ಕುಲಗೋಡ : ಶ್ರೀಮತಿ ಭೀಮವ್ವ ಲಕ್ಷ್ಮಣ್ ರಾವ್ ಜಾರಕಿಹೊಳಿ ಸರಕಾರಿ ಪ್ರೌಢಶಾಲೆ ಮನ್ನಿಕೇರಿ ಯಲ್ಲಿ 79ನೇ ಸ್ವಾತಂತ್ರ್ಯ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ 2025ರ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಮಾಜ ವಿಜ್ಞಾನ ವಿಷಯದಲ್ಲಿ ನೂರಕ್ಕೆ ನೂರು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಶ್ರೀ ಬಸವರಾಜ ಮುನವಳ್ಳಿ 20,000 ರೂಪಾಯಿ ನಗದು ಬಹುಮಾನ ನೀಡಿ ಸತ್ಕರಿಸಿದರು. ಈ ಸಂದರ್ಭದಲ್ಲಿ ಎಸ್ ಡಿ ಎಮ್ ಸಿ …
Read More »ರಾಧಾ ಕೃಷ್ಣನ ವೇಷಭೂಷಣದಲ್ಲಿ ಗಮನಸೆಳೆದ ಮಕ್ಕಳು
ಮೂಡಲಗಿ: ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಎಸ್.ಎಸ್.ಆರ್.ಪ್ರೌಢ ಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಮಕ್ಕಳು ರಾಧಾ ಕೃಷ್ಣನ ವೇಷಭೂಷನ ಗಮನಸೆಳೆಯಿತು. ಶ್ರೀ ಕೃಷ್ಣ ಮೂರ್ತಿಗೆ ಸಂಸ್ಥೆಯ ಅಧ್ಯಕ್ಷ ವೆಂಕಟೇಶ ಆರ್.ಸೋನವಾಲಕರ ಅವರು ಪೂಜೆಸಲ್ಲಿಸಿ ಮಾತನಾಡಿ, ಮಕ್ಕಳು ಅರೋಗ್ಯ ಮತ್ತು ಖುಷಿಯಾಗಿ ಇರಲು ಪಠ್ಯದೊಂದಿಗೆ ಪಠ್ಯೆತರ ಚಟುವಟಿಕೆ ಬಹಳ ಮುಖ್ಯ ಎಂದು ಹೇಳಿದರು. ಸಂಸ್ಥೆಯ ನಿರ್ದೇಶಕ ಸಂದೀಪ್ ಸೋನವಾಲಕರ ಮಾತನಾಡಿ, ಇಂದಿನ ತಂತ್ರಜ್ಞಾನ …
Read More »ಬಾಲಕಿ ಭುವನಾ ಅವಳು ಬಾಲ ಶ್ರೀಕೃಷ್ಣನ ವೇಷಭೂಷಣ
ಬೆಣ್ಣೆ ಕಳ್ಳ ಬಾಲಕೃಷ್ಣ…. ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಬಾಲಕಿ ಭುವನಾ ಶಿವರುದ್ರಗೌಡ ದೇಯಣ್ಣವರ ಅವಳು ಶನಿವಾರದಂದು ನಡೆದ ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬದ ಪ್ರಯುಕ್ತ ಬಾಲ ಶ್ರೀಕೃಷ್ಣನ ರೂಪಕದ ವೇಷಭೂಷಣ ತೊಟ್ಟು ಎಲ್ಲರ ಗಮನ ಸೆಳೆದಳು.
Read More »ಶಾಂತಿ, ಸೌಹಾರ್ದತೆಯಿಂದ ಗಣೇಶ ಹಬ್ಬ ಆಚರಿಸಬೇಕು: ಪಿಎಸ್‍ಐ ಬಿ.ಆನಂದ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಸರ್ವ ಧರ್ಮಿಯರು ಸೌಹಾರ್ದತೆಯಿಂದ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಆಚರಿಸಬೇಕು ಎಂದು ಕುಲಗೋಡ ಪೊಲೀಸ್ ಠಾಣೆಯ ಪಿಎಸ್‍ಐ ಬಿ. ಆನಂದ ಹೇಳಿದರು. ಬೆಳಗಾವಿ ಜಿಲ್ಲಾ ಪೊಲೀಸ್ ಇಲಾಖೆ, ಮೂಡಲಗಿ ಪೊಲೀಸ್ ಠಾಣೆ ಸಿಪಿಐ ವೃತ್ತ ಕಛೇರಿ ಹಾಗೂ ಕುಲಗೋಡ ಪೊಲೀಸ್ ಠಾಣೆಯ ಸಹಯೋಗದಲ್ಲಿ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಪ್ರಯುಕ್ತ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಕಾರ್ಯಾಲಯದಲ್ಲಿ ಆ.15ರಂದು ನಡೆದ …
Read More »ಬೆಟಗೇರಿ ಬೀರಸಿದ್ಧೇಶ್ವರ ದೇವಸ್ಥಾನದ ದಾಸೋಹ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಬೀರಸಿದ್ಧೇಶ್ವರ ದೇವಸ್ಥಾನ ದಾಸೋಹ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಸ್ಥಳೀಯ ಬೀರಸಿದ್ಧೇಶ್ವರ ದೇವಸ್ಥಾನದ ಅರ್ಚಕ ಗುರಪ್ಪ ಮಾಕಾಳಿ ಭೂಮಿ ಪೂಜೆ ನೆರವೇರಿಸಿದರು. ಈ ವೇಳೆ ಬೆಟಗೇರಿ ತಾಪಂ ಮಾಜಿ ಸದಸ್ಯ ಬಸವಂತ ಕೋಣಿ, ಬೀರಸಿದ್ಧೇಶ್ವರ ದೇವಸ್ಥಾನ ಕಮಿಟಿ ಅಧ್ಯಕ್ಷ ಸುಭಾಷ ಕರೆಣ್ಣವರ, ಕಾರ್ಯದರ್ಶಿ ಮಾಯಪ್ಪ ಬಾಣಸಿ, ವಿಠ್ಠಲ ಕೋಣಿ, ಸದಾಶಿವ ಕುರಿ, ಬಸಪ್ಪ ಮಾಕಾಳಿ, ಬಸಪ್ಪ ಮಾಲದಿನ್ನಿ, ಸದ್ಬಕ್ತರು, ಸ್ಥಳೀಯರು, …
Read More »ಸಬ್ ಕಾ ಮಾಲೀಕ ಏಕ್ ಹೈ ಎಂಬುದನ್ನು ಒತ್ತಿ ಹೇಳಿದ ಸಾಯಿ ಬಾಬಾ- ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ:ಪಟ್ಟಣದ ಸತ್ಯಸಾಯಿ ಸೇವಾ ಸಮೀತಿಯವರು ಸಾರ್ವಜನಿಕರು ಮತ್ತು ವಿವಿಧ ಸಂಘ- ಸಂಸ್ಥೆಗಳ ವಂತಿಗೆಯಲ್ಲಿ ಭವ್ಯವಾಗಿ ನಿರ್ಮಿಸಿರುವ ಸಾಯಿ ಮಂದಿರವು ಭಕ್ತರನ್ನು ಆಕರ್ಷಿಸುವ ಸುಂದರವಾದ ಮಂದಿರವಾಗಿದೆ. ಸಾಯಿಬಾಬಾ ಸಕಲ ಭಕ್ತರ ಸಂಕಷ್ಟಗಳನ್ನು ನಿವಾರಿಸಿ ಎಲ್ಲರಲ್ಲಿಯೂ ಪ್ರೀತಿ, ಸಹನೆ ಮೂಡುವಂತಾಗಲಿ ಎಂದು ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಆಶಿಸಿದರು. ಗುರುವಾರದಂದು ಪಟ್ಟಣದ ಲಕ್ಷ್ಮೀ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಸಾಯಿ ಮಂದಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೂಡಲಗಿಯಲ್ಲಿಯೇ ಸುಂದರವಾದ ಮಂದಿರವನ್ನು ನಿರ್ಮಿಸಲು ಶಕ್ತಿ …
Read More »ಪ್ರತಿಯೊಬ್ಬರೂ ತಮ್ಮಲ್ಲಿ ದೇಶಾಭಿಮಾನ ಬೆಳಸಿಕೊಳ್ಳಬೇಕು: ಈರಪ್ಪ ದೇಯಣ್ಣವರ
ಬೆಟಗೇರಿ:ದೇಶಕ್ಕಾಗಿ ತಮ್ಮ ಬದುಕನ್ನೆ ತ್ಯಾಗ ಮಾಡಿದ ಮಹಾನ್ ವ್ಯಕ್ತಿಗಳನ್ನು ಇಂದು ಪ್ರತಿಯೊಬ್ಬರೂ ಸ್ಮರಿಸಬೇಕು ಎಂದು ಬೆಟಗೇರಿ ತಾಪಂ ಮಾಜಿ ಸದಸ್ಯ ಈರಪ್ಪ ದೇಯಣ್ಣವರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಚೈತನ್ಯ ಗ್ರಪ್ಸ್‍ನ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ಆ.15ರಂದು ನಡೆದ 79ನೇ ವರ್ಷದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ತಾಪಂ ಮಾಜಿ ಸದಸ್ಯ ಈರಪ್ಪ ದೇಯಣ್ಣವರ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಇಂದು ಪ್ರತಿಯೊಬ್ಬರೂ ತಮ್ಮಲ್ಲಿ ದೇಶಾಭಿಮಾನ ಬೆಳಸಿಕೊಳ್ಳಬೇಕು ಎಂದರು. …
Read More »‘ಕಲ್ಲೋಳಿಯ ಬಸವೇಶ್ವರ ಸೌಹಾರ್ದ ಸಹಕಾರಿ ಸಂಘಕ್ಕೆ ರೂ.4.15 ಕೊಟಿ ಲಾಭ’
ಮೂಡಲಗಿ: ‘ಕಲ್ಲೋಳಿಯ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿ ಸಂಘವು ಪ್ರಸಕ್ತ ಆರ್ಥಿಕ ವರ್ಷದ ಕೊನೆಯಲ್ಲಿ ರೂ.4.15 ಕೋಟಿ ನಿವ್ವಳ ಲಾಭವನ್ನು ಪಡೆದು ಪ್ರಗತಿಯಲ್ಲಿ ಸಾಗಿದೆ’ ಎಂದು ಸಂಘದ ಅಧ್ಯಕ್ಷ ಬಾಳಪ್ಪ ಬ. ಬೆಳಕೂಡ ಅವರು ಹೇಳಿದರು. ತಾಲ್ಲೂಕಿನ ಕಲ್ಲೋಳಿಯ ಬಸವೇಶ್ವರ ಸೌಹಾರ್ದ ಸಹಕಾರಿ ಸಂಘದ ಸಭಾಭವನದಲ್ಲಿ 34ನೇ ವರ್ಷದ ಸರ್ವಸಾಧಾರಣಾ ಸಭೆಯನ್ನು ಉದ್ಧೇಶಿಸಿ ಮಾತನಾಡಿದ ಅವರು ಸದ್ಯ ಶೇರು ಬಂಡವಾಳ ರೂ. 78.96 ಲಕ್ಷ, ಠೇವುಗಳು ರೂ.78.84 ಕೋಟಿ, ನಿಧಿಗಳು …
Read More »*ನಾಗನೂರ ಪಟ್ಟಣದಲ್ಲಿ ರಾತ್ರಿ ೧೨ ಗಂಟೆಗೆ ಧ್ವಜಾರೋಹಣ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*
ಮೂಡಲಗಿ:-ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿದ ರಾತ್ರಿ ೧೨.೦೦ ಗಂಟೆಯ ಸಮಯದಲ್ಲಿ ನಾಗನೂರ ಪಟ್ಟಣದಲ್ಲಿ ಧ್ವಜಾರೋಹಣ ನೆರವೇರಿಸುವ ಅವಕಾಶ ದೊರೆತಿರುವುದು ನನ್ನ ಅದೃಷ್ಟವೆಂದು ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ತಾಲ್ಲೂಕಿನ ನಾಗನೂರ ಪಟ್ಟಣದ ಮಾಧವಾನಂದ ಆಶ್ರಮದ ಬಳಿ ೭೯ ನೇ ಸ್ವಾತಂತ್ರ್ಯೋತ್ಸವದ ನಿಮಿತ್ತ ಧ್ವಜಾರೋಹಣವನ್ನು ನೆರವೇರಿಸಿ ಅವರು ಮಾತನಾಡಿದರು. ಮೂಡಲಗಿಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಮುಗಿಸಿಕೊಂಡು ಬರುವ ಸಂದರ್ಭದಲ್ಲಿ ನಾಗನೂರ ಪಟ್ಟಣದ ಪ್ರಮುಖರು ಸೇರಿಕೊಂಡು ಇಲ್ಲಿಯೇ ಧ್ವಜಾರೋಹಣ ನೆರವೇರಿಸಿಕೊಂಡು ಹೋಗಿರಿ …
Read More »*ಮೂಡಲಗಿಯಲ್ಲಿ ಇಂದಿರಾ ಕ್ಯಾಂಟಿನ್ ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*
ಮೂಡಲಗಿ: ಅಸಂಘಟಿತ ಕಾರ್ಮಿಕರು, ಬಡ ಜನರಿಗೆ ಇಂದಿರಾ ಕ್ಯಾಂಟಿನ್ ವರದಾನವಾಗಿದ್ದು, ಕಡಿಮೆ ದರದಲ್ಲಿ ಉಪಹಾರ ಮತ್ತು ಊಟದ ಸೌಲಭ್ಯಗಳನ್ನು ಹೊಂದಿರುವ ಇದನ್ನು ಸದುಪಯೋಗಪಡಿಸಿಕೊಳ್ಳುವಂತೆ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಾರ್ವಜನಿಕರಿಗೆ ಕರೆ ನೀಡಿದರು. ಗುರುವಾರದಂದು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ತೆರೆಯಲಾದ ಇಂದಿರಾ ಕ್ಯಾಂಟಿನ್ ಉದ್ಘಾಟಿಸಿ ಮಾತನಾಡಿದ ಅವರು, ಬಡ ಬಗ್ಗರಿಗೆ ಇದು ಉಪಯುಕ್ತವಾಗಿದೆ ಎಂದು ತಿಳಿಸಿದರು. ಕಡಿಮೆ ದರದಲ್ಲಿ ಬೆಳಗಿನ ಉಪಹಾರ ಮತ್ತು …
Read More »