ಗೋಕಾಕ- ಹಿರಿಯ ಚತುರ್ಭಾಷೆ ತಾರೆ, ಪದ್ಮಭೂಷಣ ಬಿ.ಸರೋಜಾದೇವಿ ಅವರ ನಿಧನಕ್ಕೆ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಸಂತಾಪ ಸೂಚಿಸಿದ್ದಾರೆ.
ಸ್ಯಾಂಡಲ್ವುಡ್ ಸೇರಿದಂತೆ ಸುಮಾರು ನಾಲ್ಕು ಭಾಷೆಗಳಲ್ಲಿ ನೂರಾರು ಚಿತ್ರಗಳಲ್ಲಿ ಅಭಿನಯಿಸಿರುವ ಇವರು ಅಭಿನಯ ಸರಸ್ವತಿ ಎಂದೇ ಖ್ಯಾತಿಯಾಗಿದ್ದರು. ಸುಮಾರು ೨೦೦ ಕ್ಕೂ ಅಧಿಕ ಚಿತ್ರಗಳಲ್ಲಿ ಅಭಿನಯಿಸಿರುವ ಸರೋಜಾದೇವಿ ಅವರ ನಿಧನದಿಂದ ಚಿತ್ರರಂಗ ಬಡವಾಗಿದೆ. ಇವರ ಆತ್ಮಕ್ಕೆ ಭಗವಂತನು ಚಿರಶಾಂತಿಯನ್ನು ನೀಡಲಿ. ಮೃತರ ಕುಟುಂಬದಲ್ಲಾದ ದುಃಖದಲ್ಲಿ ನಾವು ಸಹ ಭಾಗಿಯಾಗುತ್ತೇವೆಂದು ತಮ್ಮ ಸಂತಾಪದಲ್ಲಿ ಸೂಚಿಸಿದ್ದಾರೆ.
