Breaking News
Home / ರಾಜ್ಯ (page 11)

ರಾಜ್ಯ

*ನಮ್ಮ ಬಣದ ಎಲ್ಲ 13 ಜನ ಅಭ್ಯರ್ಥಿಗಳ ಗೆಲುವು- ಬೆಮುಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿಯವರ ವಿಶ್ವಾಸ*

ಬೆಳಗಾವಿ* – ನಮ್ಮ ಬೆಂಬಲಿತ 13 ಅಭ್ಯರ್ಥಿಗಳನ್ನು ಬಿಡಿಸಿಸಿ ಬ್ಯಾಂಕ್ ಚುನಾವಣೆಗೆ ಕಣಕ್ಕಿಳಿಸಿದ್ದು, ದೇವರು ಮತ್ತು ಮತದಾರರ ಆಶೀರ್ವಾದದಿಂದ ಅವರನ್ನು ಗೆಲ್ಲಿಸಿಕೊಂಡು ಬಂದು ಮುಂದಿನ ಐದು ವರ್ಷಗಳ ಕಾಲ ಬ್ಯಾಂಕಿನ ಆಡಳಿತ ನಡೆಸಲು ಸಿದ್ಧರಾಗಿದ್ದೇವೆ ಎಂದು ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ಶನಿವಾರದಂದು ಇಲ್ಲಿಯ ಬ್ಯಾಂಕಿನ ಸಭಾಗೃಹದಲ್ಲಿ ತಮ್ಮ ಬೆಂಬಲಿತ 6 ಅಭ್ಯರ್ಥಿಗಳ ನಾಮಪತ್ರಗಳನ್ನು ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಮೂಡಲಗಿ, ಗೋಕಾಕ, …

Read More »

ಕುರುಹಿನಶೆಟ್ಟಿ ಸೊಸಾಯಿಟಿಯಿಂದ ಪ್ರಭಾ ಶುಗರ್ಸ್ ಅಧ್ಯಕ್ಷ-ಉಪಾಧ್ಯಕ್ಷರಿಗೆ ಸತ್ಕಾರ

ಮೂಡಲಗಿ: ಘಟಪ್ರಬಾ ಶುಗರ್ಸ್ ಕಾರ್ಖಾನೆಯ ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಗೊಂಡ ತಾಲೂಕಿನ ಜೋಕಾನಟ್ಟಿಯ ಶಿದ್ಲಿಂಗಪ್ಪ ಸಿದ್ದಪ್ಪ ಕಂಬಳಿ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಯಾದ ರಂಗಾಪೂರದ ಮಲ್ಲಿಕಾರ್ಜುನ ಭೀಮಪ್ಪ ಕಬ್ಬೂರ ಅವರನ್ನು ಪಟ್ಟಣದ ಕುರುಹಿನಶೆಟ್ಟಿ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಯ ಅಧ್ಯಕ್ಷರು ಮತ್ತು ಮಂಡಳಿಯವರು ಸೊಸಾಯಿಟಿಯ ಸಭಾ ಭವನದಲ್ಲಿ ಶುಕ್ರವಾರದಂದು ಸತ್ಕರಿಸಿ ಗೌರವಿಸಿದರು. ಸತ್ಕಾರ ಸ್ವೀಕರಿಸಿದ ಕಾರ್ಖಾನೆಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಕಬ್ಬೂರ ಮಾತನಾಡಿ, ಈ ಭಾಗದ ರೈತರ ಆಶಾಕಿರಣವಾದ ಘಟಪ್ರಭಾ …

Read More »

*ಮೂಡಲಗಿ ವಲಯದ ಅತಿಥಿ ಶಿಕ್ಷಕರ ವೇತನ ವಿತರಿಸಿದ ಸರ್ವೋತ್ತಮ ಜಾರಕಿಹೊಳಿ*

*ಗೋಕಾಕ-* ಧಾರವಾಡ ವಲಯದಲ್ಲಿಯೇ ಮೂಡಲಗಿ ಶೈಕ್ಷಣಿಕ ವಲಯದ ಸಾಧನೆಯನ್ನು ಮೆಚ್ಚುವಂತಹದ್ದು, ಅದರಲ್ಲಿಯೂ ಅತಿಥಿ ಶಿಕ್ಷಕರನ್ನು ಇಟ್ಟುಕೊಂಡು ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವುದು ಒಳ್ಳೆಯ ಬೆಳವಣಿಗೆಗೆ ಸಾಕ್ಷಿಯಾಗಿದೆ ಎಂದು ಸ್ಥಳೀಯ ಲಕ್ಷ್ಮೀ ಎಜ್ಯುಕೇಷನ್ ಟ್ರಸ್ಟ್ ನಿರ್ದೇಶಕ ಸರ್ವೋತ್ತಮ ಜಾರಕಿಹೊಳಿಯವರು ಹೇಳಿದರು. ಇಲ್ಲಿನ ಎನ್ಎಸ್ಎಫ್ ಕಚೇರಿಯಲ್ಲಿ ಶ್ರೀಮತಿ ಭೀಮವ್ವ ಲಕ್ಷ್ಮಣರಾವ್ ಜಾರಕಿಹೊಳಿ‌ ಮೆಮೋರಿಯಲ್ ಟ್ರಸ್ಟ್ ಆಯೋಜಿಸಿದ್ದ ಮೂಡಲಗಿ ವಲಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರಿಗೆ ಗೌರವ ಸಂಭಾವನೆ …

Read More »

*ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ- ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಬಾಲಚಂದ್ರ ಜಾರಕಿಹೊಳಿ*

ಬೆಳಗಾವಿ: ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ನಮ್ಮ ಪೆನಲ್‌ದಿಂದ ಸ್ಪರ್ಧಿಸುವ ಎಲ್ಲ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ. ಗೆಲ್ಲಬೇಕೆಂದೇ ನಾವು ಸ್ಪರ್ಧೆ ಮಾಡುತ್ತಿದ್ದೇವೆ ಎಂದು ಅರಬಾವಿ ಶಾಸಕ, ಬೆಮೂಲ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪೆನಲ್‌ದಿಂದ 16 ಸ್ಥಾನಗಳ ಪೈಕಿ 13 ಸ್ಥಾನಗಳಿಗೆ ಸ್ಪರ್ಧೆ ಮಾಡಲಾಗುವುದು. ಈಗಾಗಲೇ 7 ಜನ ಅಭ್ಯರ್ಥಿಗಳು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ …

Read More »

*ಹುಕ್ಕೇರಿ ತಾಲೂಕಿನ 41 ಪಿಕೆಪಿಎಸ್ ಮತದಾರರ ಸಭೆ*

ಬೆಳಗಾವಿ: ಇದೇ ತಿಂಗಳು ನಡೆಯುವ ಪ್ರತಿಷ್ಠಿತ ಬೆಳಗಾವಿ ಡಿಸಿಸಿ ಬ್ಯಾಂಕಿನ ಚುನಾವಣೆಯಲ್ಲಿ ಹುಕ್ಕೇರಿ ತಾಲೂಕಿನಿಂದ ರಾಜೇಂದ್ರ ಪಾಟೀಲ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಘೋಷಿಸಿದರು. ಮಂಗಳವಾರದಂದು ನಗರದ ಖಾಸಗಿ ಹೊಟೇಲ್ ನಲ್ಲಿ ಆಯೋಜಿಸಿದ್ದ ಹುಕ್ಕೇರಿ ತಾಲೂಕಿನ 41 ಪಿಕೆಪಿಎಸ್ ಗಳ ಮತದಾರ( ಡೆಲಿಗೆಟ್)ರನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜೇಂದ್ರ ಪಾಟೀಲ ಗೆಲುವಿಗೆ ಶ್ರಮಿಸುವಂತೆ ಅವರು ವಿನಂತಿಸಿಕೊಂಡರು. ಬೆಳಗಾವಿ ಡಿಸಿಸಿ ಬ್ಯಾಂಕಿನ …

Read More »

ಮಹರ್ಷಿ ವಾಲ್ಮೀಕಿ ಒಬ್ಬ ಶ್ರೇಷ್ಠ ಖುಷಿ ಮತ್ತು ಕವಿಯಾಗಿದ್ದರು: ರಮೇಶ ಅಳಗುಂಡಿ

ಬೆಟಗೇರಿ: ಮೊಟ್ಟ ಮೊದಲ ಮಹಾಕಾವ್ಯ ರಚಿಸಿದ್ದರಿಂದ ಮಹರ್ಷಿ ವಾಲ್ಮೀಕಿಯನ್ನು ಆದಿಕವಿ ಎಂದು ಕರೆಯಲಾಗುತ್ತದೆ. ಒಬ್ಬ ಕ್ರೂರ ವ್ಯಕ್ತಿಯು ಮಹಾನ್ ಖುಷಿಯಾಗಿ ಪರಿವರ್ತನೆಯಾದ ಪವಾಡಕ್ಕೆ ವಾಲ್ಮೀಕಿ ಜೀವನವೇ ಸಾಕ್ಷಿ ಎಂದು ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಅ.7ರಂದು ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ ಭಾವ ಚಿತ್ರಕ್ಕೆ ಪೊಜೆ, ಪುಷ್ಪಾರ್ಪನೆ ನೆರವೇರಿಸಿ ಮಾತನಾಡಿ, ಮಹರ್ಷಿ ವಾಲ್ಮೀಕಿ ಒಬ್ಬ …

Read More »

ಬೆಟಗೇರಿಯಲ್ಲಿ ಭೂತಾಯಿಗೆ ಉಡಿತುಂಬಿ ಸಡಗರದಿಂದ ಶೀಗಿ ಹುಣ್ಣಿಮೆ ಆಚರಣೆ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಶೀಗಿಹುಣ್ಣಿಮೆ ಪ್ರಯುಕ್ತ ರೈತರು ತಮ್ಮ ತಮ್ಮ ಹೊಲ-ಗದ್ದೆಗಳÀಲ್ಲಿರುವ ಹಚ್ಚ ಹಸಿರಿನ ಬೆಳೆಗಳ ನಡುವೆ ಭೂಮಿತಾಯಿಗೆ ಉಡಿತುಂಬಿ, ಪೂಜಿಸಿ, ಚರಗ ಚಲ್ಲುವ ಕಾರ್ಯಕ್ರಮ ಮಂಗಳವಾರ ಅ.7 ರಂದು ಸಡಗರದಿಂದ ನಡೆಯಿತು. ಬೆಟಗೇರಿ ಗ್ರಾಮದ ಎಲ್ಲರ ಮನೆಗಳಲ್ಲಿ ಹಬ್ಬದ ಸಡಗರ, ಸಂಭ್ರಮ ಮನೆ ಮಾಡಿತ್ತು, ಇಲ್ಲಿಯ ರೈತ ಕುಟುಂಬದ ಮಕ್ಕಳು ಸೇರಿದಂತೆ ಎಲ್ಲರೂ ಒಟ್ಟಿಗೆ ಸೇರಿಕೊಂಡು ಎತ್ತುಗಳನ್ನು ಶೃಂಗರಿಸಿ, ಎತ್ತಿನ ಬಂಡಿ ಹೂಡಿಕೊಂಡು, ಕೆಲವರು ಕಾಲ್ನಡೆಗೆಯಲ್ಲಿ, ಇನ್ನೂ …

Read More »

ರಾಮಾಯಣ ರಚನೆಯಲ್ಲಿ ಮಹರ್ಷಿ ವಾಲ್ಮೀಕಿ ಅಗ್ರಗಣ್ಯರು – ಉಪನ್ಯಾಸಕ ಸಿದ್ದಾರೂಢ ಬೆಳವಿ

ಮೂಡಲಗಿ : ರಾಮಾಯಣ ಗ್ರಂಥ ರಚನೆಯಲ್ಲಿ ಮಹರ್ಷಿ ವಾಲ್ಮೀಕಿ ಅಗ್ರಗಣ್ಯರಾಗಿದ್ದು ಒಬ್ಬ ದರೋಡೆಕೊರನಾಗಿದ್ದ ರತ್ನಾಕರ ಮಹರ್ಷಿ ವಾಲ್ಮೀಕಿಯಾಗಿ ನಾರದಮುನಿಗಳ ಸಂದೇಶದಂತೆ ಪರಿವರ್ತನೆಯಾಗಿ ಮಾನವ ಕುಲದಲ್ಲಿ ಶ್ರೇಷ್ಠತೆಯ ಮೌಲ್ಯಗಳನ್ನು ಹೊಂದಿರುವ ರಾಮನ ಜೀವನದ ಯಶೋಗಾಥೆಯನ್ನು ಪರಿಚಯಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದು ರಾಮನಾಮದಲ್ಲಿ ದೇವನಿದ್ದು ಸಾರ್ವಕಾಲಿಕ ಸಾಮಾಜಿಕ ಮೌಲ್ಯಗಳನ್ನು ರಾಮಾಯಣದ 24000 ಶ್ಲೋಕಗಳ ಮೂಲಕ ಪರಿಚಯಸುವಲ್ಲಿ ಮಹರ್ಷಿ ವಾಲ್ಮೀಕಿ ಮನುಕುಲದ ಮಹಾನ್ ವಿದ್ವಾಂಸರಾಗಿದ್ದಾರೆ ಎಂದು ಮೂಡಲಗಿಯ ಆರ್‍ಡಿಎಸ್ ಪದವಿ ಪೂರ್ವ ಕಾಲೇಜಿನ ಅರ್ಥಶಾಸ್ತ್ರ …

Read More »

ಬಸವೇಶ್ವರ ಸೊಸಾಯಿಟಿಯಂದ ಪ್ರಭಾ ಶುಗರ್ಸ್ ಅಧ್ಯಕ್ಷ-ಉಪಾಧ್ಯಕ್ಷರಿಗೆ ಸತ್ಕಾರ

ಮೂಡಲಗಿ: ಘಟಪ್ರಬಾ ಶುಗರ್ಸ್ ಕಾರ್ಖಾನೆಯ ಅಧ್ಯಕ್ಷ-ಉಪಾಧ್ಯಕ್ಷರು ನಿಧನರಾದ ಪ್ರಯುಕ್ತ ತೇರವಾದ ಸ್ಥಾನಕ್ಕೆ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಗೊಂಡ ತಾಲೂಕಿನ ಜೋಕಾನಟ್ಟಿಯ ಶಿದ್ಲಿಂಗಪ್ಪ ಸಿದ್ದಪ್ಪ ಕಂಬಳಿ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಯಾದ ರಂಗಾಪೂರದ ಮಲ್ಲಿಕಾರ್ಜುನ ಭೀಮಪ್ಪ ಕಬ್ಬೂರ ಅವರನ್ನು ಪಟ್ಟಣದ ಶ್ರೀ ಬಸವೇಶ್ವರ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಯ ಅಧ್ಯಕ್ಷ ಮಲ್ಲಿಕಾರ್ಜುನ ಢವಳೆಶ್ವರ ಮತ್ತು ಮಂಡಳಿಯವರು ಸೊಸಾಯಿಟಿಯ ಸಭಾ ಭವನದಲ್ಲಿ ಸೋಮವಾರದಂದು ಸತ್ಕರಿಸಿ ಗೌರವಿಸಿದರು. ಸತ್ಕಾರ ಸ್ವೀಕರಿಸಿದ ಕಾರ್ಖಾನೆಯ ಉಪಾಧ್ಯಕ್ಷ ಮಲ್ಲಿಕಾರ್ಜುನ …

Read More »

ಪ್ರಭಾ ಶುಗರ್ಸ್ ಅಧ್ಯಕ್ಷರಾಗಿ ಕಂಬಳಿ, ಉಪಾಧ್ಯಕ್ಷರಾಗಿ ಕಬ್ಬೂರ ಅವಿರೋಧವಾಗಿ ಆಯ್ಕೆ*

ಗೋಕಾಕ:  ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ನೂತನ ಅಧ್ಯಕ್ಷರಾಗಿ ಜೋಕಾನಟ್ಟಿ ಗ್ರಾಮದ ಶಿದ್ಲಿಂಗಪ್ಪ ಸಿದ್ದಪ್ಪ ಕಂಬಳಿ ಮತ್ತು ಉಪಾಧ್ಯಕ್ಷರಾಗಿ ರಂಗಾಪೂರ ಗ್ರಾಮದ ಮಲ್ಲಿಕಾರ್ಜುನ ಭೀಮಪ್ಪ ಕಬ್ಬೂರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶನಿವಾರದಂದು ಕಾರ್ಖಾನೆಯ ಸಭಾಗೃಹದಲ್ಲಿ ಜರುಗಿದ ನೂತನ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆಯಲ್ಲಿ ತಲಾ ಒಂದೊಂದು ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಎರಡೂ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆಯಿತು ಎಂದು ಚುನಾವಣಾಧಿಕಾರಿಯಾಗಿದ್ದ ಗೋಕಾಕ ಸಹಕಾರ ಅಭಿವೃದ್ಧಿ ಅಧಿಕಾರಿ ಎಸ್.ಬಿ.ಬಿರಾದಾರ ಪಾಟೀಲ ಅವರು ಪ್ರಕಟಿಸಿದರು. ಇಲ್ಲಿಯವರೆಗೆ …

Read More »