Breaking News
Home / ತಾಲ್ಲೂಕು (page 97)

ತಾಲ್ಲೂಕು

ಸಿ ಎ ಪರೀಕ್ಷೆಯಲ್ಲಿ ಉತ್ತೀರ್ಣ, ಬಡ ಕುಟುಂಬದ ಯುವಕನ ಸಾಧನ.

  ಮೂಡಲಗಿ: ಕಠಿನ ಪರೀಕ್ಷೆಗಳಲ್ಲಿ ಒಂದಾದ ಚಾರ್ಟೆಡ್ ಅಕೌಂಟೆಂಟ್ ಆಪ್ ಇಂಡಿಯಾ ಪರೀಕ್ಷೆಯಲ್ಲಿ ತಾಲೂಕಿನ ಪಟಗುಂದಿ ಗ್ರಾಮದ ಬಡ ಕುಟುಂಬದಲ್ಲಿ ಜನಿಸಿದ ಬಾಹುಬಲಿ ಅಣ್ಣಪ್ಪ ಹೊಸಮನಿ ಅವರು ಉತ್ತಮ ದರ್ಜೆಯಲ್ಲಿ ಉತ್ತೀರ್ಣವಾಗಿ ಗ್ರಾಮದ ಕೀರ್ತಿ ತಂದಿದ್ದಾರೆ.ಪ್ರೌಡ ಹಾಗೂ ಬಿ ಕಾಮ್ ಪದವಿ ಶಿಕ್ಷಣವನ್ನು ಮೂಡಲಗಿಯ ಎಮ್ ಇ ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪೊರೈಸಿ ಯಾವುದೇ ತರಬೇತಿ ಪಡೆಯದೇ ನಾಲ್ಕು ವರ್ಷ ಕಠಿನ ಪರಿಶ್ರಮದಿಂದ ಸತತ ಅದ್ಯಯನದಲ್ಲಿ ತೊಡಗಿ ಅಂತಿಮ ಪರೀಕ್ಷೆಯಲ್ಲಿ …

Read More »

ರೈತರಿಗೆ ಮೇವು ಕತ್ತರಿಸುವ ಯಂತ್ರ ಹಾಗೂ ಮ್ಯಾಟ್‍ಗಳನ್ನು ವಿತರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ರಾಸು ವಿಮೆ ಸೇರಿ ಒಟ್ಟು 7.35 ಲಕ್ಷ ರೂ.ಗಳ ಚೆಕ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

  ಗೋಕಾಕ: ಕೆಎಂಎಫ್‍ನಿಂದ ರೈತ ಸಮುದಾಯಕ್ಕೆ ಸಾಕಷ್ಟು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರೈತ ವೃಂದಕ್ಕೆ ಕರೆ ನೀಡಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಜಿಲ್ಲಾ ಹಾಲು ಒಕ್ಕೂಟದಿಂದ ನಡೆದ ರಾಸು ವಿಮೆಗಳ ಚೆಕ್ ವಿತರಿಸಿ ಮಾತನಾಡಿದ ಅವರು, ರೈತರ ಆರ್ಥಿಕ ಅಭಿವೃದ್ಧಿಗಾಗಿಯೇ ಕೆಎಂಎಫ್ ಬದ್ಧವಿದ್ದು ರೈತರಿಗೆ ಬೇಕಾಗಿರುವ ಎಲ್ಲ ಸೌಲತ್ತುಗಳನ್ನು ನೀಡುತ್ತಿದೆ ಎಂದು ಹೇಳಿದರು. ರೈತರಿಗೆ …

Read More »

ಕಿನ್ನಾಳ ಕಲೆ ಎಂಬುದು ವಿಜಯನಗರ ಸಾಮ್ರಾಜ್ಯದ ಕಾಲದಿಂದ ಇಂದಿನವರೆಗೂ ತನ್ನ ಮೂಲ ಸ್ವರೂಪವನ್ನೇ ಉಳಿಸಿಕೊಂಡು ಬಂದಿದ್ದೆ

ಕೊಪ್ಪಳ : ಕಿನ್ನಾಳ ಕಲೆ ಎಂಬುದು ವಿಜಯನಗರ ಸಾಮ್ರಾಜ್ಯದ ಕಾಲದಿಂದ ಇಂದಿನವರೆಗೂ ಕೊಂಚವೂ ಬದಲಾಗದೇ ತನ್ನ ಮೂಲ ಸ್ವರೂಪವನ್ನೇ ಉಳಿಸಿಕೊಂಡು ಬಂದಿರುವುದು ಹೆಮ್ಮೆಯ ವಿಷಯವಾಗಿದೆ. ಇದೊಂದು ಅಪರೂಪದ ಕಲೆಯಾಗಿದ್ದು ಜಗತ್ಪಪ್ರಸಿದ್ಧವಾದುದಾಗಿದೆ.ವಿಜಯನಗರ ಸಾಮ್ರಾಜ್ಯ ಅಳಿದಮೇಲೆ ಅಲ್ಲಿಂದ ಪಲಾಯನ ಮಾಡಿದ ಹಲವರಲ್ಲಿ ಕೆಲ ಕಲಾವಿದರು ಕಿನ್ನಾಳಿಗೆ ವಲಸೆ ಬಂದರು. ಹಾಗೆ ಬಂದವರಲ್ಲಿ ಸಂಜೀವಪ್ಪರೆಂಬುವರು ಒಬ್ಬರು. ಇಲ್ಲಿಯ ದೇಸಾಯಿಯವರ ಆಶ್ರಯ ದೊರೆತು ಇಲ್ಲಿಯೇ ನೆಲೆ ನಿಂತರು. ಹೀಗೆ ಕಿನ್ನಾಳಿಗೆ ಬಂದ ಈ ಕಲಾವಿದರು ಅಂದಿನಿoದ …

Read More »

*ಅಮೃತ ಸ್ವ ಸಹಾಯ ಕಿರು ಉದ್ದಿಮೆಗಳಿಗೆ 45 ಲಕ್ಷ ರೂ ಬೀಜ ಧನದ ಚೆಕ್ ವಿತರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* *ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಹೆಚ್ಚಿನ ಒತ್ತು : ಶಾಸಕ ಬಾಲಚಂದ್ರ ಜಾರಕಿಹೊಳಿ.*

ಮೂಡಲಗಿ: ಮಹಿಳಾ ಸಂಘಗಳ ಆದಾಯ ಉತ್ಪನ್ನ ಚಟುವಟಿಕೆಗಳನ್ನು ನಡೆಸಿ ಅವರ ಸ್ವಾವಲಂಬಿ ಬದುಕನ್ನು ಉತ್ತೇಜಿಸಿ, ಸ್ವ-ಸಹಾಯ ಸಂಘಗಳನ್ನು ಕಿರು ಉದ್ಯಮಿಗಳನ್ನಾಗಿಸುವ ಅಮೃತ ಯೋಜನೆ ಅಡಿ 45 ಸಂಘಗಳಿಗೆ ತಲಾ ಒಂದು ಲಕ್ಷ ರೂ ಗಳಂತೆ ಸಹಾಯ ಧನವನ್ನು ನೀಡಲಾಗುತ್ತಿದ್ದು, ಈ ಸಹಾಯ ಧನವನ್ನು ಸದ್ಭಳಕೆ ಮಾಡಿಕೊಂಡು ಆರ್ಥಿಕ ಮಟ್ಟವನ್ನು ದ್ವಿಗುಣಗೊಳಿಸುವಂತೆ ಕೆ.ಎಂ.ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮಹಿಳಾ ಸಂಘಗಳಿಗೆ ಕರೆ ನೀಡಿದರು. ಬುಧವಾರದಂದು ಪಟ್ಟಣದ ಗುಡ್ಲಮಡ್ಡಿ …

Read More »

ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಪದಗ್ರಹಣ

ಸಮಾಜ ಸೇವೆಯಲ್ಲಿ ನಿಸ್ವಾರ್ಥತೆ ಇರಲಿ ಮೂಡಲಗಿ: ‘ನಿಸ್ವಾರ್ಥದಿಂದ ಮಾಡುವ ಸಮಾಜ ಸೇವೆಯು ನಿಜವಾದ ಸಮಾಜ ಸೇವೆಯಾಗುತ್ತದೆ’ ಎಂದು ಹಾರೂಗೇರಿಯ ಶರಣ ವಿಚಾರ ವಾಹಿನಿ ಅಧ್ಯಕ್ಷ ಶರಣ ಐ.ಆರ್. ಮಠಪತಿ ಹೇಳಿದರು. ಇಲ್ಲಿಯ ಕೆ.ಎಚ್. ಸೋನವಾಲಕರ ಕಲ್ಯಾಣ ಮಂಟಪದಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ 2022-23ನೇ ಸಾಲಿನ ಪದಗ್ರಹಣ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಸಮಾಜ ಸೇವೆಗೆ ನಿತ್ಯ ಸಾಕಷ್ಟು ಅವಕಾಶಗಳಿದ್ದು, ಪ್ರತಿಯೊಬ್ಬರಲ್ಲಿ ಸಮಾಜ ಸೇವೆ ಮಾಡುವ ಇಚ್ಛಾಶಕ್ತಿ ಇರಬೇಕು …

Read More »

ಟ್ರಾನ್ಸ್ ಫಾರ್ಮರ್ ಸ್ಥಳಾಂತರಕ್ಕೆ ನಂದಗಾಂವಿಮಠ ಆಗ್ರಹ

ಮೂಡಲಗಿ – ನಗರದ ಬಾಜಿ ಮಾರ್ಕೆಟ್ ನಲ್ಲಿ ಆಯ್ ಡಿ ಎಸ್ ಎಮ್ ಟಿ ಯೋಜನೆಯ ವ್ಯಾಪಾರಿ ಮಳಿಗೆಗಳ ಕೊನೆಯ ಮಳಿಗೆಯ ಹತ್ತಿರ ಇರುವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಅನ್ನು ಬೇರೆ ಸ್ಥಳಕ್ಕೆ ಸ್ಥಳಾಂತರಿಸಬೇಕು ಎಂದು ಸಮಾಜ ಸೇವಕ ಮಹಾಲಿಂಗಯ್ಯ ನಂದಗಾಂವಿಮಠ ಆಗ್ರಹಿಸಿದ್ದಾರೆ. ಜನನಿಬಿಡ ಪ್ರದೇಶದಲ್ಲಿ ಈ ಟಿ ಸಿ ಇದ್ದು ಯಾವುದೇ ಸಮಯದಲ್ಲಿ ಅಪಾಯ ಸಂಭವಿಸುವ ಸಾಧ್ಯತೆ ಇದೆ ಆದ್ದರಿಂದ ಕೂಡಲೇ ಟಿ ಸಿ ಯನ್ನು ಬೇರೆ ಕಡೆಗೆ …

Read More »

ನವೋದಯ ವಿದ್ಯಾಲಯಕ್ಕೆ ಆಯ್ಕೆ

  ಮೂಡಲಗಿ ತಾಲೂಕಿನ ಕುಲಗೋಡ ಸರಸ್ವತಿ ನವೋದಯ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಪ್ರತಿಭಾವಂತ ವಿದ್ಯಾರ್ಥಿಗಳಾದ ಕಾರ್ತಿಕ ವಿಠ್ಠಲ ಹಾದಿಮನಿ. ಸ್ಫೂರ್ತಿ ಸಂಜೀವ ಬಾಗಿಮನಿ. ಚಿಕ್ಕೋಡಿ ತಾಲೂಕಿನ ಕೊಥಳಿ ಕುಪ್ಪನವಾಡಿ ನವೋದಯ ವಿದ್ಯಾಲಯಕ್ಕೆ ಆಯ್ಕೆಯಾಗಿದ್ದಾರೆ. ಶಾಲೆಗೆ ಮತ್ತು ಗ್ರಾಮಕ್ಕೆ ಕೀರ್ತಿ ತಂದಿದ್ದಾರೆ ಎಂದು ಮೂಖ್ಯೋಪಾಧ್ಯಾಯ ಹಣಮಂತ ಪಾಟೀಲ ಸಂತಸ ವ್ಯಕ್ತಪಡಿಸಿದ್ದಾರೆ.  

Read More »

ಬೆಳಗಾವಿ ನೂತನ ಡಿಎಚ್‍ಒ ಡಾ.ಮಹೇಶ ಕೋಣಿ ಅವರಿಗೆ ಬೆಟಗೇರಿ ಗ್ರಾಮಸ್ಥರಿಂದ ಸತ್ಕಾರ

ಬೆಟಗೇರಿ:ಬೆಳಗಾವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾಗಿ ಪದೋನ್ನತಿ ಹೊಂದಿದ ಡಿಎಚ್‍ಒ ಡಾ.ಮಹೇಶ ಕೋಣಿ ಅವರನ್ನು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮಸ್ಥರ ಪರವಾಗಿ ಜುಲೈ.12 ರಂದು ಬೆಳಗಾವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಲ್ಲಿ ಸತ್ಕರಿಸಲಾಯಿತು. ಬೆಟಗೇರಿ ಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವಿಚಾರಕ ಬಸವರಾಜ ಪಣದಿ ಮಾತನಾಡಿ, ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾಗಿ ಡಾ.ಮಹೇಶ ಕೋಣಿ ಅವರು ಹಲವು ವರ್ಷಗಳ ಕಾಲ ಸಲ್ಲಿಸಿದ ಅವಿಸ್ಮರಣೀಯ ಸೇವೆಯನ್ನು ಸ್ಮರಿಸಿ …

Read More »

ಪ್ರವಾಹ ಭೀತಿ ಎದುರಿಸಲು ಈಗಿನಿಂದಲೇ ಸನ್ನದ್ಧರಾಗಿ : ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ* *ಗೋಕಾಕದಲ್ಲಿಂದು ಗೋಕಾಕ ಮತ್ತು ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ*

ಗೋಕಾಕ: ಪ್ರಸಕ್ತ ಸನ್ನಿವೇಶದಲ್ಲಿ ಪ್ರವಾಹ ಭೀತಿ ಇಲ್ಲದಿದ್ದರೂ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ ಪ್ರವಾಹ ಎದುರಾದರೂ ಅದನ್ನು ಸಮರ್ಥವಾಗಿ ಎದುರಿಸಲು ಈಗಿನಿಂದಲೇ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಲ್ಲಿಯ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸಂಜೆ ಜರುಗಿದ ಗೋಕಾಕ ಮತ್ತು ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಪ್ರವಾಹ …

Read More »

ಸುಣಧೋಳಿ ಶ್ರೀ ಜಡಿಸಿದ್ಧೇಶ್ವರ ಸೊಸೈಟಿಗೆ ಚಂದ್ರಶೇಖರ ಗಾಣಿಗೇರ ಅಧ್ಯಕ್ಷರಾಗಿ ಆಯ್ಕೆ

ಸುಣಧೋಳಿ ಶ್ರೀ ಜಡಿಸಿದ್ಧೇಶ್ವರ ಸೊಸೈಟಿಗೆ ಚಂದ್ರಶೇಖರ ಗಾಣಿಗೇರ ಅಧ್ಯಕ್ಷರಾಗಿ ಆಯ್ಕೆ ಮೂಡಲಗಿ: ತಾಲ್ಲೂಕಿನ ಸುಣಧೋಳಿಯ ಶ್ರೀ ಜಡಿಸಿದ್ಧೇಶ್ವರ ಅರ್ಬನ್ ಕೋ. ಆಪ್ ಕ್ರೆಡಿಟ್ ಸೊಸೈಗೆ ಉಳಿದ ಅವಧಿಗಾಗಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಚಂದ್ರಶೇಖರ ಅದೃಶಪ್ಪ ಗಾಣಿಗೇರ ಅವರು ಅವಿರೋಧವಾಗಿ ಆಯ್ಕೆಯಾಗಿರುವರು. ಬೈಲಹೊಂಗಲ ಉಪವಿಭಾಗದ ಎ ಆರ್‍ ಸಿ ಎಸ್ ಶಾಹೀನ್ ಅಖ್ತರ್ ಅವರು ಚುನಾವಣಾ ಅಧಿಕಾರಿಯಾಗಿ ಕಾರ್ಯನಿವರ್ಹಹಿಸಿ ಚಂದ್ರಶೇಖರ ಗಾಣಿಗೇರ ಅವರ ಆಯ್ಕೆಯನ್ನು ಘೋಷಣೆ ಮಾಡಿರುವರು. ಸೊಸೈಟಿಯ ನಿರ್ದೇಶಕರಾದ ಕಲ್ಲಪ್ಪ …

Read More »