Breaking News
Home / Recent Posts (page 238)

Recent Posts

ಆತ್ಮ ನಿರ್ಭರ ಭಾರತವಾಗಲು ನಾವೆಲ್ಲರೂ ಪಣ ತೊಡಬೇಕಿದೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನ. 26 ರಂದು ಗೋಕಾಕದಲ್ಲಿ ಸಂವಿಧಾನ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಆತ್ಮ ನಿರ್ಭರ ಭಾರತವಾಗಲು ನಾವೆಲ್ಲರೂ ಪಣ ತೊಡಬೇಕಿದೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನ. 26 ರಂದು ಗೋಕಾಕದಲ್ಲಿ ಸಂವಿಧಾನ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ‘ನಮ್ಮ ಭಾರತದ ಸಂವಿಧಾನವು ಜಗತ್ತಿನ ಅತೀ ದೊಡ್ಡ ಹಾಗೂ ಯಶಸ್ವಿ ಪ್ರಜಾಪ್ರಭುತ್ವವನ್ನು ಹೊಂದಿರುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದರ ಶ್ರೇಯಸ್ಸು ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ ಅವರಿಗೆ ಸಲ್ಲುತ್ತದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ …

Read More »

ನ.27ರಂದು ರೈತ ಸಂಪರ್ಕ ಕೇಂದ್ರದ ನೂತನ ಕಟ್ಟಡ ಉದ್ಘಾಟನಾ ಸಮಾರಂಭ

ನ.27ರಂದು ರೈತ ಸಂಪರ್ಕ ಕೇಂದ್ರದ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಬನವಾಸಿ: ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಶಿರಸಿ ತಾಲೂಕು ಪಂಚಾಯತ್ ಮತ್ತು ತಾಲೂಕು ಆಡಳಿತ ಹಾಗೂ ಶಿರಸಿ ಕೃಷಿ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಆರ್‍ಐಡಿಎಫ್-23 ಯೋಜನೆಯಡಿಯಲ್ಲಿ ನಿರ್ಮಿಸಿರುವ ಬನವಾಸಿ ರೈತ ಸಂಪರ್ಕ ಕೇಂದ್ರದ ನೂತನ ಕಟ್ಟಡ ಉದ್ಘಾಟನಾ ಸಮಾರಂಭವೂ ನ.27ರಂದು ಸಂಜೆ 4 ಗಂಟೆಗೆ ಬನವಾಸಿ ರೈತ ಸಂಪರ್ಕ ಕೇಂದ್ರದ ಆವರಣ, ಕದಂಬೋತ್ಸವ ಮೈದಾನದಲ್ಲಿ ಜರುಗಲಿದೆ ಎಂದು …

Read More »

ಪಿಕೆಪಿಎಸ್‍ಗಳು ರೈತರ ಜೀವನಾಡಿಗಳು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ 42 ಲಕ್ಷ ರೂ. ವೆಚ್ಚದ ಕಲ್ಲೋಳಿ ಪಿಕೆಪಿಎಸ್ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ

ಪಿಕೆಪಿಎಸ್‍ಗಳು ರೈತರ ಜೀವನಾಡಿಗಳು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ 42 ಲಕ್ಷ ರೂ. ವೆಚ್ಚದ ಕಲ್ಲೋಳಿ ಪಿಕೆಪಿಎಸ್ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ‘ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ರೈತರಿಗೆ ಕಷ್ಟಕರ ಸಮಸ್ಯೆಗಳು ಎದುರಾದಾಗ ಅವರಿಗೆ ಸಾಲ ಸೌಲಭ್ಯಗಳನ್ನು ನೀಡುವ ಮೂಲಕ ರೈತರ ಜೀವನಾಡಿಗಳು’ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರ ಸಂಜೆ ತಾಲೂಕಿನ …

Read More »

ಕುರುಬ ಸಮುದಾಯಕ್ಕೆ ಪರಿಶಿಷ್ಠ ಪಂಗಡ (ಎಸ್.ಟಿ) ಮೀಸಲಾತಿ ಅತ್ಯಾವಶ್ಯಕವಾಗಿದೆ- ರಾಜ್ಯ ಎಸ್.ಟಿ ಹೋರಾಟ ಸಮೀತಿ ಕಾರ್ಯದರ್ಶಿ ಹಾಗೂ ಮಾಜಿ ಪ್ರದೇಶ ಕುರುಬರ ಸಂಘದ ರಾಜ್ಯಾಧ್ಯಕ್ಷ ಡಾ. ರಾಜೇಂದ್ರ ಸಣ್ಣಕ್ಕಿ

ಮೂಡಲಗಿ: ಪ್ರಸಕ್ತ ದಿನಗಳಲ್ಲಿ ನಮ್ಮ ಹಕ್ಕನ್ನು ಪಡೆಯುವದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಹೋರಾಟದ ಮೂಲಕ ಸರಕಾರದ ಗಮನ ಸೆಳೆದು ಕುರುಬ ಸಮುದಾಯಕ್ಕೆ ಪರಿಶಿಷ್ಠ ಪಂಗಡ (ಎಸ್.ಟಿ) ಮೀಸಲಾತಿ ಅತ್ಯಾವಶ್ಯಕವಾಗಿದೆ ಎಂದು ಕರ್ನಾಟಕ ರಾಜ್ಯ ಎಸ್.ಟಿ ಹೋರಾಟ ಸಮೀತಿ ಕಾರ್ಯದರ್ಶಿ ಹಾಗೂ ಮಾಜಿ ಪ್ರದೇಶ ಕುರುಬರ ಸಂಘದ ರಾಜ್ಯಾಧ್ಯಕ್ಷ ಡಾ. ರಾಜೇಂದ್ರ ಸಣ್ಣಕ್ಕಿ ಹೇಳಿದರು. ಅವರು ಪಟ್ಟಣದ ಶ್ರೀ ಶಿವಬೋಧರಂಗ ಅರ್ಬನ್ ಸೊಸೈಟಿಯಲ್ಲಿ ಜರುಗಿದ ‘ಬಾಗಲಕೋಟೆಯಲ್ಲಿ ನಂ. 29 ರಂದು ಜರುಗುವ …

Read More »

ಕಸದ ರಾಶಿ ರಸ್ತೆಯ ತುಂಬೆಲ್ಲ ಹರಡಿಕೊಂಡಿದ್ದು ಕಸ ತೆರವಿಗೆ ಮುಂದಾಗದಿರುವ ಬನವಾಸಿ ಗ್ರಾಮ ಪಂಚಾಯಿತಿಯ ವಿರುದ್ದ ಸಾರ್ವಜನಿಕರು ಅಕ್ರೋಶ

ವರದಿ-ಸುಧೀರ ನಾಯರ್ ಬನವಾಸಿ: ಪಟ್ಟಣದ ಬಹಳಷ್ಟು ಕಡೆ ರಸ್ತೆಗಳ ಬದಿಯಲ್ಲಿ ಹಾಕಿರುವ ಕಸದ ರಾಶಿ ರಸ್ತೆಯ ತುಂಬೆಲ್ಲ ಹರಡಿಕೊಂಡಿದ್ದು ಕಸ ತೆರವಿಗೆ ಮುಂದಾಗದಿರುವ ಬನವಾಸಿ ಗ್ರಾಮ ಪಂಚಾಯಿತಿಯ ವಿರುದ್ದ ಸಾರ್ವಜನಿಕರು ಅಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ರಸ್ತೆಯ ಅಕ್ಕ ಪಕ್ಕದಲ್ಲಿರುವ ನಿವಾಸಿಗಳು ಮನೆಯ ತ್ಯಾಜ್ಯಗಳನ್ನು ರಸ್ತೆಗೆ ತಂದು ಹಾಕುತ್ತಿರುವುದರಿಂದ ಪರಿಸರ ತುಂಬೆಲ್ಲ ಕಸ ತುಂಬಿ ಸುತ್ತಲಿನ ವಾತವಾರಣ ಗಬ್ಬೆದ್ದು ನಾರುತ್ತಿದೆ. ಗ್ರಾಮ ಪಂಚಾಯಿತಿ ಕಸವನ್ನು ಹಾಕಲು ಸ್ಥಳದ ಜೊತೆ ಸೂಕ್ತ ವ್ಯವಸ್ಥೆ …

Read More »

ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್

ಬನವಾಸಿ: ಜಿಲ್ಲೆಯ ಪ್ರತಿಷ್ಠಿತ ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರನ್ನು ಬನವಾಸಿಯ ಬಿಜೆಪಿ ಮುಖಂಡ ದ್ಯಾಮಣ್ಣ ದೊಡ್ಮನಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಬನವಾಸಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Read More »

ದೇಶದ ಅಭಿವೃದ್ದಿಯ ದೃಷ್ಟಿಯಿಂದ ಅವರ ದೈಹಿಕ, ಮಾನಸಿಕ ಹಾಗೂ ಆರೋಗ್ಯದ ಬಗ್ಗೆ ತಿಳಿವಳಿಕೆ

ಬನವಾಸಿ: ಹದಿಹರೆಯದ ಹೆಣ್ಣು ಮಕ್ಕಳು ದೇಶದ ಮುಂದಿನ ಪ್ರಜೆಗಳು, ದೇಶದ ಅಭಿವೃದ್ದಿಯ ದೃಷ್ಟಿಯಿಂದ ಅವರ ದೈಹಿಕ, ಮಾನಸಿಕ ಹಾಗೂ ಆರೋಗ್ಯದ ಬಗ್ಗೆ ತಿಳಿವಳಿಕೆ ಮೂಡಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಸುಗಾವಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಧಿಕಾರಿ ಡಾ. ರಾಘವೇಂದ್ರ ನಾಯ್ಕ್ ಹೇಳಿದರು. ಅವರು ಸಮೀಪದ ಸುಗಾವಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಸುಗಾವಿ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಹದಿಹರೆಯದ ಹೆಣ್ಣು ಮಕ್ಕಳಿಗೆ ಆರೋಗ್ಯದ ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ …

Read More »

ಬಾಗಕೋಟೆಯಲ್ಲಿ ಜರುಗಲಿರುವ ಎಸ್.ಟಿ ಮೀಸಲಾತಿ ಹೋರಾಟದ ಮೂಡಲಗಿ ತಾಲೂಕಿನ ಹಾಲುಮತ ಬಂಧುಗಳ ಪೂರ್ವಭಾವಿ ಸಭೆ

ಮೂಡಲಗಿ: ನಂ 29 ರಂದು ಬಾಗಕೋಟೆಯಲ್ಲಿ ಜರುಗಲಿರುವ ಎಸ್.ಟಿ ಮೀಸಲಾತಿ ಹೋರಾಟದ ಮೂಡಲಗಿ ತಾಲೂಕಿನ ಹಾಲುಮತ ಬಂಧುಗಳ ಪೂರ್ವಭಾವಿ ಸಭೆಯನ್ನು ನಂ. 25 ಬುಧವಾರ ರಂದು 10:00 ಘಂಟೆಗೆ ಸ್ಥಳೀಯ ಶ್ರೀ ಶಿವಬೋಧರಂಗ ಅರ್ಬನ್ ಕೋ ಆಪ್ ಬ್ಯಾಂಕನಲ್ಲಿ ಕರೆಯಲಾಗಿದೆ ಎಂದು ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಡಾ.ಎಸ್.ಎಸ್ ಪಾಟೀಲ, ಕಾರ್ಯದರ್ಶಿ ಭೀಮಶಿ ಮಗದುಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪೂರ್ವಭಾವಿ ಸಭೆಯಲ್ಲಿ ರಾಜ್ಯ ಎಸ್.ಟಿ ಹೋರಾಟ ಸಮೀತಿ ಪ್ರಧಾನ ಕಾರ್ಯದರ್ಶಿ ಡಾ. …

Read More »

ಅರಭಾವಿಯಲ್ಲಿ 28 ಕೋಟಿ ರೂ. ವೆಚ್ಚದ ಸರಕಾರಿ ಉಪಕರಣಾಗಾರ ಮತ್ತು ಪರಿಣಿತ ಕೇಂದ್ರದ ಸಂಕೀರ್ಣ ಉದ್ಘಾಟಿಸಿದ ಡಿಸಿಎಂ

ಯುವಕರ ಭವಿಷ್ಯಕ್ಕೆ ಜಿಟಿಟಿಸಿ ಸಂಸ್ಥೆಯು ಉತ್ತಮ ಬುನಾದಿ : ಡಿಸಿಎಂ ಡಾ.ಅಶ್ವತ್ಥ್ ನಾರಾಯಣ. ಅರಭಾವಿಯಲ್ಲಿ 28 ಕೋಟಿ ರೂ. ವೆಚ್ಚದ ಸರಕಾರಿ ಉಪಕರಣಾಗಾರ ಮತ್ತು ಪರಿಣಿತ ಕೇಂದ್ರದ ಸಂಕೀರ್ಣ ಉದ್ಘಾಟಿಸಿದ ಡಿಸಿಎಂ ಅರಭಾವಿಯಲ್ಲಿ ಜಿಟಿಟಿಸಿ ಕೇಂದ್ರವಾಗಲು ರಮೇಶ ಹಾಗೂ ಸತೀಶ ಜಾರಕಿಹೊಳಿ ಅವರ ಪಾತ್ರ ಅಪಾರ : ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ಮೂಡಲಗಿ : ನುರಿತ ಮಾನವ ಸಂಪನ್ಮೂಲವನ್ನು ಕೈಗಾರಿಕಾ ಕ್ಷೇತ್ರಕ್ಕೆ ಒದಗಿಸಿ ಆ ಮೂಲಕ ಕೈಗಾರಿಕಾ ಸಂಸ್ಥೆಗಳ ಅಭಿವೃದ್ಧಿಗೆ …

Read More »

ಮೂಡಲಗಿಯಲ್ಲಿ ಇನೋಂದು ಕೃಷಿ ಪತ್ತಿನ ಸಹಕಾರಿ ಸಂಘ ಸ್ಥಾಪನೆ ಮಾಡ ಬೇಕಾಗಿದೆ- ಸುಭಾಸ.ಗಿ. ಢವಳೇಶ್ವರ

ಮೂಡಲಗಿ ಶ್ರೀ ಸಾಯಿ ಸೌಹಾರ್ದ ಸಹಕಾರಿ ನಿಯಮಿತ ವತಿಯಿಂದ ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಿಗೆ ಸನ್ಮಾನ ಮೂಡಲಗಿ: ಶ್ರೀ ಸಾಯಿ ಸೌಹಾರ್ದ ಸಹಕಾರಿ ನಿಯಮಿತ ಮೂಡಲಗಿ ಇದರ ಆಡಳಿತ ಮಂಡಳಿ ವತಿಯಿಂದ ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾದ ಸುಭಾಸ.ಗಿ. ಢವಳೇಶ್ವರ ಅವರಿಗೆ ಸತ್ಕಾರ ಮಾಡಲಾಯಿತು. ಸತ್ಕಾರ ಸ್ವೀಕರಿಸಿ ಮಾತನಾಡುತ್ತಾ ಈರಣ್ಣ ಹೋಸುರ ನೇತ್ರತ್ವದಲ್ಲಿ ಮೂಡಲಗಿಯಲ್ಲಿ ಇನೋಂದು ಕೃಷಿ ಪತ್ತಿನ ಸಹಕಾರಿ ಸಂಘ ಸ್ಥಾಪನೆ ಮಾಡ ಬೇಕಾಗಿದೆ ಎಂದು ಹೇಳಿ ಸಹಕಾರಿ ಸಂಘದ ಆಡಳಿತ …

Read More »