Breaking News
Home / ಬೆಳಗಾವಿ / ಬೇಸಿಗೆಯ ಸಮಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಬರದಂತೆ ಈಗಿನಿಂದಲೇ ಕಾರ್ಯಪ್ರವೃತ್ತರಾಗಿ – ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ

ಬೇಸಿಗೆಯ ಸಮಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಬರದಂತೆ ಈಗಿನಿಂದಲೇ ಕಾರ್ಯಪ್ರವೃತ್ತರಾಗಿ – ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love

ಗೋಕಾಕ್- ಬೇಸಿಗೆಯ ಸಮಯದಲ್ಲಿ
ಸಾರ್ವಜನಿಕರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಗಳು ಬರದಂತೆ ಈಗಿನಿಂದಲೇ ಕಾರ್ಯಪ್ರವೃತ್ತರಾಗುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಅಧಿಕಾರಿಗಳಿಗೆ ಸೂಚಿಸಿದರು.
ಸೋಮವಾರದಂದು ತಾಲ್ಲೂಕಿನ ದುರದುಂಡಿ ಗ್ರಾಮ ಪಂಚಾಯತಿ ಸಭಾ ಭವನದಲ್ಲಿ ಕರೆಯಲಾಗಿದ್ದ ಮೂಡಲಗಿ ಮತ್ತು ಗೋಕಾಕ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಸಂಭವನೀಯ ಕುಡಿಯುವ ನೀರಿನ ಸಮಸ್ಯೆಗಳು ಎದುರಾಗದಂತೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಕೊಳ್ಳಲು ಶಾಸಕರು ಸೂಚನೆಗಳನ್ನು ನೀಡಿದರು.
ಈಗ ಆರಂಭವಾಗಿರುವ ಬೇಸಿಗೆಯು ಮೇ ತಿಂಗಳತನಕ ಮುಂದುವರೆಯಲಿದ್ದು, ಈ ಮೂರು ತಿಂಗಳ ಅವಧಿಯಲ್ಲಿ ಜನರಿಗೆ ಕುಡಿಯುವ ನೀರಿನ ಸಮಸ್ಯೆಗಳು ಬರದಂತೆ ಪ್ರತಿ ಗ್ರಾಮಗಳಲ್ಲಿ ಅಧಿಕಾರಿಗಳು ನೀಗಾ ವಹಿಸಬೇಕು. ಎಲ್ಲಿ ಯಾವ ಸಮಸ್ಯೆಗಳು ಉದ್ಭವವಾಗಿವೆ. ಅವುಗಳ ಪರಿಹಾರಕ್ಕೆ ಅಗತ್ಯವಿರುವ ಕ್ರಮಗಳು ಯಾವವು ಎಂಬುದನ್ನು ಚಿಂತಿಸಬೇಕು. ಕುಡಿಯುವ ನೀರು ಪೂರೈಸಲು ಮೇಲಾಧಿಕಾರಿಗಳ ಜತೆ ಸಮನ್ವಯ ಸಾಧಿಸಬೇಕು. ಬೇಸಿಗೆಯ ವೇಳೆಯಲ್ಲಿ ಕೆಲವೆಡೆ ಕುಡಿಯುವ ನೀರಿನ ಆಹಾಕಾರ ಉಂಟಾಗಬಹುದು. ಎಲ್ಲೆಲ್ಲಿ ಸಮಸ್ಯೆಗಳು ಆವರಿಸಬಹುದೆಂಬುದನ್ನು ಅಧಿಕಾರಿಗಳು ಪಟ್ಟಿಯನ್ನು ತಯಾರಿಸಬೇಕು. ಜನರಿಗೆ ಅಗತ್ಯ ಬಿದ್ದರೆ ಟ್ಯಾಂಕರ್ ಮೂಲಕ ನೀರು ಪೂರೈಸಲು ಕ್ರಮಗಳನ್ನು ತೆಗೆದುಕೊಳ್ಳಬೇಕು. ಬೋರ್ವೆಲ್ ಗಳನ್ನು ದುರಸ್ತಿ ಮಾಡಿಸಿ ಜನರಿಗೆ ಅನುಕೂಲ ಕಲ್ಪಿಸಿಕೊಡುವಂತೆ ಅವರು ಸೂಚಿಸಿದರು.
ರೈತರಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಲು ಅಧಿಕಾರಿಗಳು ಕ್ರಮಗಳನ್ನು ಕೈಗೊಳ್ಳಬೇಕು. ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಗಳು ನಡೆಯುತ್ತಿರುವುದರಿಂದ ಅವರ ಅಭ್ಯಾಸಕ್ಕೆ ಅನುಕೂಲವಾಗಲು ವಿದ್ಯುತ್ ಪೂರೈಕೆ ಮಾಡಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯಾಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿಲ್ಲ. ಇದರಿಂದ ರೋಗಿಗಳಿಗೆ ಸಮಸ್ಯೆಗಳು ಆಗುತ್ತಿವೆ ಎಂದು ಸಾರ್ವಜನಿಕರಿಂದ ವ್ಯಾಪಕವಾದ ದೂರುಗಳು ಬರುತ್ತಿವೆ. ತಕ್ಷಣವೇ ಕರ್ತವ್ಯಕ್ಕೆ ಗೈರಾಗುವ ವೈದ್ಯರ ವಿರುದ್ಧ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಲ್ಲದೇ ಸರಕಾರಿ ಆಸ್ಪತ್ರೆಗಳ ಮೇಲ್ವಿಚಾರಣೆಗಾಗಿ ಸ್ಥಳೀಯ ಮಟ್ಟದಲ್ಲಿ ಪಿಡಿಓ ಅವರು ಹೆಚ್ಚಿನ ಮುತುವರ್ಜಿ ವಹಿಸಬೇಕು. ಗೈರುಹಾಜರಾಗುವ ಸಿಬ್ಬಂದಿ ವಿರುದ್ಧ ಕ್ರಮಗಳನ್ನು ಕೈಕೊಳ್ಳಲು ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸುವಂತೆ ಅವರು ಸೂಚಿಸಿದರು.
ಅಕ್ರಮ ಮದ್ಯ ಮಾರಾಟಕ್ಕೆ ಪೋಲಿಸ್ ಅಧಿಕಾರಿಗಳು ಬ್ರೆಕ್ ಹಾಕಬೇಕು. ಪರವಾನಿಗೆ ಪಡೆದವರು ಮಾತ್ರ ಮದ್ಯ ಮಾರಾಟ ಮಾಡಬೇಕು. ಹಳ್ಳಿ- ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟದಿಂದ ಅನೇಕ ಸಮಸ್ಯೆಗಳು ಉದ್ಬವಿಸುತ್ತಿವೆ. ಕುಡಿತದಿಂದ ಅಪಘಾತಗಳು ಸಂಭವಿಸಬಹುದು. ಇದಕ್ಕೆಲ್ಲ ಅಧಿಕಾರಿಗಳು ಸೂಕ್ತ ಕ್ರಮಗಳನ್ನು ಕೈಕೊಳ್ಳಬೇಕು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಅಧಿಕಾರಿಗಳಿಗೆ ಸೂಚಿಸಿದರು.
ಮೂಡಲಗಿ ತಹಶೀಲ್ದಾರ ಶ್ರೀಶೈಲ ಗುಡುಮೆ, ಗೋಕಾಕ ತಾ.ಪಂ. ಇಓ ಪರಶುರಾಮ ಗಸ್ತೆ, ಮೂಡಲಗಿ ತಾ.ಪಂ.ಇಓ ನೇರ್ಲೇಕರ
ಸೇರಿದಂತೆ ತಾಲ್ಲೂಕು ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ಪುರಸಭೆ, ಪಟ್ಟಣ ಪಂಚಾಯತಿಗಳ ಮುಖ್ಯಾಧಿಕಾರಿಗಳು,
ಮೂಡಲಗಿ- ಗೋಕಾಕ ತಾಲೂಕಿನ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಆಡಳಿತ ಅಧಿಕಾರಿಗಳು, ಅಭಿಯಂತರರು, ಸೇರಿದಂತೆ ಅನೇಕರು ಭಾಗವಹಿಸಿದ್ದರು.


Spread the love

About inmudalgi

Check Also

*ಕ್ರೀಡಾ ಪ್ರತಿಭೆಗಳು ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಿ ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ*

Spread the love ಮೂಡಲಗಿ : ಗ್ರಾಮೀಣ ಆಟಗಾರರು ದೈಹಿಕವಾಗಿ ಮಾನಸಿಕವಾಗಿ ಸದೃಢ ಇರಬೇಕಾದರೆ ಮನುಷ್ಯನಿಗೆ ಕ್ರೀಡೆ ಅವಶ್ಯವಾಗಿರುತ್ತದೆ ಆಟದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ