Breaking News
Home / Uncategorized (page 3)

Uncategorized

ಲಯನ್ಸ್ ಕ್ಲಬ್‍ನ 100ನೇ ಅನ್ನದಾಸೋಹ

ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ರೋಗಿಗಳಿಗೆ 100ನೇ ಅನ್ನದಾಸೋಹವನ್ನು ಅ. 28ರಂದು ಮಧ್ಯಾಹ್ನ 12ಕ್ಕೆ ಏರ್ಪಡಿಸಿರುವರು. ಅನ್ನದಾಸೋಹ ಕಾರ್ಯಕ್ರಮದ ಸಾನಿಧ್ಯವನ್ನು ಶಿವಬೋಧರಂಗ ಮಠದ ದತ್ತಾತ್ರಯಬೋಧ ಸ್ವಾಮಿಗಳು ವಹಿಸುವರು. ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಪರಿವಾರದ ಅಧ್ಯಕ್ಷ ಸಂಜಯ ಮೋಕಾಶಿ ವಹಿಸುವರು. ಉದ್ಘಾಟನೆಯನ್ನು ಲಯನ್ಸ್ ಕ್ಲಬ್ ಡಿಸ್ಟ್ರೀಕ್ಟ್ ಗವರ್ನರ್ ಹುಬ್ಬಳ್ಳಿಯ ಉದ್ಯಮಿ ಮನೋಜ ಮಾನೇಕ ನೆರವೇರಿಸುವರು. ಮುಖ್ಯ ಅತಿಥಿಯಾಗಿ ಪುರಸಭೆ ಮುಖ್ಯಾಧಿಕಾರಿ …

Read More »

ಕಲಾರಕೊಪ್ಪ ಚಾಮುಂಡೇಶ್ವರಿ ಜಾತ್ರೆಯಲ್ಲಿ ಪಾಲ್ಗೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಅರಭಾವಿ ಕ್ಷೇತ್ರವು ಕಳೆದ ೨೦ ವರ್ಷಗಳಿಂದ ಶಿಕ್ಷಣದಲ್ಲಿ ಮಹತ್ತರ ಸಾಧನೆ ಮಾಡುತ್ತಿದ್ದು, ಕಲಾರಕೊಪ ಗ್ರಾಮವೂ ಸಹ ಇದಕ್ಕೆ ಹೊರತಾಗಿಲ್ಲ. ಇಲ್ಲಿ ಸುಮಾರು ಜನ ಪೊಲೀಸ್ ಇಲಾಖೆ ಸೇರಿದಂತೆ ಸರ್ಕಾರದ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗ್ರಾಮಸ್ಥರ ಶೈಕ್ಷಣಿಕ ಕಾಳಜಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಮಂಗಳವಾರ ಸಂಜೆ ತಾಲ್ಲೂಕಿನ ಕಲಾರಕೊಪ್ಪ ಗ್ರಾಮದ ಚಾಮುಂಡೇಶ್ವರಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ …

Read More »

ನ.28ಕ್ಕೆ ಸರ್ಕಾರಿ ನೌಕರರ ಸಂಘದ ತಾಲೂಕಾ ಘಟಕದ ಚುನಾವಣೆ

  ಮೂಡಲಗಿ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮೂಡಲಗಿ ತಾಲೂಕಾ ಘಟಕದ 2024- 29ನೇ ಅವಧಿಗೆ ವಿವಿಧ ಇಲಾಖೆಯ ಒಟ್ಟು 24 ಸದಸ್ಯರ ಆಯ್ಕೆಗೆ ಚುನಾವಣಾ ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದೆ ಎಂದು ಚುನಾವಣಾಧಿಕಾರಿ ಹಾಗೂ ವಡೇರಟ್ಟಿ ಗ್ರಾ. ಪಂ ಅಭಿವೃದ್ಧಿ ಅಧಿಕಾರಿ ಶಿವಾನಂದ ಗುಡಸಿ ಪತ್ರಿಕಾ ಪ್ರಕಣೆಯ ಮೂಲಕ ತಿಳಿಸಿದ್ದಾರೆ. ರಾಜ್ಯ ಚುನಾವಣಾಧಿಕಾರಿಗಳ ಅಧಿಸೂಚನೆ ಅನ್ವಯ ಚುನಾವಣಾ ವೇಳಾಪಟ್ಟಿ ನಿಗದಿಪಡಿಸಲಾಗಿದೆ. ತಾಲೂಕು ಶಾಖೆಯ ನಿರ್ದೇಶಕರ ಸ್ಥಾನದ ಚುನಾವಣೆಗಳು 2024ರ …

Read More »

ಒಂದು ಪುಸ್ತಕ ಹೊರ ತರುವದು ಎಂದರೆ ಅದು ಗಜಪ್ರಸವ ಇದ್ದಂತೆ- ಸಾಹಿತಿ ಸಂಗಮೇಶ ಗುಜಗೊಂಡ

ಮೂಡಲಗಿ : ಚುಟುಕು ಸಾಹಿತ್ಯ ಪರಿಷತ್ತು ಮೂಡಲಗಿ ಹಾಗೂ ಮಡಿವಾಳ ಪ್ರಕಾಶನ ಕೊಣ್ಣೂರ ಇವರ ಸಹಯೋಗದಲ್ಲಿ ಚೈತನ್ಯ ಅರ್ಬನ್ ಕೋ-ಆಫ್ ಕ್ರೆಡಿಟ್ ಸೊಸೈಟಿ   ಮೂಡಲಗಿಯಲ್ಲಿ ಅನಿಲ ಮಡಿವಾಳರ ರವರ “ಭೂಮಿ ನಂಬಿ ಬದುಕೇವು!” ಕವನ ಸಂಕಲನ ಲೋಕಾರ್ಪಣೆ ಕಾರ್ಯಕ್ರಮ ನೆರವೇರಿತು. ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಹಿರಿಯ ಸಾಹಿತಿಗಳಾದ ಸಂಗಮೇಶ ಗುಜಗೊಂಡ ರವರು ಒಂದು ಪುಸ್ತಕ ಹೊರ ತರುವದು ಎಂದರೆ ಅದು ಗಜಪ್ರಸವ ಇದ್ದಂತೆ ಎಂದು ಹೇಳುತ್ತಾ ಕವಿಯ …

Read More »

 ‘ಹೊಸಟ್ಟಿಗೆ ‘ಹೊಸ ಬೆಳಕು’ ನೀಡಿದ ಶಿಕ್ಷಕರು’ 

ಇಂದು ಶಿಕ್ಷಕರ ದಿನಾಚರಣೆಗೆ ಸಜ್ಜಾಗಿರುವ ಹೊಸಟ್ಟಿ ಗ್ರಾಮ    ‘ಹೊಸಟ್ಟಿಗೆ ‘ಹೊಸ ಬೆಳಕು’ ನೀಡಿದ ಶಿಕ್ಷಕರು’  ವರದಿ: ಬಾಲಶೇಖರ ಬಂದಿ   ಮೂಡಲಗಿ: ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಭವಿಷ್ಯವಿಲ್ಲ ಎಂದು ಮೂಗು ಮುರಿಯವವರಿಗೆ ಮೂಡಲಗಿ ತಾಲ್ಲೂಕಿನ ಹೊಸಟ್ಟಿ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ಶಿಕ್ಷಕರ ಮಾರ್ಗದರ್ಶನದಲ್ಲಿ ಕಲಿತ ಅದೆಷ್ಟೋ ಮಕ್ಕಳು ಮಾಡಿರುವ ಸಾಧನೆಯನ್ನು ಗಮನಿಸಿದರೆ ಅಚ್ಚರಿಪಡುವಂತಿದೆ. ಒಂದು ಅವಧಿಯಲ್ಲಿ ಕುಗ್ರಾಮ ಎನಿಸಿದ್ದ ಹೊಸಟ್ಟಿ  ಸರ್ಕಾರಿ ಶಾಲೆಯಲ್ಲಿ ಕಲಿತ ಗ್ರಾಮದ ಪರುಶರಾಮ ನಾಯಿಕ ಎನ್‌ಡಿಎ …

Read More »

ಮೂಡಲಗಿಯಲ್ಲಿ ವಿಶ್ವ ಛಾಯಾಗ್ರಾಹಕ ದಿನಾಚರಣೆ

ಪಟ್ಟಣದಲ್ಲಿ ನೂತನವಾಗಿ ಪ್ರಾರಂಭವಾದ ವೃತ್ತಿನಿರತ ಛಾಯಾಗ್ರಾಹಕ ಸಂಘದ ಕಚೇರಿಯಲ್ಲಿ ವಿಶ್ವ ಛಾಯಾಗ್ರಾಹಕ ದಿನಾಚರಣೆ ಅಂಗವಾಗಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಹಿರಿಯ ಛಾಯಾಗ್ರಾಹಕ ಅರ್ಜುನ ದೊಂಗಡಿಯವರನ್ನು ಸತ್ಕರಿಸಿ ಗೌರವಿಸಲಾಯಿತು. ಮೂಡಲಗಿ: ಇಂದಿನ ಯುವಜನತೆ ಹೆಚ್ಚಾಗಿ ಪೋನ್‍ಗಳಲ್ಲಿ ಪೋಟೋಗಳನ್ನು ಕ್ಲಿಕಿಸುತ್ತಿರುವುದರಿಂದ ಛಾಯಾಗ್ರಾಹಕರ ಬದುಕಿಗೆ ಬರೆ ಎಳೆದಂತಾಗಿದೆ ಎಂದು ಹಿರಿಯ ಛಾಯಾಗ್ರಾಹಕ ಅರ್ಜುನ ದೊಂಗಡಿ ಬೆಸರ ವ್ಯಕ್ತಡಿಸಿದರು. ಪಟ್ಟಣದಲ್ಲಿ ನೂತನವಾಗಿ ಪ್ರಾರಂಭವಾದ ವೃತ್ತಿನಿರತ ಛಾಯಾಗ್ರಾಹಕ ಸಂಘದ ಕಚೇರಿಯಲ್ಲಿ ವಿಶ್ವ ಛಾಯಾಗ್ರಾಹಕ ದಿನಾಚರಣೆ ಅಂಗವಾಗಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ …

Read More »

ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಂದ ಅಸಹಕಾರ ಚಳುವಳಿ

ಮೂಡಲಗಿ ತಾಲ್ಲೂಕಾ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ಸಂಘದ ಪದಾಧಿಕಾರಿಗಳು ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಬುಧವಾರ ಅಸಹಕಾರ ಚಳುವಳಿ ಮಾಡಿ ತಾಲ್ಲೂಕು ಪಂಚಾಯ್ತಿ ಇಒ ಎಫ್.ಎಸ್. ಚಿನ್ನನವರ ಅವರಿಗೆ ಮನಿವಿ ನೀಡಿದರು ———————————————– ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಂದ ಅಸಹಕಾರ ಚಳುವಳಿ ಮೂಡಲಗಿ: ರಾಜ್ಯದ ಎಲ್ಲಾ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಪ್ರಮುಖ ಬೇಡಿಕೆಗಳಾದ ಪಿಡಿಒ ಅವರ ರಾಜ್ಯ ಮಟ್ಟದ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಬೇಕು ಸೇರಿದಂತೆ ಹಲವು ಬೇಡಿಕೆಗಳಿಗೆ ಒತ್ತಾಯಿಸಿ ಮೂಡಲಗಿ …

Read More »

ರಾಜ್ಯವನ್ನು ಕಾಲು ಬಾಯಿ ರೋಗ ಮುಕ್ತವನ್ನಾಗಿಸಲು ಪಣ ತೊಡುವಂತೆ ರೈತರಿಗೆ ಬಾಲಚಂದ್ರ ಜಾರಕಿಹೊಳಿ ಕರೆ

*ಜಾನುವಾರಗಳು ಈ ದೇಶದ ಆಸ್ತಿ. ಅವುಗಳ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ- ಶಾಸಕ ಬಾಲಚಂದ್ರ ಜಾರಕಿಹೊಳಿ* *ರಾಜ್ಯವನ್ನು ಕಾಲು ಬಾಯಿ ರೋಗ ಮುಕ್ತವನ್ನಾಗಿಸಲು ಪಣ ತೊಡುವಂತೆ ರೈತರಿಗೆ ಬಾಲಚಂದ್ರ ಜಾರಕಿಹೊಳಿ ಕರೆ* ಮೂಡಲಗಿ: ಜಾನುವಾರುಗಳಿಗೆ ಕಾಲು ಬಾಯಿ ರೋಗ ಲಸಿಕೆಯನ್ನು ಹಾಕಿಸುವ ಮೂಲಕ ರೋಗ ಬಾರದಂತೆ ಜಾನುವಾರುಗಳನ್ನು ರಕ್ಷಿಸಬೇಕು. ಈ ಮೂಲಕ ಕಾಲು ಬಾಯಿ ರೋಗ ಮುಕ್ತ ವಲಯವನ್ನಾಗಿ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರೈತ ಬಾಂಧವರಲ್ಲಿ ಮನವಿ ಮಾಡಿಕೊಂಡರು. …

Read More »

ಉಚಿತ ಸ್ಪರ್ಧಾತ್ಮಕ ತರಬೇತಿಗೆ ಅರ್ಜಿ ಆಹ್ವಾನ*

ಉಚಿತ ಸ್ಪರ್ಧಾತ್ಮಕ ತರಬೇತಿಗೆ ಅರ್ಜಿ ಆಹ್ವಾನ* ಮೂಡಲಗಿ: ಮೂಡಲಗಿ ಪಟ್ಟಣದಲ್ಲಿ ಅರಭಾಂವಿ ಮತ ಕ್ಷೇತ್ರದ ವ್ಯಾಪ್ತಿಯಲ್ಲಿನ ಸ್ಪರ್ಧಾತ್ಮಕ ಪರೀಕ್ಷೆ ವಿದ್ಯಾರ್ಥಿಗಳಿಗಾಗಿ ಉಚಿತವಾಗಿ ಕಹಾಮಾ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಸ್ಪರ್ಧಾ ವಿವೇಕ ಸಂಸ್ಥೆಯಿoದ ಸುಮಾರು ಎರಡು ನೂರುಕ್ಕು ಹೆಚ್ಚು ವಿದ್ಯಾರ್ಥಿಗಳಿಗೆ ವಿವಿಧ ಹದ್ದೆಗಳ ಉಚಿತ ಸ್ಪರ್ಧಾತ್ಮಕ ಪರೀಕ್ಷೆಯನ್ನು ಮೂರು ತಿಂಗಳ ಕಾಲ ತರಬೇತಿ ನೀಡಲಾಗುವುದು, ಆಸ್ತಕ ವಿದ್ಯಾರ್ಥೀಗಳಿಂದ ಅರ್ಜಿಗಳನ್ನು ಆಹ್ವಾನಿಸಲ್ಲಾಗಿದೆ ಸ್ಪರ್ಧಾ ವಿವೇಕ ಸಂಸ್ಥೆಯ ನಿರ್ದೇಶಕ …

Read More »