ಆಕ್ಷೇಪಣೆ ಸಲ್ಲಿಸಲು ನ.5 ವರಗೆ ಅವಕಾಶ-ಬಿಇಒ ಮೂಡಲಗಿ: ಸರ್ಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಮತ್ತು ಮುಖ್ಯ ಶಿಕ್ಷಕರ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದೆ ಎಂದು ಬಿ.ಇ.ಒ ಅಜೀತ ಮನ್ನಿಕೇರಿ ಪ್ರತಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಜೇಷ್ಠತಾ ಪಟ್ಟಿಯಿಂದ ಬಾಧಿತವಾದ ಶಿಕ್ಷಕರು ಪೂರಕ ದಾಖಲೆಗಳೊಂದಿಗೆ ಆಕ್ಷೇಪಣೆ ಸಲ್ಲಿಸಲು ನ. 05 ರಂದು ಕೊನೆಯ ದಿನಾಂಕವಾಗಿರುತ್ತದೆ. ನ.5ರ ನಂತರ ಸಲ್ಲಿಸುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ …
Read More »ಯಾದವಾಡದಲ್ಲಿ ರಾಜ್ಯೋತ್ಸವ ನಿಮಿತ್ಯ ಸಾಂಸ್ಕøತಿಕ ಕಾರ್ಯಕ್ರಮ
ಯಾದವಾಡದಲ್ಲಿ ರಾಜ್ಯೋತ್ಸವ ನಿಮಿತ್ಯ ಸಾಂಸ್ಕøತಿಕ ಕಾರ್ಯಕ್ರಮ ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದಲ್ಲಿ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಘಟಕ ಮತ್ತು ಮೂಡಲಗಿ ತಾಲೂಕಾ ಕನ್ನಡ ರಾಜ್ಯೋತ್ಸವ ಸಮೀತಿ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ವಿವಿಧ ಕಲಾವಿದರಿಂದ ಸಾಂಸ್ಕøತಿ ಕಾರ್ಯಕ್ರಮ ನ.2 ರಂದು ಸಂಜೆ 5 ಗಂಟೆಗೆ ಯಾದವಾಡ ಗ್ರಾಮದ ಶ್ರೀ ಘಟಗಿ ಬಸವೇಶ್ವರ ದೇವಸ್ಥಾನ ಆವರಣದಲ್ಲಿ ಜರುಗಲಿದೆ ಎಂದು ಯಾದವಾಡ ಗ್ರಾ.ಪಂ ಸದಸ್ಯ ಹಾಗೂ ವೇದಿಕೆ ಜಿಲ್ಲಾ ಸಂಚಾಲಕ ಕಲ್ಮೇಶ …
Read More »ಕನ್ನಡ ನಾಡು, ನುಡಿ ಪ್ರತಿಯೊಬ್ಬರ ಉಸಿರಾಗಬೇಕು: ಈರಣ್ಣ ಬಳಿಗಾರ
ಕನ್ನಡ ನಾಡು, ನುಡಿ ಪ್ರತಿಯೊಬ್ಬರ ಉಸಿರಾಗಬೇಕು: ಈರಣ್ಣ ಬಳಿಗಾರ ಬೆಟಗೇರಿ: ನಾಡು, ನುಡಿಗಾಗಿ ತಮ್ಮ ಬದುಕನ್ನೆ ತ್ಯಾಗ ಮಾಡಿದ ಮಹಾನ್ ವ್ಯಕ್ತಿಗಳನ್ನು ಪ್ರತಿಯೊಬ್ಬರೂ ಇಂದು ಸ್ಮರಿಸಬೇಕು. ಕನ್ನಡ ನಾಡು, ನುಡಿ ಪ್ರತಿಯೊಬ್ಬರ ಉಸಿರಾಗಬೇಕು ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಕರವೇ ಅಧ್ಯಕ್ಷ ಈರಣ್ಣ ಬಳಿಗಾರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಕರ್ನಾಟಕ ರಕ್ಷಣಾ ವೇದಿಕೆ, ಗ್ರಾಮ ಪಂಚಾಯತಿ ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ …
Read More »ರಾಜ್ಯಮಟ್ಟಕ್ಕೆ ಆಯ್ಕೆ
ರಾಜ್ಯಮಟ್ಟಕ್ಕೆ ಆಯ್ಕೆ ಕುಲಗೋಡ: ಮೂಡಲಗಿ ತಾಲೂಕಿನ ಅರಳಿಮಟ್ಟಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ವಿದ್ಯಾರ್ಥಿ ಕು ಹಣಮಂತ ಮುತ್ತಪ್ಪ ಹೊಸಮನಿ ಈತನು ಚಿಕ್ಕೋಡಿಯ ಬಿ.ಕೆ ಕಾಲೇಜನಲ್ಲಿ ನಡೆದ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ ಕ್ರಿಡಾಕೂಟದಲ್ಲಿ 3000 ಮೀ ಓಟದ ಸ್ಪರ್ಧೇಯಲ್ಲಿ ಪ್ರಥಮ 800 ಮೀ ನಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಶಾಲೆಯ ಮುಖ್ಯೋಪಾಧ್ಯಾಯರು ಶಿಕ್ಷಕ ವೃಂದ ಹಾಗೂ ಎಸ್.ಡಿ.ಎಮ್.ಸಿ ಅಧ್ಯಕ್ಷರು, ಸದಸ್ಯರು ಸೇರಿ ಸತ್ಕರಿಸಿ …
Read More »ಮೆಳವಂಕಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಸರ್ವೋತ್ತಮ ಜಾರಕಿಹೊಳಿ
ಮೆಳವಂಕಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಸರ್ವೋತ್ತಮ ಜಾರಕಿಹೊಳಿ ಗೋಕಾಕ : ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಕಾಳಜಿಯಿಂದ ಸಾರ್ವಜನಿಕ ಸಂಚಾರಕ್ಕಾಗಿ ಮೆಳವಂಕಿ ಹತ್ತಿರ ಸೇತುವೆ ನಿರ್ಮಾಣ ಕಾಮಗಾರಿಗೆ 10 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ತಿಳಿಸಿದರು. ಮಂಗಳವಾರದಂದು ತಾಲೂಕಿನ ಮೆಳವಂಕಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ ಅನುದಾನದಲ್ಲಿ ಮಂಜೂರಾದ ಸೇತುವೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, …
Read More »ಗೋಕಾಕ ನಗರದಲ್ಲಿ ತಾಲೂಕಾ ಮಟ್ಟದ ಪಂಚಮಸಾಲಿಗಳ ಬೃಹತ ಸಮಾವೇಶ
ಮೂಡಲಗಿ: ನ.13ರಂದು ಗೋಕಾಕ ನಗರದಲ್ಲಿ ತಾಲೂಕಾ ಮಟ್ಟದ ಪಂಚಮಸಾಲಿಗಳ ಬೃಹತ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದ್ದು, ಆ ಸಮಾವೇಶ ಮುಗಿಯುವುದರೊಳಗಾಗಿ ಸರ್ಕಾರ 2ಎ ಮೀಸಲಾತಿಯನ್ನು ಘೋಷಣೆ ಮಾಡಬೇಕು ಎಂದು ಕೂಡಲ ಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಸೋಮವಾರದಂದು ತಾಲೂಕಿನ ಕಲ್ಲೋಳಿ ಪಟ್ಟಣದ ಸಭಾ ಭವನದಲ್ಲಿ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಕಲ್ಲೋಳಿ ಹಾಗೂ ಹುಕ್ಕೇರಿ ಪಟ್ಟಣದಲ್ಲಿ ಬೃಹತ ಸಮಾವೇಶದ ಮೂಲಕ ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಲಾಗಿದ್ದು, ಗೋಕಾಕ ಸಮಾವೇಶದ ಒಳಗಾಗಿ ಸರ್ವ …
Read More »ಮೂಡಲಗಿ ಸಬ್ ರಜಿಸ್ಟ್ರಾರ್ ಕಛೇರಿ ನನಸು ಮಾಡಿದ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ ಸಬ್ ರಜಿಸ್ಟ್ರಾರ್ ಕಛೇರಿ ನನಸು ಮಾಡಿದ ಬಾಲಚಂದ್ರ ಜಾರಕಿಹೊಳಿ ನುಡಿದಂತೆ ನಡೆದ ಹೆಮ್ಮೆಯ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಮೂಡಲಗಿಗೆ ಉಪನೋಂದಣಿ ಅಧಿಕಾರಿಗಳ ಕಛೇರಿಯನ್ನು ಆರಂಭಿಸುವ ಮೂಲಕ ತಾಲೂಕಿನ ಜನತೆಯ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದ್ದೇನೆ ಎಂದು ಶಾಸಕ ಮತ್ತು ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಪಟ್ಟಣದ ತಹಶೀಲ್ದಾರ ಕಚೇರಿ ಬಳಿ ಸೋಮವಾರದಂದು ನೂತನವಾಗಿ ಆರಂಭಗೊಂಡಿರುವ ಉಪನೋಂದಣಾಧಿಕಾರಿಗಳ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಕ್ಟೋಬರ ತಿಂಗಳಾಂತ್ಯಕ್ಕೆ ಮೂಡಲಗಿಯಲ್ಲಿ ಕಛೇರಿಯ …
Read More »ನ.2ರಂದು ಬೆಟಗೇರಿಯಲ್ಲಿ ಆನಂದಕಂದರ ದಿವ್ಯ ಸ್ಮರಣೋತ್ಸವ ಕಾರ್ಯಕ್ರಮ
ನ.2ರಂದು ಬೆಟಗೇರಿಯಲ್ಲಿ ಆನಂದಕಂದರ ದಿವ್ಯ ಸ್ಮರಣೋತ್ಸವ ಕಾರ್ಯಕ್ರಮ ಬೆಟಗೇರಿ:ಗ್ರಾಮದ ಶ್ರೀ ಗಜಾನನ ವೇದಿಕೆಯಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸ್ಥಳೀಯ ಕರ್ನಾಟಕ ರಕ್ಷಣಾ ವೇದಿಕೆ, ಗ್ರಾಮ ಪಂಚಾಯತಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಡಾ.ಬೆಟಗೇರಿ ಕೃಷ್ಣಶರ್ಮರ ದಿವ್ಯ ಸ್ಮರಣೋತ್ಸವ ಸಮಾರಂಭ ನ.2 ರಂದು ಸಂಜೆ 6 ಗಂಟೆಗೆ ಜರುಗಲಿದೆ. ಸುಣಧೋಳಿ ಅಭಿನವ ಶಿವಾನಂದ ಸ್ವಾಮೀಜಿ ದಿವ್ಯ ಸಾನಿಧ್ಯ, ಸ್ಥಳೀಯ …
Read More »ಮೂಡಲಗಿ ಪಟ್ಟಣಕ್ಕೆ 3 ಸಾವಿರ ಕನ್ನಡ ಬಾವುಟಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ ಪಟ್ಟಣಕ್ಕೆ 3 ಸಾವಿರ ಕನ್ನಡ ಬಾವುಟಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : 67ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮೂಡಲಗಿ ಪಟ್ಟಣದ ಕನ್ನಡ ಪರ ಸಂಘಟನೆಗಳಿಗೆ 3 ಸಾವಿರ ಕನ್ನಡ ಬಾವುಟಗಳನ್ನು ವಿತರಿಸಿದರು. ಮೂಡಲಗಿ ಪಟ್ಟಣದಲ್ಲಿ ನ. 3 ರಂದು ತಾಲೂಕಿನ ಕನ್ನಡ ಪರ ಸಂಘಟನೆಗಳಿಂದ ಈ ಬಾರಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದ್ದು, ಅದಕ್ಕಾಗಿ ಕೆಎಂಎಫ್ ಅಧ್ಯಕ್ಷ …
Read More »ನ.1ರಂದು ಬೆಟಗೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
ನ.1ರಂದು ಬೆಟಗೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಬೆಟಗೇರಿ:ಗ್ರಾಮದಲ್ಲಿ ಸ್ಥಳೀಯ ಕರ್ನಾಟಕ ರಕ್ಷಣಾ ವೇದಿಕೆ, ಗ್ರಾಮ ಪಂಚಾಯತಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಸಮಾರಂಭ ನ.1 ರಂದು ಜರುಗಲಿದೆ. ಅಂದು ಮುಂಜಾನೆ 8 ಗಂಟೆಗೆ ಗ್ರಾಮದ ವಿವಿಧ ವೃತ್ತದಲ್ಲಿರುವ ಪುತ್ಥಳಿಗಳಿಗೆ ಪೂಜೆ, ಪುಷ್ಪಾರ್ಪಣೆ ಸಮರ್ಪಣೆ ಬಳಿಕ ಇಲ್ಲಿಯ ಅಶ್ವಾರೂಢ ಬಸವೇಶ್ವರ ವೃತ್ತದಿಂದ ಸಂಗೊಳ್ಳಿ ರಾಯಣ್ಣ …
Read More »