಣ ಹೋರಾಟ ಸಮಿತಿ ಅಧ್ಯಕ್ಷ ಸುಭಾಷ ಜಂಬಗಿ ಹೇಳಿದರು. ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ ಶಿಕ್ಷಣ ಹೋರಾಟ ಸಮಿತಿ ಸಹಯೋಗದಲ್ಲಿ ಬುಧವಾರ ಏ.14ರಂದು ಸ್ಥಳೀಯ ಅಂಬೇಡ್ಕರ ವೃತ್ತದಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ ಜಯಂತ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಂಬೇಡ್ಕರ ಅವರು ಭಾರತ ದೇಶಕ್ಕೆ ಅಮೂಲ್ಯವಾದ ಕೊಡುಗೆ ನೀಡಿದ ಮಹಾ ಮಾನವತಾವಾದಿಯಾಗಿದ್ದಾರೆ ಎಂದರು. ವಿಜಯ ಹಿರೇಮಠ ಕಾರ್ಯಕ್ರಮದ …

Read More »

ಬೆಟಗೇರಿ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ ಜಯಂತ್ಯೋತ್ಸವ ಕಾರ್ಯಕ್ರಮ

ಬೆಟಗೇರಿ:ಗ್ರಾಮದ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಏ.14ರಂದು ಡಾ.ಬಿ.ಆರ್.ಅಂಬೇಡ್ಕರ ಜಯಂತ್ಯೋತ್ಸವ ಕಾರ್ಯಕ್ರಮ ನಡೆಯಿತು. ಪಿಡಿಒ ಎಚ್.ಎನ್.ಬಾವಿಕಟ್ಟಿ ಅವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರರ ಬದುಕು, ಬರಹದ ಕುರಿತು ಮಾತನಾಡಿದರು. ಗ್ರಾಪಂ ಕಾರ್ಯದರ್ಶಿ ಗೌಡಪ್ಪ ಮಾಳೇದ ಡಾ.ಬಿ ಆರ್ ಅಂಬೇಡ್ಕರ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಚಣೆ ನೆರವೇರಿಸಿದ ಬಳಿಕ ಸಿಹಿ ವಿತರಿಸಿದರು. ಬಸವರಾಜ ಪಣದಿ, ಸುರೇಶ ಬಾಣಸಿ, ಶಿವಾನಂದ ಐದುಡ್ಡಿ, ವಿಠಲ ಚಂದರಗಿ, ಬಸವರಾಜ ದೇಯಣ್ಣವರ, ಹನುಮಂತ ಆನೆಗುಂದಿ ಸೇರಿದಂತೆ ಗ್ರಾಪಂ ಸಿಬ್ಬಂದಿ, ಗ್ರಾಮಸ್ಥರು ಇದ್ದರು.

Read More »

ಬುದ್ದ, ಬಸವ, ಅಂಬೇಡ್ಕರ ಅವರ ವಿಚಾರಧಾರೆಗಳು ತ್ವಾದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಗೌರವಯುತ ಜೀವನ ಸಾಗಿಸಲು ಸಾಧ್ಯ-ರಮೇಶ ಸಣ್ಣಕ್ಕಿ

ಮೂಡಲಗಿ: ಬುದ್ದ, ಬಸವ, ಅಂಬೇಡ್ಕರ ಅವರ ವಿಚಾರಧಾರೆಗಳು ತ್ವಾದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಗೌರವಯುತ ಜೀವನ ಸಾಗಿಸಲು ಸಾಧ್ಯ ಎಂದು ಸ್ಥಳೀಯ ಡಿಎಸ್.ಎಸ್ ಜಿಲ್ಲಾ ಸಂಚಾಲಕ ಮತ್ತು ಮೂಡಲಗಿ ಪುರಸಭೆ ಮಾಜಿ ಸದಸ್ಯ ರಮೇಶ ಸಣ್ಣಕ್ಕಿ ಹೇಳಿದರು. ಇಲ್ಲಿಯ ಶೀವಬೋಧರಂಗ ಮಠದ ರಸ್ತೆಯಲ್ಲಿರುವ ಅಂಬೇಡ್ಕರ ಭವನದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಹಾಗೂ ಮೂಡಲಗಿ ತಾಲೂಕಿನ ವಿವಿಧ ದಲಿತ ಸಂಘಟನೆಗಳ ಆಶ್ರಯದಲ್ಲಿ ಜರುಗಿದ ಮಹಾನಾಯಕ ಡಾ:ಬಾಬಾಸಾಹೇಬ …

Read More »

ಮಂಗಳಾ ಅಂಗಡಿ ಅವರನ್ನು ಬೆಂಬಲಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ.

ಮಂಗಳಾ ಅಂಗಡಿ ಅವರನ್ನು ಬೆಂಬಲಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ. ಗೋಕಾಕ: ದೇಶದಾಧ್ಯಂತ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ಸಾರಥ್ಯದಲ್ಲಿ ಬಿಜೆಪಿಯ ಕಮಲ ಅರಳಿದ್ದು, ರಾಷ್ಟ್ರದ ಪ್ರಗತಿಯ ಹಿತದೃಷ್ಟಿಯಿಂದ ಹಾಗೂ ಬೆಳಗಾವಿ ಕ್ಷೇತ್ರದ ಸರ್ವತೋಮುಖ ಅಭಿವೃದ್ದಿಗಾಗಿ ಬಿಜೆಪಿ ಬೆಂಬಲಿಸಿ ಕೇಂದ್ರ ಸಚಿವರಾಗಿದ್ದ ದಿ. ಸುರೇಶ ಅಂಗಡಿ ಧರ್ಮಪತ್ನಿ ಮಂಗಳಾ ಅಂಗಡಿಯವರಿಗೆ ಆಶೀರ್ವಾದ ಮಾಡುವಂತೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮತದಾರರಲ್ಲಿ …

Read More »

ರಾಜಕೀಯ ಕ್ಷೇತ್ರದಲ್ಲಿ ಅಚ್ಚಳಿಯದ ದೃವತಾರೆ ಡಾ. ಅಂಬೇಡ್ಕರ- ಸಂಸದ ಈರಣ್ಣ ಕಡಾಡಿ

ರಾಜಕೀಯ ಕ್ಷೇತ್ರದಲ್ಲಿ ಅಚ್ಚಳಿಯದ ದೃವತಾರೆ ಡಾ. ಅಂಬೇಡ್ಕರ- ಸಂಸದ ಈರಣ್ಣ ಕಡಾಡಿ ಮೂಡಲಗಿ: ಸಾಮಾಜಿಕ, ಶೈಕ್ಷಣಿಕ ಮತ್ತು ರಾಜಕೀಯ ಕ್ಷೇತ್ರದಲ್ಲಿ ಅಚ್ಚಳಿಯದ ದೃವತಾರೆ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ ಅವರು ಸಮಾಜದ ಅಭಿವೃದ್ಧಿಗಾಗಿ ಶ್ರಮಿಸಿದ್ದಾರೆ ಎಂದು ರಾಜ್ಯ ಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು. ಬುಧವಾರ (ಏ.14) ರಂದು ಕಲ್ಲೋಳಿ ಪಟ್ಟಣದ ಸಂಸದರ ಜನಸಂಪರ್ಕ ಕಾರ್ಯಾಲಯದಲ್ಲಿ ಡಾ. ಬಿ.ಆರ್. ಅಂಬೇಡ್ಕರ …

Read More »

ಡಾ. ಬಿ.ಆರ್.ಅಂಬೇಡ್ಕರ ರವರ 130ನೇ ಜಯಂತಿ

ಮೂಡಲಗಿ : ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಡಾ. ಬಿ.ಆರ್.ಅಂಬೇಡ್ಕರ ರವರ 130ನೇ ಜಯಂತಿಯನ್ನು ಆಚರಣೆ ಮಾಡಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಎ.ಪಿ.ಪರಸನ್ನರ, ದೈಹಿಕ ಶಿಕ್ಷಣ ಪರಿವೀಕ್ಷಕ ಕರಿಬಸವರಾಜು.ಟಿ, ಶಿಕ್ಷಣ ಸಂಯೋಜಕ ಸತೀಶ ಬಿ.ಎಸ್. ಮತ್ತು ಕಛೇರಿ ಸಿಬ್ಬಂದಿ ಹಾಜರಿದ್ದರು.

Read More »