*ಮೂಡಲಗಿ-* ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಅರಭಾವಿ ಆಂಜನೇಯ ದೇವಸ್ಥಾನಕ್ಕೆ ತೆರಳಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ದೇವರ ದರ್ಶನ ಪಡೆದರು. ಶನಿವಾರದಿಂದ ಆರಂಭಗೊಂಡಿರುವ ಆಂಜನೇಯ ಕಾರ್ತೀಕೋತ್ಸವದಲ್ಲಿ ಪಾಲ್ಗೊಂಡು ವಿಶೇಷ ಪೂಜೆ ನೆರವೇರಿಸಿದರು. ದೇವರ ದರ್ಶನ ಪಡೆದು ಮಾತನಾಡಿದ ಬಾಲಚಂದ್ರ ಜಾರಕಿಹೊಳಿಯವರು ಅರಭಾವಿ ಕ್ಷೇತ್ರದ ಮುಕುಟದಂತಿರುವ ಆಂಜನೇಯ ಸ್ವಾಮಿ ನಾಡಿನ ಜನತೆಗೆ ಸುಖ, ಶಾಂತಿ, ನೆಮ್ಮದಿಯನ್ನು ದಯಪಾಲಿಸಲಿ . ಸರ್ವರಿಗೂ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿದರು. ಶಾಸಕ ಬಾಲಚಂದ್ರ ಜಾರಕಿಹೊಳಿಯವರನ್ನು …
Read More »ಅಗ್ನಿವೀರರಾಗಿ ಆಯ್ಕೆಯಾದ 50 ಅಗ್ನಿವೀರರಿಗೆ ಸತ್ಕಾರ
ಮೂಡಲಗಿ : ಕರ್ನಾಟಕದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಮಂಜುನಾಥ ಸೈನಿಕ ತರಬೇತಿ ಕೇಂದ್ರ, ಮೂಡಲಗಿಯು ಕಳೆದ 22 ವರ್ಷದಿಂದ ಸಾಧನೆಗೈಯುತ್ತ ಬಂದಿದ್ದು ಮತ್ತೆ ಈಗೊಂದು ಸಾಧನೆಯ ಗರಿಯನ್ನು ಮೈದುಂಬಿಕೊಂಡಿದೆ. ಇತ್ತೀಚಿಗೆ ಈ ಸಂಸ್ಥೆಯಲ್ಲಿ ತರಬೇತಿ ಪಡೆದು ಬೆಳಗಾವಿ ಎ.ಆರ್.ಒ. ದಿಂದ ಒಟ್ಟು 50 ಅಭ್ಯರ್ಥಿಗಳು ಅಗ್ನಿವೀರರಾಗಿ ಆಯ್ಕೆಯಾಗಿದ್ದು, ಆಯ್ಕೆಯಾದ ಅಗ್ನಿವೀರರಿಗೆ ಸಂಸ್ಥೆಯ ಸಂಸ್ಥಾಪಕರಾದ ಲಕ್ಷ್ಮಣ ವಾಯ್. ಅಡಿಹುಡಿ ಅವರು ಸತ್ಕಾರ ಸಮಾರಂಭವನ್ನು ಏರ್ಪಡಿಸಿ, ಗೌರವ ಪೂರ್ವಕವಾಗಿ ಸತ್ಕರಿಸಲಾಯಿತು. ಕಾರ್ಯಕ್ರಮವನ್ನು ಭಾವಿ …
Read More »ಅಕ್ಷತಾ ಖಣದಾಳೆ ಚರ್ಚಾ ಸ್ಪರ್ದೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಅಕ್ಷತಾ ಖಣದಾಳೆ ಚರ್ಚಾ ಸ್ಪರ್ದೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಮೂಡಲಗಿ : ಕುಲಗೋಡದ ಎನ್.ಎಸ್.ಎಫ್ ಪ್ರೌಢಶಾಲೆಯಲ್ಲಿ ಜರುಗಿದ ತಾಲೂಕಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ದೆಯಲ್ಲಿ ಆರ್.ಡಿ.ಎಸ್. ಶ್ರೀವಿದ್ಯಾನಿಕೇತನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಅಕ್ಷತಾ ಖಣದಾಳೆ ಚರ್ಚಾ ಸ್ಪರ್ದೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು ವಿದ್ಯಾರ್ಥಿನಿಯನ್ನು ಅಧ್ಯಕ್ಷರಾದ ಸಂತೋಷ ತಮ್ಮಣ್ಣಾ ಪಾರ್ಶಿ ಮುಖ್ಯೋಪಾದ್ಯಯರಾದ ಸಂಗಮೇಶ ಹಳ್ಳೂರ ಹಾಗೂ ಶಾಲಾ ಶಿಕ್ಷಕ ಸಿಬ್ಬಂದಿಗಳು …
Read More »ನ.30ರಿಂದ ಕಪರಟ್ಟಿ ವರಸಿದ್ಧೇಶ್ವರ ಜಾತ್ರಾ ಮಹೋತ್ಸವ
ಬೆಟಗೇರಿ:ಗೋಕಾಕ ತಾಲೂಕಿನ ಕಪರಟ್ಟಿ ಗ್ರಾಮದ ವರಸಿದ್ಧೇಶ್ವರ ದೇವರ ಜಾತ್ರಾಮಹೋತ್ಸವ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಸಾಮಾಜಿಕ ನಾಟಕ ಸೇರಿದಂತೆ ವಿವಿಧ ಸ್ಪರ್ಧೆಗಳು ನ.30 ರಿಂದ ಡಿ.2ರ ತನಕ ನಡೆಯಲಿವೆ. ನ.30ರಂದು ಮುಂಜಾನೆ 6 ಗಂಟೆಗೆ ಸ್ಥಳೀಯ ವರಸಿದ್ಧೇಶ್ವರ ದೇವರ ಗದ್ಗುಗೆ ಮಹಾಪೂಜೆ, ಮಹಾಭಿಷೇಕ, ನೈವೇಧ್ಯ ಸಮರ್ಪನೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಅನ್ನಪ್ರಸಾದ ಸೇವೆ ನಡೆಯಲಿದೆ. ಸಾಯಂಕಾಲ ಪಲ್ಲಕ್ಕಿಗಳ ಆಗಮನದ ಬಳಿಕ ಸಂಜೆ8 …
Read More »ರಾಜ್ಯ ಸರಕಾರ ರೈತರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡುವಲ್ಲಿ ವಿಫಲ : ಮಹಾದೇವ ಶೇಕ್ಕಿ
ರಾಜ್ಯ ಸರಕಾರ ರೈತರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡುವಲ್ಲಿ ವಿಫಲ : ಮಹಾದೇವ ಶೇಕ್ಕಿ ಮೂಡಲಗಿ : ರಾಜ್ಯದಲ್ಲಿ 2025-26ನೇ ಸಾಲಿನ ಮುಂಗಾರು ಅತೀವೃಷ್ಟಿ ಮಳೆಯಿಂದಾಗಿ ನಷ್ಟಕ್ಕೊಳಗಾದ ರೈತರು ಬೆಳೆದ ಏಕದಳ, ದ್ವಿದಳ ಹಾಗೂ ತೋಟಗಾರಿಕಾ ಬೆಳೆಗಳಿಗೆ ಎಸ್‍ಡಿಆರ್‍ಆಫ್/ಎನ್‍ಡಿಆರ್‍ಆಫ್ ನಿಯಮಕ್ಕೆ ಅನುಸಾರವಾಗಿ ಹಾಗೂ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ ಕೂಡಲೇ ಪರಿಹಾರ ಬಿಡುಗಡೆಗೊಳಿಸಬೇಕೆಂದು ಅರಭಾವಿ ಬಿಜೆಪಿ ಮಂಡಲ ಅಧ್ಯಕ್ಷ ಮಹಾದೇವ ಶೇಕ್ಕಿ ಆಗ್ರಹಿಸಿದರು. ಗುರುವಾರದಂದು ಪಟ್ಟಣದಲ್ಲಿ ತಹಶೀಲ್ದಾರರ ಮುಖಾಂತರ ಮಾನ್ಯ ರಾಜ್ಯಪಾಲರಿಗೆ …
Read More »ಭಾರತದ ಸಂವಿಧಾನ ಜಗತ್ತಿನಲ್ಲಿಯೇ ಶ್ರೇಷ್ಠ ಲಿಖಿತ ಸಂವಿಧಾನವಾಗಿದೆ : ರಮೇಶ ಅಳಗುಂಡಿ
ಬೆಟಗೇರಿ:ಭಾರತ ಸಂವಿಧಾನವು ಭಾರತೀಯ ಪ್ರಜಾಪ್ರಭುತ್ವ ಭದ್ರ ಬುನಾದಿಯಾಗಿದೆ. ನಮ್ಮ ಸಂವಿಧಾನ ಸಾಮಾಜಿಕ ನ್ಯಾಯ ಮತ್ತು ಸಮಾನತೆಯನ್ನು ಎತ್ತಿಹಿಡಿದಿದೆ ಎಂದು ಬೆಟಗೇರಿ ವಿವಿಡಿ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರಕಾರಿ ಪ್ರೌಢ ಶಾಲೆಯಲ್ಲಿ ನ.26ರಂದು ಸಂವಿಧಾನ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಭಾರತದ ಸಂವಿಧಾನ ಜಗತ್ತಿನಲ್ಲಿಯೇ ಶ್ರೇಷ್ಠ ಲಿಖಿತ ಸಂವಿಧಾನವಾಗಿದೆ ಎಂದರು. ಸ್ಥಳೀಯ ಪ್ರೌಢ ಶಾಲೆಯ ಅತಿಥಿಶಿಕ್ಷಕ ಮಂಜುನಾಥ ಸವತಿಕಾಯಿ …
Read More »ಶಾಲಾ ಮಕ್ಕಳಲ್ಲಿ ಶಿಕ್ಷಕರು ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು: ಎಮ್.ಬಿ.ನಾಯ್ಕರ
ಬೆಟಗೇರಿ:ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಶಾಲಾ ಮಕ್ಕಳು ಪಾಲ್ಗೊಳ್ಳಬೇಕು, ಇಂದಿನ ಯುಗದಲ್ಲಿ ಶಾಲಾ ಮಕ್ಕಳು ಪುಸ್ತಕ ಓದುವ ಹವ್ಯಾಸ ಬೆಳಸಿಕೊಳ್ಳಬೇಕು ಎಂದು ಗೋಕಾಕ ತಾಲೂಕಿನ ಬೆಟಗೇರಿ ಸಿಆರ್‍ಪಿ ಎಮ್.ಬಿ.ನಾಯ್ಕರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯಲ್ಲಿ ಇತ್ತೀಚೆಗೆ ನಡೆದ ಬೆಟಗೇರಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ ಬಳಿಕ ಮುಖ್ಯಅತಿಥಿಗಳಾಗಿ ಮಾತನಾಡಿ, ಶಾಲಾ ಮಕ್ಕಳಲ್ಲಿ …
Read More »ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದ ಅಗ್ನಿ ಶಾಮಕ ಠಾಣಾ ಕಟ್ಟಡ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ 3 ಕೋಟಿ ಆಡಳಿತಾತ್ಮಕ ಅನುಮೋದನೆ – ಶಾಸಕ ಬಾಲಚಂದ್ರ ಜಾರಕಿಹೊಳಿ
*ಮೂಡಲಗಿ-* ತಾಲೂಕಿನ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದ ಅಗ್ನಿ ಶಾಮಕ ಠಾಣಾ ಕಟ್ಟಡ ನಿರ್ಮಾಣಕ್ಕೆ ಕೇಂದ್ರ ಸರ್ಕಾರದ 15 ನೇ ಹಣಕಾಸು ಯೋಜನೆಯಡಿ 3 ಕೋಟಿ ರೂಪಾಯಿ ಆಡಳಿತಾತ್ಮಕ ಅನುಮೋದನೆಯಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ಈ ಬಗ್ಗೆ ಹೇಳಿಕೆಯನ್ನು ನೀಡಿರುವ ಅವರು, ಒಟ್ಟು 21 ಅಗ್ನಿಶಾಮಕ ಠಾಣಾ ಕಟ್ಟಡಗಳ ಪೈಕಿ 15 ಅಗ್ನಿ ಶಾಮಕ ಠಾಣೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದ್ದು, ಅದರಲ್ಲಿ ಮೂಡಲಗಿಯು ಸೇರಿದೆ ಎಂದು ಹರ್ಷ ವ್ಯಕ್ತಪಡಿಸಿದರು. …
Read More »ಕಲ್ಲೋಳಿ ಜಾತ್ರೆಗೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಿ
ಮೂಡಲಗಿ: ಉತ್ತರ ಕರ್ನಾಟಕದ ಮತ್ತು ಜಿಲ್ಲೆಯ ಜಾಗೃತ ದೇವರಾದ ಮೂಡಲಗಿ ತಾಲೂಕಿನ ಕಲ್ಲೋಳಿಯ ಶ್ರೀ ಹಣಮಂತ ದೇವರ ಜಾತ್ರಾ ಕಾರ್ತಿಕೋತ್ಸವ ಹಾಗೂ ಜಾತ್ರಾ ಮಹೋತ್ಸವಕ್ಕೆ ಸಾರಿಗೆ ಇಲಾಖೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಬೇಕೆಂದು ಕಲ್ಲೋಳಿ ಯುವಜನ ಸೇವಾ ಸಂಘದ ಅಧ್ಯಕ್ಷರು ಶ್ರೀ ಪರಶುರಾಮ ಇಮಡೇರ ಸಾರಿಗೆ ಇಲಾಖೆಯವರಿಗೆ ಮನವಿ ಮಾಡಿದ್ದಾರೆ. ಡಿ.6-ರಿಂದ 13- ವರೆಗೆ ಜರಗುವುದು. ಜಾತ್ರೆಗೆ ಗೋಕಾಕ, ರಾಯಬಾಗ, ಅಥಣಿ, ಹಾಗೂ ಹುಕ್ಕೇರಿ ಘಟಕಗಳಿಂದ ವಿಶೇಷ ಹೆಚ್ಚುವರಿ ಬಸ್ …
Read More »25 ರಂದು ಅನಂದಕಂದರ ಸಾಹಿತ್ಯ ಕೃತಿ ಬಿಡುಗಡೆ
ಅನಂದಕಂದರ ಸಾಹಿತ್ಯ ಕೃತಿ ಬಿಡುಗಡೆ ಮೂಡಲಗಿ: ಇಲ್ಲಿಯ ಶ್ರೀಪಾದಬೋಧ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಕನ್ನಡ ಸಂಘದಲ್ಲಿ ನ. 25ರಂದು ಮಧ್ಯಾಹ್ನ 12ಕ್ಕೆ ಜಾನಪದ ವಿದ್ಯಾಂಸ ಸಿ.ಕೆ. ನಾವಲಗಿ ಅವರ ವಿಮರ್ಶಾ ಕೃತಿ ‘ಆನಂದ ಕಂದರ ಸಾಹಿತ್ಯ ಒಂದು ಅನುಸಂದಾನ’ ಬಿಡುಗಡೆಯಾಗಲಿದೆ. ಕೃತಿಯನ್ನು ಕಸಾಪ ಅಧ್ಯಕ್ಷ ಸಂಜಯ ಶಿಂಧಿಹಟ್ಟಿ ಹಾಗೂ ಮಹಾವಿದ್ಯಾಲಯದ ಪ್ರಾಚಾರ್ಯ ಮಹೇಶ ಕಂ ಬಾರ ಇವರು ಬಿಡುಗಡೆ ಮಾಡುವರು. ಕೃತಿ ಕುರಿತು ಕನ್ನಡ ಪ್ರಾಧ್ಯಾಪಕ …
Read More »
IN MUDALGI Latest Kannada News