*ಬ್ಯಾಟ್ ಬೀಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.*
ಗೋಕಾಕ: ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ನೌಕರರ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬ್ಯಾಟ್ ಬೀಸುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಮತ್ತು ತಾಲೂಕ ಆಡಳಿತ ಹಾಗೂ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಸಂಘವು ಶುಕ್ರವಾರದಂದು ಆಯೋಜಿಸಿದ್ದ ಹೊನಲು- ಬೆಳಕಿನ ಕ್ರಿಕೆಟ್ ಪಂದ್ಯಾವಳಿಯಲ್ಲಿ ಶಾಸಕ ಮತ್ತು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಮೊದಲ ಉದ್ಘಾಟನಾ ಪಂದ್ಯದಲ್ಲಿ ಟಾಸ್ಕ ಮಾಡಿದರು.
ನಂತರ ನೌಕರರ ಸಂಘದ ಕೋರಿಕೆಯ ಮೇರೆಗೆ ಕ್ರಿಕೆಟ್ ಆಡಿದರು. ಅದು ಒಂದೇ ಒಂದು ಬಾಲ್ ಎದುರಿಸಿದರು.
ಮೊದಲಿನಿಂದಲೂ ಕ್ರಿಕೆಟ್ ಆಟಗಾರರಾಗಿರುವ ಬಾಲಚಂದ್ರ ಜಾರಕಿಹೊಳಿ ಅವರು ಸಾಂಕೇತಿಕವಾದ ಒಂದು ಬಾಲ್ ಗೆ ಬ್ಯಾಟ್ ಬೀಸಿದಾಗ ಕ್ರೀಡಾಭಿಮಾನಿಗಳು ಚಪ್ಪಾಳೆ ತಟ್ಟಿದರು.
ಪೂರ್ವ ನಿಗದಿತ ಬೇರೊಂದು ಕಾರ್ಯಕ್ರಮದಲ್ಲಿ ಭಾಗಿಯಾಗಲು ತೆರಳುತ್ತಿದ್ದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಗೋಕಾಕ್ ತಹಶೀಲ್ದಾರ್ ಮೋಹನ್ ಭಸ್ಮೆ ಅವರು ಪಂದ್ಯಾವಳಿಗೆ ಬರುವಂತೆ
ಭೆಟ್ಟಿ ಮಾಡಿ ಮನವಿ ಮಾಡಿಕೊಂಡರು.
IN MUDALGI Latest Kannada News