ನ.29 ರಂದು ವಿಶೇಷ ಅಗತ್ಯತೆವುಳ್ಳ ಮಕ್ಕಳ ವೈಧ್ಯಕೀಯ ತಪಾಸನಾ ಶಿಬಿರ ಮೂಡಲಗಿ: ಸನ್.2022-23 ನೇ ಸಾಲಿನ 1 ರಿಂದ 10 ನೇ ತರಗತಿಯಲ್ಲಿರುವ ಮೂಡಲಗಿ ವಲಯದ ಎಲ್ಲ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿನ ವಿಶೇಷ ಅಗತ್ಯತೆವುಳ್ಳ ಮಕ್ಕಳ ವೈಧ್ಯಕೀಯ ತಪಾಸನಾ ಶಿಬಿರವನ್ನು ನ.29 ರಂದು ಮುಂಜಾನೆ 10 ಗಂಟೆಯಿಂದ ಸಾಯಂಕಾಲ 5-30 ರ ವರೆಗೆ ನಾಗನೂರ ಪಟ್ಟಣದ ಶ್ರೀ ಮಹಾಲಿಂಗೇಶ್ವರ ಶಿಕ್ಷಣ ಸಂಸ್ಥೆಯಲ್ಲಿ …
Read More »*ರೈತರ ಪ್ರೋತ್ಸಾಹ ಧನ ಹೆಚ್ಚಳಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸರ್ಕಾರಕ್ಕೆ ಮನವಿ*
*ರೈತರ ಪ್ರೋತ್ಸಾಹ ಧನ ಹೆಚ್ಚಳಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸರ್ಕಾರಕ್ಕೆ ಮನವಿ* *ಡಾ.ವರ್ಗಿಸ್ ಕುರಿಯನ್ ಜನ್ಮ ದಿನಾಚರಣೆ ನಿಮಿತ್ಯ ರಾಷ್ಟ್ರೀಯ ಹಾಲು ದಿನಾಚರಣೆ ಕಾರ್ಯಕ್ರಮದಲ್ಲಿ ಈ ಹೇಳಿಕೆ ನೀಡಿದ ಬಾಲಚಂದ್ರ ಜಾರಕಿಹೊಳಿ* ಬೆಂಗಳೂರು: ಹೈನುಗಾರಿಕೆಯಲ್ಲಿ ರೈತರು ಎದುರಿಸುತ್ತಿರುವ ಸಂಕಷ್ಟಗಳನ್ನು ನಿವಾರಿಸಲು ಕೆಎಂಎಫ್‍ನಿಂದ ನಂದಿನಿ ಹಾಲನ್ನು ಪ್ರತಿ ಲೀಟರ್ 2 ರೂ.ಗೆ ಹೆಚ್ಚಳ ಮಾಡಲಾಗಿದ್ದು, ಈಗಾಗಲೇ ಸರ್ಕಾರ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹ ಧನವನ್ನು ಹೆಚ್ಚಿಸುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ …
Read More »ಶ್ರೀನಿವಾಸ ಶಾಲೆಯಲ್ಲಿ ಕಾನೂನು ಸಾಕ್ಷರತಾ ಕಾರ್ಯಕ್ರಮ
ಶ್ರೀನಿವಾಸ ಶಾಲೆಯಲ್ಲಿ ಕಾನೂನು ಸಾಕ್ಷರತಾ ಕಾರ್ಯಕ್ರಮ ಮೂಡಲಗಿ: ವಿದ್ಯಾರ್ಥಿಗಳು ಮೋಬೈಲ್ ಬಳಕೆಯಿಂದ ದೂರವಿದ್ದು ವಿದ್ಯಾರ್ಜನೆ ಕಡೆ ಗಮನಹರಿಸಿ ಸಮಾಜದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಮೂಡಲಗಿ ದಿವಾಣಿ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಧೀಶರಾದ ಜ್ಯೋತಿ ಪಾಟೀಲ ಹೇಳಿದರು. ಶನಿವಾರಂದು ಪಟ್ಟಣದ ಶ್ರೀನಿವಾಸ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಶ್ರೀನಿವಾಸ ಶಾಲೆಯಲ್ಲಿ ತಾಲೂಕಾ ಕಾನೂನು ಸೇವೆಗಳ ಸಮಿತಿ ಮತ್ತು ಮೂಡಲಗಿ ನ್ಯಾಯವಾದಿಗಳ ಸಂಘದ ಆಶ್ರಯದಲ್ಲಿ ಸಂವಿಧಾನ ದಿನಾಚರಣೆ ಅಂಗವಾಗಿ ಶಾಲಾ ಮಕ್ಕಳಿಗಾಗಿ ಏರ್ಪಡಿಸಿದ …
Read More »ಸ್ಪರ್ಧಾತ್ಮಕ ಯುಗದಲ್ಲಿ ಗ್ರಾಮೀಣ ವಿದ್ಯಾರ್ಥಿಗಳು ಯಶಸ್ವಿಯಾಗಲಿ- ಈರಣ್ಣ ಕಡಾಡಿ.
ಸ್ಪರ್ಧಾತ್ಮಕ ಯುಗದಲ್ಲಿ ಗ್ರಾಮೀಣ ವಿದ್ಯಾರ್ಥಿಗಳು ಯಶಸ್ವಿಯಾಗಲಿ- ಈರಣ್ಣ ಕಡಾಡಿ. ಮೂಡಲಗಿ: ಇಂದಿನ ಸ್ಪರ್ದಾತ್ಮಕ ಹಾಗೂ ತಂತ್ರಜ್ಞಾನ ಯುಗದಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯುವದರೊಂದಿಗೆ ಉತ್ತಮ ಭವಿಷ್ಯ ನಿರ್ಮಿಸಿಕೊಂಡು ಜೀವನದಲ್ಲಿ ಯಶಸ್ವಿಯಾಗಲಿ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಅವರು ತಾಲೂಕಿನ ತುಕ್ಕಾನಟ್ಟಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಂಸದರ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಸುಮಾರು ಎರಡೂವರೆ ಲಕ್ಷ ರೂಪಾಯಿಗಳ ಅನುದಾನದಲ್ಲಿ ನಿರ್ಮಿಸಿದ ಸ್ಮಾರ್ಟ್ ಕ್ಲಾಸ್ ಯೋಜನೆಗೆ ಚಾಲನೆ ನೀಡಿ …
Read More »ಕಾನೂನು ಅರಿತು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ: ನದಾಫ್
ಕಾನೂನು ಅರಿತು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ: ನದಾಫ್ ಮೂಡಲಗಿ: ವಿದ್ಯಾರ್ಥಿಗಳು ಕಾನೂನು ಅರಿತುಕೊಂಡು ಸಮಾಜದಲ್ಲಿ ಯಾವುದೇ ರೀತಿಯ ಅಪರಾಧ ಚಟುವಟಿಕೆಗಳಿಗೆ ಒಳಗಾಗದೆ ಉತ್ತಮ ಭವಿಷ್ಯತ್ತನ್ನು ನಿರ್ಮಿಸಿಕೊಳ್ಳಬೇಕು ಎಂದು ಸ್ಥಳೀಯ ಪೆÇಲೀಸ್ ಠಾಣೆಯ ಸಹಾಯಕ ಉಪ ನಿರೀಕ್ಷಕರಾದ ಎಮ್.ಬಿ.ನದಾಫ್ ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.. ಅವರು ಪಟ್ಟಣದ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಕಾರ್ಯ ವಿಭಾಗದ ವತಿಯಿಂದ ಆಯೋಜಿಸಿದ್ದ “ಕಾನೂನು ಅರಿವು” ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. …
Read More »*ಅಭಿಮಾನಿಗಳ ಸಮ್ಮುಖದಲ್ಲಿ ಅದ್ದೂರಿಯಾಗಿ ತಮ್ಮ ಹುಟ್ಟು ಹಬ್ಬ ಆಚರಿಸಿಕೊಂಡ ಸರ್ವೋತ್ತಮ.*
*ಜಾರಕಿಹೊಳಿ ಕುಟುಂಬಕ್ಕೆ ಜನರೇ ಬ್ರ್ಯಾಂಡ್… ಸರ್ವೋತ್ತಮ ಜಾರಕಿಹೊಳಿ* *ಅಭಿಮಾನಿಗಳ ಸಮ್ಮುಖದಲ್ಲಿ ಅದ್ದೂರಿಯಾಗಿ ತಮ್ಮ ಹುಟ್ಟು ಹಬ್ಬ ಆಚರಿಸಿಕೊಂಡ ಸರ್ವೋತ್ತಮ.* *ಗೋಕಾಕ*: ಜನರ ಆಶೀರ್ವಾದವೇ ನಮ್ಮ ಕುಟುಂಬಕ್ಕೆ ಶ್ರೀರಕ್ಷೆಯಾಗಿದೆ. ಕಳೆದ ನಾಲ್ಕು ದಶಕಗಳಿಂದ ಸಾರ್ವಜನಿಕ ಕ್ಷೇತ್ರದಲ್ಲಿರುವ ನಮ್ಮ ಕುಟುಂಬಕ್ಕೆ ಎಲ್ಲ ರೀತಿಯ ಸಹಕಾರ ಹಾಗೂ ಬೆಂಬಲ ನೀಡುತ್ತಿರುವ ಜನರೇ ನಮ್ಮ ಕುಟುಂಬಕ್ಕೆ ಬ್ರ್ಯಾಂಡ್ ಆಗಿದ್ದಾರೆಂದು ಯುವ ಮುಖಂಡ ಸರ್ವೋತ್ತಮ ಭೀಮಶಿ ಜಾರಕಿಹೊಳಿ ತಿಳಿಸಿದರು. ಶನಿವಾರದಂದು ನಗರದ ಮಹಾಲಕ್ಷ್ಮೀ ದೇವಸ್ಥಾನದ ಸಭಾ ಭವನದಲ್ಲಿ …
Read More »ಆಧುನಿಕ ತಂತ್ರಜ್ಞಾನದ ಮೂಲಕ ಶಿಕ್ಷಣ ಕಲಿಬೇಕು ಎನ್ನುವ ಉದ್ದೇಶದಿಂದ ಪ್ರಾಯೋಜಿಕವಾಗಿ ಐದು ಸ್ಮಾರ್ಟ್ ಕ್ಲಾಸ್‍ಗಳನ್ನು ನೀಡಲಾಗಿದೆ – ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ
ಮೂಡಲಗಿ : ಮಕ್ಕಳ ಭವಿಷ್ಯದಲ್ಲಿ ಶಿಕ್ಷಣ ಅನ್ನುವುದು ಮುಂದಿನ ದಿನಗಳಲ್ಲಿ ಬಹಳ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಹೀಗಾಗಿ ಮೊದಲಿನ ಶಿಕ್ಷಣ ಪದ್ಧತಿಯಲ್ಲಿ ಹೊಸ ಬದಲಾವಣೆಯನ್ನು ತರಬೇಕು ಹಾಗೂ ಆಧುನಿಕ ತಂತ್ರಜ್ಞಾನದ ಮೂಲಕ ಶಿಕ್ಷಣ ಕಲಿಬೇಕು ಎನ್ನುವ ಉದ್ದೇಶದಿಂದ ಪ್ರಾಯೋಜಿಕವಾಗಿ ಐದು ಸ್ಮಾರ್ಟ್ ಕ್ಲಾಸ್‍ಗಳನ್ನು ನೀಡಲಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಶುಕ್ರವಾರದಂದು ಪಟ್ಟಣದ ಕೃಷ್ಣಪ್ಪ ಹ.ಸೋನವಾಲಕರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟಿಸಿ ಮಾತನಾಡಿದ …
Read More »ವಡೇರಹಟ್ಟಿ ಗ್ರಾಮದಲ್ಲಿ ಆರೋಗ್ಯ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಇಲಾಖೆಯ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
ಮೂಡಲಗಿ: ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಆರೋಗ್ಯ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಇಲಾಖೆಯ ಸಹಯೋಗದಲ್ಲಿ ನರೇಗಾ ಯೋಜನೆಯಡಿ ಮಹಿಳಾ ಉದ್ಯೋಗ ಸಬಲೀಕರಣ ಅಭಿಯಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ಜರುಗಿತು. ಸಮುದಾಯ ಆರೋಗ್ಯಾಧಿಕಾರಿ ಡಾ.ಸಂಜಯ ಕಬ್ಬೂರ ಮಾತನಾಡಿ, ಗ್ರಾಮಸ್ಥರು ನರೇಗಾ ಯೋಜನೆಯಡಿ ಹಮ್ಮಿಕೊಂಡಿರುವ ಉಚಿತ ಆರೋಗ್ಯ ತಪಾಸಣಾ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು. ಆರೋಗ್ಯದ ಕಡೆಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದರು. ತಾಪಂ ಸಹಾಯಕ ನಿರ್ದೇಶಕ ಸಂಗಮೇಶ ರೊಡ್ಡನ್ನವರ …
Read More »ಬೆಟಗೇರಿ ಚೈತನ್ಯ ಸೊಸೈಟಿ ಶಾಖೆಯಲ್ಲಿ ಸಹಕಾರಿ ಸಪ್ತಾಹ ಆಚರಣೆ
ಬೆಟಗೇರಿ ಚೈತನ್ಯ ಸೊಸೈಟಿ ಶಾಖೆಯಲ್ಲಿ ಸಹಕಾರಿ ಸಪ್ತಾಹ ಆಚರಣೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಚೈತನ್ಯ ಅರ್ಬನ್ ಕೋ-ಆಫ್ ಕ್ರೇಡಿಟ್ ಸೊಸೈಟಿ ಶಾಖೆಯಲ್ಲಿ ಅಖಿಲ ಭಾರತ ಸಹಕಾರಿ ಸಪ್ತಾಹ ಪ್ರಯುಕ್ತ ನ.14ರಂದು ಸಹಕಾರಿ ಸಪ್ತಾಹ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಶಾಖೆಯ ಮುಖ್ಯ ಕಾರ್ಯನಿವಾಹಕ ವಿಠಲ ನೇಮಗೌಡರ ಸಹಕಾರಿ ಪಿತಾಮಹ ಶಿದ್ದನಗೌಡ ಪಾಟೀಲ ಅವರ ಭಾವ ಚಿತ್ರಕ್ಕೆ ಪೂಜೆ, ಪುಷ್ಪಾರ್ಪನೆ ಸಮರ್ಪಿಸಿ ಬಳಿಕ ಸಹಕಾರಿ ಧ್ವಜಾರೋಹಣ ನೆರವೇರಿಸಿದರು. ಬನಪ್ಪ ಚಂದರಗಿ, ವಿವೇಕ …
Read More »ಸಂಘಗಳನ್ನು ಬಲವರ್ಧನೆಗೊಳಿಸುವ ಜವಾಬ್ದಾರಿ ನಮ್ಮ ಯುವಕರ ಕೈಯಲ್ಲಿದೆ- ಸಿದ್ದಣ್ಣ ದುರದುಂಡಿ
ಮೂಡಲಗಿ: ಹೊಸ ಸಂಘಗಳ ರಚನೆ ಮತ್ತು ನಿಸ್ಕ್ರೀಯಗೊಂಡ ಹಳೆಯ ಸಂಘಗಳನ್ನು ಬಲವರ್ಧನೆಗೊಳಿಸುವ ಜವಾಬ್ದಾರಿ ನಮ್ಮ ಯುವಕರ ಕೈಯಲ್ಲಿದೆ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಬೆಳಗಾವಿ ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ ಹೇಳಿದರು. ಅವರು ಮೂಡಲಗಿ ತಾಲೂಕಿನ ಖಂಡ್ರಟ್ಟಿ ಗ್ರಾಮದ ಶ್ರೀ ಮಹರ್ಷಿ ವಾಲ್ಮೀಕಿ ಮಹಿಳಾ ಮಂಡಲ ನೋಂದಣಿ ಪ್ರಮಾಣ ಪತ್ರ ನೀಡಿ ಸಂಘ ಉದ್ಘಾಟಸಿ ಮಾತನಾಡುತ್ತಾ ಹಲವಾರು ಜನಜಾಗೃತಿ ಕಾರ್ಯಕ್ರಮಗಳನ್ನು ಮಾಡಿ ಮಹಿಳೆಯರನ್ನು ಮುಖ್ಯವಾಹಿನಿಗೆ ಬರಬೇಕು ಎಂದು ಹೇಳಿದರು. …
Read More »