Breaking News
Home / Recent Posts (page 168)

Recent Posts

ಪುರಸಭೆ ವ್ಯಾಪ್ತಿಯ ಟೇಲರಿಂಗ ವೃತ್ತಿಯ ಅಸಂಘಟಿತ ಕಾರ್ಮಿಕರಿಗೆ ಆಹಾರ ಧಾನ್ಯ ಕಿಟ್ ವಿತರಣೆ

  ಮೂಡಲಗಿ: ಕಾರ್ಮಿಕ ಇಲಾಖೆವತಿಯಿಂದ ಮಂಗಳವಾರ ಪುರಸಭೆ ವ್ಯಾಪ್ತಿಯ ಟೇಲರಿಂಗ ವೃತ್ತಿಯ ಅಸಂಘಟಿತ 110 ಕಾರ್ಮಿಕರಿಗೆ ಆಹಾರ ಧಾನ್ಯ ಕಿಟ್ ವಿತರಣಾ ಕಾರ್ಯಕ್ರಮ ನಡೆಯಿತು. ಪುರಸಭೆ ಮುಖ್ಯಾಧಿಕಾರಿ ದೀಪಕ ಹರ್ದಿ ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ ಆಹಾರ ಕಿಟ್ ವಿತರಣೆಗೆ ಚಾಲನೆ ನೀಡಿ ಮಾತನಾಡಿ, ಶಾಸಕರ ಮಾರ್ಗದರ್ಶನದಲ್ಲಿ ಕೊರೋನಾ ಸಂಕಷ್ಟದಲ್ಲಿದ್ದ ಅಸಂಘಟಿತ ಕಾರ್ಮಿಕರಿಗೆ ಕಿಟ್ ವಿತರಿಸಿದ್ದು ಆಸರೆಯಾಗಿದೆ ಇದರ ಸದುಪಯೋಗ ಪಡೆಯಬೇಕೆಂದರು. ಕಾರ್ಯಕ್ರಮದಲ್ಲಿ ಪುರಸಭೆ ಸದಸ್ಯ ಗಫಾರ ಡಾಂಗೆ, ಟೇಲರಿಂಗ್ …

Read More »

ಕೆಮ್ಮನಕೋಲ ತಾಪಂ ವ್ಯಾಪ್ತಿಯ ಕೆಲವು ಹಳ್ಳಿಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ

ಬೆಟಗೇರಿ:ಸನ್2020-21ನೇ ಸಾಲಿನ ಗೋಕಾಕ ತಾಲೂಕಾ ಪಂಚಾಯತಿ 15ನೇ ಹಣಕಾಸು ಯೋಜನೆಯಡಿ ಒಟ್ಟು 7.35 ಲಕ್ಷ ರೂ.ಗಳ ಅನುದಾನಡಿಯಲ್ಲಿ ಕೆಮ್ಮನಕೋಲ ತಾಪಂ ವ್ಯಾಪ್ತಿಯ ಕೆಲವು ಹಳ್ಳಿಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಕೆಮ್ಮನಕೋಲ ತಾಪಂ ಸದಸ್ಯೆ ನೀಲವ್ವ ಶಿವಲಿಂಗಪ್ಪ ಬಳಿಗಾರ ಹೇಳಿದರು. ಕೆಮ್ಮನಕೋಲ ತಾಪಂ ವ್ಯಾಪ್ತಿಯ ಬಿಲಕುಂದಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸುಮಾರು 2 ಲಕ್ಷ ರೂ.ಗಳ ವೆಚ್ಚದಲ್ಲಿ ಶೌಚಾಲಯ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ …

Read More »

ಜಗದ ಉದ್ಧಾರಕ್ಕೆ ಉಗ್ರಸ್ವರೂಪಿ ವೀರಭದ್ರೇಶ್ವರರು ಅವತರಿಸಿದರು:ಡಾ.ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮಿಜಿ

ಜಗದ ಉದ್ಧಾರಕ್ಕೆ ಉಗ್ರಸ್ವರೂಪಿ ವೀರಭದ್ರೇಶ್ವರರು ಅವತರಿಸಿದರು:ಡಾ.ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮಿಜಿ ಬೆಟಗೇರಿ: ಹಿಂದೂ ಪರಂಪರೆಯಲ್ಲಿ ಪ್ರತಿ ದೇವರ ಅವತಾರದ ಹಿಂದೆ ಪೌರಾಣಿಕ ಕತೆಗಳಿವೆ. ಅಧರ್ಮದ ನಾಶಕ್ಕಾಗಿ ಹಾಗೂ ಜಗದ ಉದ್ಧಾರಕ್ಕೆ ಉಗ್ರಸ್ವರೂಪಿ ವೀರಭದ್ರೇಶ್ವರರು ಅವತರಿಸಿದರು ಎಂದು ಭಾಗೋಜಿಕೊಪ್ಪ ಹಿರೇಮಠದ ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮಿಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವೀರಭದ್ರೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸೆ.14 ರಂದು ನಡೆದ ವೀರಭದ್ರೇಶ್ವರ ಜಯಂತ್ಯೋತ್ಸವ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿ, …

Read More »

ಮೂಡಲಗಿ ಪುರಸಭೆ ಕಾರ್ಮಿಕರಿಗೆ ಆಹಾರ ದಾನ್ಯಗಳ ಕಿಟ್ ವಿತರಣೆ

ಮೂಡಲಗಿ ಪುರಸಭೆ ಕಾರ್ಮಿಕರಿಗೆ ಆಹಾರ ದಾನ್ಯಗಳ ಕಿಟ್ ವಿತರಣೆ ಮೂಡಲಗಿ : ಕಾರ್ಮಿಕ ಇಲಾಖೆಯಿಂದ ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕರಿಗೆ ನೀಡಲಾಗುವ ಆಹಾರ ಕಿಟ್‍ಗಳನ್ನು ಅರಭಾಂವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರ ಮಾರ್ಗದರ್ಶದಂತೆ ವಿತರಿಸಲಾಯಿತು ಎಂದು ಪುರಸಭೆ ಅಧ್ಯಕ್ಷ ಹಣಮಂತ ಗುಡ್ಲಮನಿ ಹೇಳಿದರು. ಸೋಮವಾರದಂದು ಪಟ್ಟಣದ ಪುರಸಭೆ ಆವರಣದಲ್ಲಿ ಪುರಸಭೆ ಕಾರ್ಮಿಕರಿಗೆ ಆಹಾರ ಕಿಟ್‍ಗಳನ್ನು ವಿತರಿಸಿ ಮಾತನಾಡಿದ ಅವರು, ಕೋವಿಡ್ ಎರಡನೇ ಅಲೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು …

Read More »

ರೈತ ಪ್ರಚಾರ ಸಮಿತಿಯ ಅಧ್ಯಕ್ಷರ ನೇಮಕ

ಮೂಡಲಗಿ: ಪಟ್ಟಣದ ಶಿವಬಸು ಮೋರೆಯವರನ್ನು ಕರ್ನಾಟಕ ರೈತರ ಹಿತರಕ್ಷಣಾ ವೇದಿಕೆಯ ಬೆಳಗಾವಿ ರೈತ ಪ್ರಚಾರ ಸಮಿತಿಯ ಅಧ್ಯಕ್ಷನಾಗಿ ನೇಮಕ ಮಾಡಿ ವೇದಿಕೆಯ ಜಿಲ್ಲಾಧ್ಯಕ್ಷ ಸುರೇಸ ನಾಯ್ಕ ಆದೇಶ ಪತ್ರವನ್ನು ನೀಡಿದರು.

Read More »

ಬೆಟಗೇರಿ ಗ್ರಾಮದ ಅಸಂಘಟಿತ ಕಾರ್ಮಿಕರಿಗೆ ಆಹಾರ ಧಾನ್ಯಗಳ ಕಿಟ್ ವಿತರಣೆ

ಬೆಟಗೇರಿ ಗ್ರಾಮದ ಅಸಂಘಟಿತ ಕಾರ್ಮಿಕರಿಗೆ ಆಹಾರ ಧಾನ್ಯಗಳ ಕಿಟ್ ವಿತರಣೆ ಬೆಟಗೇರಿ:ಶ್ರಮಿಕರ ಬದುಕಿಗೆ ನೆರವಿನ ಆಸರೆಯಾಗಿ ಆಹಾರ ಧಾನ್ಯಗಳ ಕಿಟ್ ವಿತರಿಸಲಾಗುತ್ತಿದೆ. ಇಲ್ಲಿಯ ಅಸಂಘಟಿತ ಕಾರ್ಮಿಕರು ಆಹಾರ ಧಾನ್ಯಗಳ ಕಿಟ್ ಸದುಪಯೊಗ ಪಡೆದುಕೊಳ್ಳಬೇಕು ಎಂದು ಗೋಕಾಕ ಎನ್‍ಎಸ್‍ಎಫ್ ಪ್ರತಿನಿಧಿ ಲಕ್ಕಪ್ಪ ಲೋಕೂರಿ ಹೇಳಿದರು. ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆ, ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸಹಯೋಗದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾರ್ಗದರ್ಶನದಂತೆ ಸೆ.13ರಂದು ಬೆಟಗೇರಿ …

Read More »

ಶಿಕ್ಷಕ ಎಸ್.ಬಿ.ಸನದಿಗೆ ಆದರ್ಶ ಶಿಕ್ಷಕ ಪ್ರಶಸ್ತಿ

ಶಿಕ್ಷಕ ಎಸ್.ಬಿ.ಸನದಿಗೆ ಆದರ್ಶ ಶಿಕ್ಷಕ ಪ್ರಶಸ್ತಿ ಬೆಟಗೇರಿ:ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆಯ ಶಿಕ್ಷಕ ಸಿದ್ದಪ್ಪ ಭೀಮಪ್ಪ ಸನದಿ ಅವರಿಗೆ ಕೌಜಲಗಿ ಗ್ರಾಮದ ದಿ. ಶ್ರೀ ಬಾಳಪ್ಪ ಬಸಪ್ಪ ಹೊಸಮನಿ(ಶಿಕ್ಷಕರು) ಪ್ರತಿಷ್ಠಾನ ವತಿಯಿಂದ ಕೊಡ ಮಾಡುವ ಪ್ರಸಕ್ತ ಸಾಲಿನ ತಾಲೂಕಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿ ಲಭಿಸಿದೆ. ಮೂಡಲಗಿ ಕೆ.ಎಚ್.ಸೋನವಾಲ್ಕರ್ ಕಲ್ಯಾನ ಮಂಟಪದಲ್ಲಿ ಇತ್ತೀಚೆಗೆ ನಡೆದ 2021-22ನೇ ಸಾಲಿನ ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ …

Read More »

ಕಾರ್ಮಿಕ ಇಲಾಖೆವತಿಯಿಂದ ಅಸಂಘಟಿತ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ

   ಕಾರ್ಮಿಕ ಇಲಾಖೆವತಿಯಿಂದ ಅಸಂಘಟಿತ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ ಕುಲಗೋಡ: ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ವತಿಯಿಂದ ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮ ಪಂಚಾಯತ ಆವರಣದಲ್ಲಿ ಇಂದು ಮುಂಜಾನೆ ಗ್ರಾ.ಪಂ ವ್ಯಾಪ್ತಿಯ ಅಸಂಘಟಿತ 150 ಕಾರ್ಮಿಕರಿಗೆ ಆಹಾರ ಧಾನ್ಯ ವಿತರಣಾ ಕಾರ್ಯಕ್ರಮ ನಡೆಯಿತು. ಜಿ.ಪಂ ಸದಸ್ಯ ಗೋವಿಂದ ಕೊಪ್ಪದ ಆಹಾರ ಕಿಟ್ ವಿತರಿಸಿ ಮಾತನಾಡಿ ಶಾಸಕರ ಮಾರ್ಗದರ್ಶನದಲ್ಲಿ ಕಾರ್ಮಿಕ ಇಲಾಖೆ ಕರೋನಾ 2 ನೇ …

Read More »

ಶಿವಾಪೂರ(ಹ): ಮುಕ್ತ ಕಬಡ್ಡಿ ಪಂದ್ಯಾವಳಿ ಮಹಾರಾಷ್ಟ್ರದ ಶಿವ ಶಾಹು ತಂಡ ಪ್ರಥಮ

ಶಿವಾಪೂರ(ಹ): ಮುಕ್ತ ಕಬಡ್ಡಿ ಪಂದ್ಯಾವಳಿ ಮಹಾರಾಷ್ಟ್ರದ ಶಿವ ಶಾಹು ತಂಡ ಪ್ರಥಮ ಮೂಡಲಗಿ ತಾಲೂಕಿನ ಶಿವಾಪೂರ(ಹ) ಗ್ರಾಮದಲ್ಲಿ ಶ್ರೀ ಗಜಾನನ ಉತ್ಸವ ನಿಮಿತ್ತವಾಗಿ ಏರ್ಪಡಿಸಿದ ಪುರುಷರ ರಾಜ್ಯ ಮಟ್ಟದ ಹೊನಲು ಬೆಳಕಿನ ಮುಕ್ತ ಕಬ್ಬಡಿ ಪಂದ್ಯಾವಳಿ ಗ್ರಾಮದ ಬಾಲಚಂದ್ರ ಬಯಲು ರಂಗಮಂದಿರದ ಆವರಣದಲ್ಲಿ ಜರುಗಿದವು. ಪಂದ್ಯಾವಳಿಯ ಸಮಾರಂಭವನ್ನು ಶಾಸಕ ಹಾಗೂ ಕೆಎಂಎಫ ಅಧ್ಯಕ್ಷ ಬಾಲಚಂದ್ರ ಜಾರಕಿಹೋಳಿ ಅವರ ಆಪ್ತ ಕಾರ್ಯದರ್ಶಿಯಾದ ದಾಸಪ್ಪ ನಾಯಕ್ ಉದ್ಘಾಟಿಸಿ ಮಾತನಾಡಿ, ಕ್ರೀಡಾಪಟ್ಟಗಳನ್ನು ಕ್ರೀಡೆಯಲ್ಲಿ ಸೊಲು-ಗೇಲುವನ್ನು …

Read More »

ಸೆ.14ರಂದು ಕೃಷಿ ಪರಿಕರ ಮಾರಟಗಾರ ತರಬೇತಿಯ ಪ್ರಮಾಣ ಪತ್ರ ವಿತರಣೆ

ಸೆ.14ರಂದು ಕೃಷಿ ಪರಿಕರ ಮಾರಟಗಾರ ತರಬೇತಿಯ ಪ್ರಮಾಣ ಪತ್ರ ವಿತರಣೆ ಮೂಡಲಗಿ: ತಾಲೂಕಿನ ತುಕ್ಕಾನಟ್ಟಿ ಐ.ಸಿ.ಏ.ಆರ -ಬಡ್ರ್ಸ ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆದ ಕೃಷಿ ಪರಿಕರ ಮಾಟಗಾರರ ತರಬೇತಿಯ ಪ್ರಮಾಣ ಪತ್ರ ವಿತರಣಾ ಸಮಾರಂಭ ಸೆ.14 ರಂದು ಮುಂಜಾನೆ 11 ಗಂಟೆಗೆ ತುಕ್ಕಾನಟ್ಟಿ ಕೆ.ವಿ.ಕೆ ಸಭಾ ಭವನದಲ್ಲಿ ಜರುಗಲಿದೆ. ಸಮಾರಂಭದ ಅಧ್ಯಕ್ಷತೆಯನ್ನು ಐ.ಸಿ.ಏ.ಆರ -ಬಡ್ರ್ಸ ಕೃಷಿ ವಿಜ್ಞಾನ ಕೇಂದ್ರದ ಚೇರಮನ್ನ ಆರ್.ಎಮ್.ಪಾಟೀಲ ವಹಿಸುವರು, ಮುಖ್ಯ ಅತಿಥಿಗಳಾಗಿ ರಾಜ್ಯ ಸಭಾ ಸದಸ್ಯ …

Read More »