ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದÀಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ನ.4ರಂದು ಸ್ಥಳೀಯ ಕರ್ನಾಟಕ ರಕ್ಷಣಾ ವೇದಿಕೆ, ಗ್ರಾಮ ಪಂಚಾಯತಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಡಾ.ಬೆಟಗೇರಿ ಕೃಷ್ಣಶರ್ಮರ ದಿವ್ಯ ಸ್ಮರಣೋತ್ಸವ ಸಮಾರಂಭ ಜರುಗಲಿದೆ. ನ.4ರಂದು ಸಂಜೆ 7 ಗಂಟೆಗೆ ಸ್ಥಳೀಯ ಗಜಾನನ ವೇದಿಕೆ ಮೇಲೆ ಡಾ.ಬೆಟಗೇರಿ ಕೃಷ್ಣಶರ್ಮರ ದಿವ್ಯ ಸ್ಮರಣೋತ್ಸವ ಕಾರ್ಯಕ್ರಮ ಜರುಗಲಿದೆ. ಸುಣಧೋಳಿ ಅಭಿನವ ಶಿವಾನಂದ …
Read More »ಕನ್ನಡ ನಾಡು ಎಲ್ಲ ಕ್ಷೇತ್ರದಲ್ಲಿ ಬಹಳಷ್ಟು ಶ್ರೀಮಂತವಾಗಿದೆ : ಈರಣ್ಣ ಬಳಿಗಾರ
ಬೆಟಗೇರಿ:ಕನ್ನಡ ನಾಡು, ನುಡಿಗಾಗಿ ತಮ್ಮ ಬದುಕನ್ನೆ ತ್ಯಾಗ ಮಾಡಿದ ಮಹಾನ್ ವ್ಯಕ್ತಿಗಳನ್ನು ಇಂದು ಪ್ರತಿಯೊಬ್ಬರೂ ಸ್ಮರಿಸಬೇಕು. ಕನ್ನಡ ನಾಡು ಎಲ್ಲ ಕ್ಷೇತ್ರದಲ್ಲಿ ಬಹಳಷ್ಟು ಶ್ರೀಮಂತವಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಘಟಕದ ಕರವೇ ಅಧ್ಯಕ್ಷ ಈರಣ್ಣ ಬಳಿಗಾರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಕರ್ನಾಟಕ ರಕ್ಷಣಾ ವೇದಿಕೆಯ ಗ್ರಾಮ ಘಟಕದ ಸಹಯೋಗದಲ್ಲಿ ನ.1ರಂದು ನಡೆದ 70ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕನ್ನಡ ನಾಡಿನ …
Read More »ಬೆಟಗೇರಿ ಗ್ರಾಮದಲ್ಲಿ ಢಂ..ಢಂ.ಢುಂ..ಡೊಳ್ಳು ಬಡಿತ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ನ.1ರಂದು ನಡೆದ 70ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ಗ್ರಾಮದ ಪ್ರಮುಖ ಬೀದಿಗಳಲ್ಲಿ ಹಮ್ಮಿಕೊಂಡ ಭುವನೇಶ್ವರಿ ಮತ್ತು ಆನಂದಕಂದರ ಭಾವ ಚಿತ್ರ ಭವ್ಯ ಮೆರವಣಿಗೆ ಕಾರ್ಯಕ್ರಮದಲ್ಲಿ ಸ್ಥಳೀಯ ಗ್ರಾಪಂ ಮಾಜಿ ಅಧ್ಯಕ್ಷ ಲಕ್ಷ್ಮಣ ಚಂದರಗಿ ಮತ್ತು ಕರವೇ ಗ್ರಾಮ ಘಟಕದ ಅಧ್ಯಕ್ಷ ಈರಣ್ಣ ಬಳಿಗಾರ ಕೆಲವು ಹೊತ್ತು ಡೊಳ್ಳು ಬಾರಿಸಿ ಎಲ್ಲರ ಗಮನ ಸೆಳೆದರು.
Read More »ನ.1ರಂದು ಬೆಟಗೇರಿಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಲ್ಲಿ ಸ್ಥಳೀಯ ಕರ್ನಾಟಕ ರಕ್ಷಣಾ ವೇದಿಕೆ ಇವರ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭ ನ.1 ರಂದು ಜರುಗಲಿದೆ. ನ.1 ರಂದು ಬೆಳಿಗ್ಗೆ 9 ಗಂಟೆಗೆ ಸ್ಥಳೀಯ ವಿವಿಧ ವೃತ್ತದಲ್ಲಿರುವ ಮಹಾನ್ ಪುರುಷರ ಪುತ್ಥಳಿಗಳಿಗೆ ಪೂಜೆ, ಪುಷ್ಪಾರ್ಪಣೆ ಸಮರ್ಪಣೆ ಬಳಿಕ ಇಲ್ಲಿಯ ಅಶ್ವಾರೂಢ ಬಸವೇಶ್ವರ ವೃತ್ತದಿಂದ ಸಂಗೋಳ್ಳಿ ರಾಯಣ್ಣ ವೃತ್ತದವರೆಗೆ ಶಾಲಾ-ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ವಿವಿಧ ರೂಪಕಗಳ, ಜಾನಪದ ಕಲಾ ತಂಡಗಳು ಸೇರಿದಂತೆ ಸಕಲ ವಾದ್ಯಮೇಳಗಳೊಂದಿಗೆ ಭುವನೇಶ್ವರಿ …
Read More »ಯೋಜನೆಗಳ ಸದುಪಯೋಗವಾಗಲಿ’ ಕಾರ್ಮಿಕರಿಗೆ ಕಿಟ್ ವಿತರಣೆ | ಗುರುತಿನ ಚೀಟಿ ಮಾಡಿಸಿಕೊಳ್ಳಿ: ಬಾಲಚಂದ್ರ ಜಾರಕಿಹೊಳಿ
ಮೂಡಲಗಿ ಕಟ್ಟಡ ಕಾರ್ಮಿಕರಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅಂತಹ ಯೋಜನೆಗಳ ಸದುಪಯೋಗಕ್ಕೆ ಶಾಸಕ ಮತ್ತು ಬೆವೆಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಲಹೆ ಮಾಡಿದರು. ಪಟ್ಟಣದ ಪುರಸಭೆ ಕಾರ್ಯಲಯದ ಆವರಣದಲ್ಲಿ ಕಾರ್ಮಿಕ ಇಲಾಖೆಯಿಂದ ಕಿಟ್‍ಗಳನ್ನು ವಿತರಿಸಿ ಮಾತನಾಡಿದ ಅವರು ಕಾರ್ಮಿಕರ ಏಳೆಗಾಗಿ ಇರುವ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ತಿಳಿಸಿದರು. ಕಟ್ಟಡಗಳ ನಿರ್ಮಾಣದಲ್ಲಿ ಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ. 60 ವರ್ಷ ಮೇಲ್ಪಟ್ಟ ನೋಂದಾಯಿತ ಕಾರ್ಮಿಕರಿಗೆ ಸರ್ಕಾರ ಪ್ರತಿ ತಿಂಗಳು 3 ಸಾವಿರ ರೂ. …
Read More »ಕಠಿಣ ಪರಿಶ್ರಮ ಅರ್ಪಣಾ ಮನೋಭಾವ ಕ್ರೀಡಾ ಸಾಧನೆಗೆ ಸ್ಪೂರ್ತಿ : ಲಕ್ಷ್ಮೀ ರಡರಟ್ಟಿ
ಮೂಡಲಗಿ : ವಿದ್ಯಾರ್ಥಿಗಳಲ್ಲಿ ಕಠಿಣ ಪರಿಶ್ರಮ ದೃಢವಾದ ಸಂಕಲ್ಪ ಮತ್ತು ಅರ್ಪಣಾ ಮನೋಭಾವ ಈ ಮೂರು ಗುಣಗಳು ನಿಮ್ಮಲ್ಲಿದ್ದರೆ ನಿಮ್ಮ ಸಾಧನೆಗೆ ಮೆರೆಗಳೇ ಇರುವುದಿಲ್ಲ ಸಾಧನೆ ಮಾಡುವ ಛಲದೊಂದಿಗೆ ದೈಹಿಕ ಕ್ಷಮತೆ ಮತ್ತು ಕ್ರೀಡಾ ಸ್ಪೂರ್ತಿ ರಾಜ್ಯ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದವರೆಗೆ ನಮ್ಮನ್ನು ಬೆಳಸುತ್ತದೆ ಕ್ರೀಡೆ ಶೈಕ್ಷಣಿಕ ಸಾಧನೆಯ ಮತ್ತೋಂದು ಕ್ಷೇತ್ರ ಕ್ರೀಡಾ ಸಾದನೆಯು ಶೈಕ್ಷಣಿಕ ಸಾದನೆಯ ಮೆಟ್ಟಿಲು ಎಂದು ಅಂತರಾಷ್ಟ್ರೀಯ ಮಟ್ಟದ ಪ್ಯಾರಾ ಟೆಕ್ವಾಂಡೊ ಚಾಂಪಿಯನ್ ಲಕ್ಷ್ಮಿ …
Read More »*ಬೆಳಗಾವಿ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮಕ್ಕೆ ಚಾಲನೆ*
ಬೆಳಗಾವಿ: ಯುವ ಜನಾಂಗಕ್ಕೆ ಯುವಜನೋತ್ಸವ ಕೇವಲ ಮೋಜು ಮಸ್ತಿಗಾಗಿ ಮಾತ್ರವಲ್ಲ; ಅದು ಉಜ್ವಲ ಭವಿಷ್ಯದ ಸೂಚಕ ಹಾಗೂ ಜೀವನ ಮೌಲ್ಯಗಳಿಗೆ ದಾರಿ ದೀಪವಾಗಬಲ್ಲದು’ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೂ ಸಿ. ಎಮ್ ತ್ಯಾಗರಾಜ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೈ ಭಾರತ ಯುವ ಕೇಂದ್ರ ಬೆಳಗಾವಿ ಹಾಗೂ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯ ಬೆಳಗಾವಿ , ಕರ್ನಾಟಕ …
Read More »ಪ್ರತಿಯೊಬ್ಬರ ಬದುಕಿನಲ್ಲಿ ವಿದ್ಯಾರ್ಥಿ ಜೀವನ ಅಮೂಲ್ಯವಾಗಿದೆ:ಬಸವರಾಜ ಉಮರಾಣಿ
ಬೆಟಗೇರಿ:ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಯಾರಿಗೂ ಮೋಸಮಾಡದೇ ಹಾಗೂ ದುಶ್ಚಟಗಳ ದಾಸರಾಗದೇ ಉತ್ತಮ ರೀತಿಯಲ್ಲಿ ಬದುಕಬೇಕು ಎಂದು ಮಾನವ ಕಂಪ್ಯೂಟರ್ ಎಂದು ಖ್ಯಾತರಾದ ಅಥಣಿಯ ಬಸವರಾಜ ಉಮರಾಣಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಅ.28ರಂದು ಹಮ್ಮಿಕೊಂಡ ಪ್ರೇರಣಾ ಕಾರ್ಯಾಗಾರ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಾಗಿ ಮಾತನಾಡಿ, ಪ್ರತಿಯೊಬ್ಬರ ಬದುಕಿನಲ್ಲಿ ವಿದ್ಯಾರ್ಥಿ ಜೀವನ ಅಮೂಲ್ಯವಾಗಿದೆ ಎಂದರು. ಮಾನವ ಕಂಪ್ಯೂಟರ್ ಎಂದು ಖ್ಯಾತರಾದ ಬಸವರಾಜ ಉಮರಾಣಿ ಅವರು ತಮ್ಮ ಬದುಕಿನ ಕೇಲವು …
Read More »ಬೆಟಗೇರಿ ಲಕ್ಷ್ಮೀದೇವಿ ಜಾತ್ರಾಮಹೋತ್ಸವ ಸಂಪನ್ನ
ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಲಕ್ಷ್ಮೀದೇವಿ ಜಾತ್ರಾಮಹೋತ್ಸವ ಸೋಮವಾರ ಅ.27 ಮತ್ತು ಮಂಗಳವಾರ ಅ.28ರಂದು ಸಂಭ್ರಮದಿಂದ ನಡೆಯಿತು. ಸೋಮವಾರ ಅ.27 ರಂದು ಬೆಳಗ್ಗೆ, ಸಂಜೆ 6ಗಂಟೆಗೆ ಇಲ್ಲಿಯ ಲಕ್ಷ್ಮೀದೇವಿಯ ಗದ್ಗುಗೆಗೆ ಪೂಜೆ, ನೈವೇದ್ಯ ಸಮರ್ಪಿಸುವ, ದೇವರನ್ನು ಗದ್ಗುಗೆಗೊಳಿಸುವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಮಂಗಳವಾರ ಅ.28ರಂದು ಬೆಳಗ್ಗೆ 6ಗಂಟೆಗೆ ಲಕ್ಷ್ಮೀದೇವಿಯ ಗದ್ಗುಗೆಗೆ ಮಹಾಪೂಜೆ, ಮಹಾಭಿಷೇಕ, ನೈವೇದ್ಯ ಸಮರ್ಪಿಸುವ, ಲಕ್ಷ್ಮೀದೇವಿಯ ಆರಾಧನೆ, ಸುಮಂಗಲೆಯರಿಂದ ಶ್ರೀದೇವಿಗೆ ಉಡಿ ತುಂಬುವುದು, ವಿಶೇಷ …
Read More »ಬೆಟಗೇರಿ ಲಕ್ಷ್ಮೀದೇವಿಗೆ ಅಲಂಕಾರ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಲಕ್ಷ್ಮೀದೇವಿ ಜಾತ್ರಾಮಹೋತ್ಸವ ಪ್ರಯುಕ್ತ ಅ.28ರಂದು ಶ್ರೀದೇವಿ ಗದ್ಗುಗೆ ವಿಶೇಷ ಅಲಂಕಾರ ಮಾಡಲಾಗಿತ್ತು.
Read More »
IN MUDALGI Latest Kannada News