ಇಸ್ರೋದ ಮಾಜಿ ಅಧ್ಯಕ್ಷ, ವಿಜ್ಞಾನಿ ಪ್ರೊ.ಕೆ. ಕಸ್ತೂರಿ ರಂಗನ್ ಅವರು ನಿಧನ ಸುದ್ದಿ ಕೇಳಿ ಆಘಾತವಾಗಿದೆ. ರಂಗನ್ ಅವರು ಕೇವಲ ಬಾಹ್ಯಾಕಾಶ ಮಾತ್ರವಲ್ಲ, ಪರಿಸರ, ಶಿಕ್ಷಣ, ರಾಜಕೀಯ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಜತೆಗೆ ಕ್ರಿಯಾಶೀಲರಾಗಿ ಹಲವಾರು ಕೊಡುಗೆಗಳನ್ನು ಅವರು ನೀಡಿದ್ದಾರೆ. ಅವರನ್ನು ಕಳೆದುಕೊಂಡ ದೇಶಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿಯನ್ನು ಕೋರುತ್ತೇನೆ.
*-ಬಾಲಚಂದ್ರ ಜಾರಕಿಹೊಳಿ, ಶಾಸಕ, ಬೆಮುಲ್ ಅಧ್ಯಕ್ಷರು*
