ಬೆಟಗೇರಿ ಗ್ರಾಮದ ದುರ್ಗಾದೇವಿ ಜಾತ್ರಾ ಮಹೋತ್ಸವ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ದುರ್ಗಾದೇವಿ ಜಾತ್ರಾ ಮಹೋತ್ಸವ ಕಾರ್ಯಕ್ರಮ ನ.10ರಿಂದ ನ.11ರವರೆಗೆ ನಡೆಯಲಿದೆ. ನ.10ರಂದು ಬ್ರಾಹ್ಮೀ ಮೂಹೂರ್ತದಲ್ಲಿ ಬೆಳಿಗ್ಗೆ 5 ಗಂಟೆಗೆ ದುರ್ಗಾದೇವಿ ದೇವರ ಗದ್ದುಗೆಗೆ ಅಭಿಷೇಕ, ಪೂಜೆ, ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆದ ಬಳಿಕ ಸಾಯಂಕಾಲ 5 ಗಂಟೆಗೆ ಪುರದೇವರುಗಳ ಪಲ್ಲಕ್ಕಿಗಳನ್ನು ಬರಮಾಡಿಕೊಳ್ಳುವದು ನಂತರ ಎಲ್ಲಲಾ ದೇವರುಗಳಿಗೆ ಉಡಿ ತುಂಬುವ ಕಾರ್ಯಕ್ರಮ ಜರುಗಲಿದೆ. ನ.11ರಂದು ಬೆಳಗ್ಗೆ 6 ಗಂಟೆಗೆ …
Read More »ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಂದ ಅಸಹಕಾರ ಚಳುವಳಿ
ಮೂಡಲಗಿ ತಾಲ್ಲೂಕಾ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ಸಂಘದ ಪದಾಧಿಕಾರಿಗಳು ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಬುಧವಾರ ಅಸಹಕಾರ ಚಳುವಳಿ ಮಾಡಿ ತಾಲ್ಲೂಕು ಪಂಚಾಯ್ತಿ ಇಒ ಎಫ್.ಎಸ್. ಚಿನ್ನನವರ ಅವರಿಗೆ ಮನಿವಿ ನೀಡಿದರು ———————————————– ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಂದ ಅಸಹಕಾರ ಚಳುವಳಿ ಮೂಡಲಗಿ: ರಾಜ್ಯದ ಎಲ್ಲಾ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಪ್ರಮುಖ ಬೇಡಿಕೆಗಳಾದ ಪಿಡಿಒ ಅವರ ರಾಜ್ಯ ಮಟ್ಟದ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಬೇಕು ಸೇರಿದಂತೆ ಹಲವು ಬೇಡಿಕೆಗಳಿಗೆ ಒತ್ತಾಯಿಸಿ ಮೂಡಲಗಿ …
Read More »ಗುರ್ಲಾಪೂರ ಕ್ರಾಸ್ ಬಳಿ ಮುಧೋಳ-ನಿಪ್ಪಾಣಿ ರಾಜ್ಯ ಹೆದ್ದಾರಿಯ ಕಾಮಗಾರಿ ತಡೆದ ಸಾರ್ವಜನಿಕರು
ಮೂಡಲಗಿ: ಗುರ್ಲಾಪೂರ ಕ್ರಾಸ್ ಬಳಿ ಇರುವ ಮುಧೋಳ-ನಿಪ್ಪಾಣಿ ರಾಜ್ಯ ಹೆದ್ದಾರಿಯ ಡಾಂಬರೀಕರಣ ನಡೆಯುತ್ತಿದ್ದು, ಸ್ಥಳೀಯ ಸಾರ್ವಜನಿಕರು ಕಾಮಗಾರಿ ತಡೆದು ರಸ್ತೆ ಎರಡು ಬದಿಯಲ್ಲಿರುವ ಚರಂಡಿವರೆಗೆ ಡಾಂಬರೀಕರಣ ಆಗಬೇಕು ಎಂದು ಆಗ್ರಹಿಸಿ, ಗೋಕಾಕ ವಿಭಾಗದ ಕೆಎಸ್‍ಎಚ್‍ಐಪಿ ಎಇಇ ವಾಮನ್ ಸೂರ್ಯವಂಶಿ ಅವರಿಗೆ ಮನವಿ ನೀಡಿದರು. ಈ ವೇಳೆಯಲ್ಲಿ ಸ್ಥಳೀಯ ನಿವಾಸಿ ಸದಾಶಿವ ನೇಮಗೌಡರ ಮಾತನಾಡಿ, ಮುಧೋಳ-ನಿಪ್ಪಾಣಿ ರಾಜ್ಯ ಹೆದ್ದಾರಿ ಕಾಮಗಾರಿ ಪ್ರಾರಂಭವಾದ ದಿನದಿಂದ ಸಹ ಅಧಿಕಾರಿಗಳಿಗೆ ಡಾಂಬರೀಕರಣ ಮಾಡುವಂತೆ ಸಾಕಷ್ಟು ಬಾರಿ …
Read More »ಸಮಾಜದಲ್ಲಿ ಸ್ವಾಭಿಮಾನದಿಂದ ಬದುಕಬೇಕಾದರೆ ಶಿಕ್ಷಣ ಅತೀ ಅವಶ್ಯ-ಸರ್ವೋತ್ತಮ ಜಾರಕಿಹೊಳಿ
ಯಾದವಾಡದಲ್ಲಿ ಕರ್ನಾಟಕ ರಾಜ್ಯ ಸಮಗಾರ(ಚಮ್ಮಾರ) ಹರಳಯ್ಯ ಸಂಘದ ಸಮಾರಂಭ ಸಮಾಜದಲ್ಲಿ ಸ್ವಾಭಿಮಾನದಿಂದ ಬದುಕಬೇಕಾದರೆ ಶಿಕ್ಷಣ ಅತೀ ಅವಶ್ಯ-ಸರ್ವೋತ್ತಮ ಜಾರಕಿಹೊಳಿ ಮೂಡಲಗಿ: ಶಿಕ್ಷಣದ ಮೂಲಕ ಸಮಾಜ ಸಂಘಟನೆ ಸಾಧ್ಯ. ಸಮಾಜದಲ್ಲಿ ಸ್ವಾಭಿಮಾನದಿಂದ ಬದುಕಬೇಕಾದರೆ ಶಿಕ್ಷಣ ಅತೀ ಅವಶ್ಯ ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಅವರು ರವಿವಾರದಂದು ತಾಲೂಕಿನ ಯಾದವಾಡ ಗ್ರಾಮದಲ್ಲಿ ಕರ್ನಾಟಕ ರಾಜ್ಯ ಸಮಗಾರ(ಚಮ್ಮಾರ) ಹರಳಯ್ಯ ಸಂಘ ಬೆಂಗಳೂರು ಸಂಘಕ್ಕೆ ಆಯ್ಕೆಯಾದ ಚುನಾಯಿತ ಪ್ರತಿನಿಧಿಗಳಿಗೆ ಹಾಗೂ ನಿವೃತ್ತ …
Read More »ಮೂಡಲಗಿ-ಧರ್ಮಸ್ಥಳ ನೂತನ ಬಸ್ಸ್ ಸೇವೆ ಆರಂಭ
ಮೂಡಲಗಿ-ಧರ್ಮಸ್ಥಳ ನೂತನ ಬಸ್ಸ್ ಸೇವೆ ಆರಂಭ ಮೂಡಲಗಿ: ಮೂಡಲಗಿ ಹಾಗೂ ಸುತ್ತಮುತ್ತಲಿನ ಜನರ ಬಹುದಿನಗಳ ಬೇಡಿಕೆಯಾಗಿದ್ದ ಮೂಡಲಗಿ-ಧರ್ಮಸ್ಥಳ ಬಸ್ಸ್ ಸೇವಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಸಕ್ತಿಯಿಂದ ಆರಂಭವಾದ ಬಸ್ಸ್ ಸೇವೆಗೆ ಮೂಡಲಗಿ ತಾಲೂಕಾ ಕಾನಿಪ ಸಂಘದ ಗೌರವಾಧ್ಯಕ್ಷ ಸರ್ವೋತ್ತಮ ಜಾರಕಿಹೊಳಿ ಪೂಜೆಸಲ್ಲಿಸಿ ಚಾಲನೆ ನೀಡಿದರು. ಈ ಸಂಧರ್ಭದಲ್ಲಿ ಸಾರಿಗೆ ಇಲಾಖೆಯ ಗೋಕಾಕ ಘಟಕದ ವ್ಯವಸ್ಥಾಪಕ ಅಪ್ಪಣ್ಣ ಛಬ್ಬಿ ಮಾತನಾಡಿ, ಪ್ರತಿ ದಿನ ಮೂಡಲಗಿಯಿಂದ ಮಧ್ಯಾಹ್ನ 3-15 ಗಂಟೆಗೆ ಮೂಡಲಗಿ …
Read More »ಎಂಪಿಎಲ್-2023 ಕ್ರಿಕೆಟ್ ಟೂರ್ನಿ ಮೂಡಲಗಿ ರಾಯಲ್ ಚಾಲೇಂಜರ್ಸ ತಂಡ ಚಾಂಪಿಯಿನ್ಸ್
ಎಂಪಿಎಲ್-2023 ಕ್ರಿಕೆಟ್ ಟೂರ್ನಿ ಮೂಡಲಗಿ ರಾಯಲ್ ಚಾಲೇಂಜರ್ಸ ತಂಡ ಚಾಂಪಿಯಿನ್ಸ್ ಮೂಡಲಗಿ: ಮಾರ್ನಿಂಗ್ ಸ್ಟಾರ್ ಕ್ರಿಕೆಟರ್ಸ ಹಾಗೂ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಸಹಯೋಗದಲ್ಲಿ ಸ್ಥಳೀಯ ಎಸ್‍ಎಸ್‍ಆರ್ ಕಾಲೇಜು ಮೈದಾನದಲ್ಲಿ ಆಯೋಜಿಸಿದ 5 ದಿನಗಳ ‘ಮೂಡಲಗಿ ಪ್ರಿಮಿಯರ್ ಲೀಗ್-2023’ ಕ್ರಿಕೆಟ್ ಟೂರ್ನಿಯಲ್ಲಿ ಮೂಡಲಗಿಯ ರಾಯಲ್ ಚಾಲೆಂಜರ್ಸ್ ತಂಡವು ಪ್ರಥಮ ಸ್ಥಾನ ಪಡೆದು ರೂ. 50,001 ನಗದು ಬಹುಮಾನ ಮತ್ತು ಪಾರಿತೋಷಕವನ್ನು ಪಡೆದುಕೊಂಡಿತು. ದ್ವಿತೀಯ ಸ್ಥಾನವನ್ನು ಮೂಡಲಗಿಯ ಬುಲ್ಡೋಜರ್ ತಂಡವು ದ್ವಿತೀಯ …
Read More »ರಾಸು ವಿಮೆ ಯೋಜನೆಯಿಂದ ಹೈನುಗಾರ ರೈತರಿಗೆ ಅನುಕೂಲ- ಶಾಸಕ ಬಾಲಚಂದ್ರ ಜಾರಕಿಹೊಳಿ
ರಾಸು ವಿಮೆ ಯೋಜನೆಯಿಂದ ಹೈನುಗಾರ ರೈತರಿಗೆ ಅನುಕೂಲ- ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ: ರಾಸು ವಿಮೆ ಯೋಜನೆಯನ್ನು ಕೆಎಮ್‍ಎಫ್‍ನಿಂದ ಜಾರಿಗೊಳಿಸುವ ಮೂಲಕ ಸಮಸ್ತ ರೈತ ವರ್ಗಕ್ಕೆ ಅನುಕೂಲ ಮಾಡಿಕೊಡಲಾಗಿದೆ ಎಂದು ಕೆಎಮ್‍ಎಫ್ ನಿರ್ದೇಶಕ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇತ್ತಿಚೆಗೆ ಇಲ್ಲಿಯ ಎನ್‍ಎಸ್‍ಎಫ್ ಕಚೇರಿಯಲ್ಲಿ ಜಿಲ್ಲಾ ಹಾಲು ಒಕ್ಕೂಟದ ಆಶ್ರಯದಲ್ಲಿ ಒಟ್ಟು 5.20 ಲಕ್ಷ ರೂಗಳ ಚೆಕ್‍ನ್ನು ವಿವಿಧ ಯೋಜನೆಗಳ ಫಲಾನುಭವಿಗಳಿಗೆ ವಿತರಿಸಿ ಮಾತನಾಡಿದ ಅವರು, ಕೆಎಮ್‍ಎಫ್‍ಗೆ ಹಾಲು …
Read More »ಯಾದವಾಡದಲ್ಲಿ ನ.7 ರಂದು ಕರ್ನಾಟಕ ರಾಜ್ಯ ಸಮಗಾರ(ಚಮ್ಮಾರ) ಹರಳಯ್ಯ ಸಂಘಕ್ಕೆ ಆಯ್ಕೆಯಾದ ಚುನಾಯಿತ ಪ್ರತಿನಿಧಿಗಳಿಗೆ ಹಾಗೂ ನಿವೃತ್ತ ನೌಕರರಿಗೆ ಗೌರವ ಸನ್ಮಾನ ಸಮಾರಂಭ
ಯಾದವಾಡದಲ್ಲಿ ನ.7 ರಂದು ಕರ್ನಾಟಕ ರಾಜ್ಯ ಸಮಗಾರ(ಚಮ್ಮಾರ) ಹರಳಯ್ಯ ಸಂಘಕ್ಕೆ ಆಯ್ಕೆಯಾದ ಚುನಾಯಿತ ಪ್ರತಿನಿಧಿಗಳಿಗೆ ಹಾಗೂ ನಿವೃತ್ತ ನೌಕರರಿಗೆ ಗೌರವ ಸನ್ಮಾನ ಸಮಾರಂಭ ಯಾದವಾಡ : ಕರ್ನಾಟಕ ರಾಜ್ಯ ಸಮಗಾರ(ಚಮ್ಮಾರ) ಹರಳಯ್ಯ ಸಂಘ ಬೆಂಗಳೂರು ಸಂಘಕ್ಕೆ ಆಯ್ಕೆಯಾದ ಚುನಾಯಿತ ಪ್ರತಿನಿಧಿಗಳಿಗೆ ಹಾಗೂ ನಿವೃತ್ತ ನೌಕರರಿಗೆ ಗೌರವ ಸನ್ಮಾನ ಸಮಾರಂಭವು ಮೂಡಲಗಿ ತಾಲೂಕಿನ ಯಾದವಾಡ ಗ್ರಾಮದ ಶ್ರೀ ಹರಳಯ್ಯ ಕಲ್ಯಾಣ ಮಂಟಪದಲ್ಲಿ ದಿ.7ರಂದು ಮುಂಜಾನೆ 11 ಘಂಟೆಗೆ ಜರುಗಲಿದೆ ಎಂದು ಕರ್ನಾಟಕ …
Read More »ಕುಲಗೋಡ, ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಪ್ರಸ್ತಾವಣೆ : ಶಾಸಕ ಬಾಲಚಂದ್ರ ಜಾರಕಿಹೊಳಿ
ಕುಲಗೋಡ, ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಪ್ರಸ್ತಾವಣೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ತಾಲೂಕಿನ ಕುಲಗೋಡ ಮತ್ತು ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲು ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವಣೆ ಸಲ್ಲಿಸಲಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಕಳೆದ ಗುರುವಾರದಂದು ತಾಲೂಕಿನ ಕುಲಗೋಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಸಾರ್ವಜನಿಕರ ಹಿತದೃಷ್ಟಿಯಿಂದ ಕುಲಗೋಡ ಮತ್ತು ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು …
Read More »ಶ್ರೀ ಮಹಾಲಕ್ಷ್ಮೀ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಹೊಸ ಟ್ರಾಕ್ಟರ್ ಮತ್ತು ಕೃಷಿ ಉಪಕರಣಗಳ ವಿತರಣೆ
ಮೂಡಲಗಿ: ಸಹಕಾರಿ ಸಂಸ್ಥೆಗಳ ಮುಖಾಂತರ ಕೃಷಿ ಚಟುವಟಿಕೆಗಳನ್ನು ಸುರಳಿತಗೊಳಿಸುವ ಸಲುವಾಗಿ ಯಾಂತ್ರಿಕ ವ್ಯವಸ್ಥೆಗಳಿಗೆ ಹೆಚ್ಚು ಅನುಕೂಲವಾಗುತ್ತದೆ. ರೈತರು ಇದರ ಪ್ರಯೋಜನ ಪಡೆದು ಕೃಷಿ ಲಾಭದಾಯಕ ಉದ್ಯಮವಾಗಿ ಪರಿವರ್ತಿಸಬೇಕಾದ ಅಗತ್ಯವಿದೆ ಎಂದು ರಾಜ್ಯಸಭಾ ಸಂಸದ ಹಾಗೂ ಸಂಸ್ಥಾಪಕ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು ರವಿವಾರ ನ-05 ರಂದು ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಪ್ರಗತಿ ಪರ ರೈತ ಹಣಮಂತ ಸಿದ್ದಪ್ಪ ಐದುಡ್ಡಿ ಅವರಿಗೆ …
Read More »