Breaking News
Home / Recent Posts / 2023ರಲ್ಲಿ ಅರಭಾವಿ ಕ್ಷೇತ್ರದಿಂದ ಬಿಜೆಪಿಯಿಂದಲೇ ಸ್ಪರ್ಧೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಬಿಜೆಪಿ ಬಿಡುವುದಿಲ್ಲ. ಬೇರೆ ಪಕ್ಷ ಸೇರುವುದಿಲ್ಲ. ಇದು ವಿರೋಧಿಗಳ ಅಪಪ್ರಚಾರವೆಂದ ಬಾಲಚಂದ್ರ ಜಾರಕಿಹೊಳಿ

2023ರಲ್ಲಿ ಅರಭಾವಿ ಕ್ಷೇತ್ರದಿಂದ ಬಿಜೆಪಿಯಿಂದಲೇ ಸ್ಪರ್ಧೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಬಿಜೆಪಿ ಬಿಡುವುದಿಲ್ಲ. ಬೇರೆ ಪಕ್ಷ ಸೇರುವುದಿಲ್ಲ. ಇದು ವಿರೋಧಿಗಳ ಅಪಪ್ರಚಾರವೆಂದ ಬಾಲಚಂದ್ರ ಜಾರಕಿಹೊಳಿ

Spread the love

2023ರಲ್ಲಿ ಅರಭಾವಿ ಕ್ಷೇತ್ರದಿಂದ ಬಿಜೆಪಿಯಿಂದಲೇ ಸ್ಪರ್ಧೆ : ಶಾಸಕ ಬಾಲಚಂದ್ರ ಜಾರಕಿಹೊಳಿ
ಬಿಜೆಪಿ ಬಿಡುವುದಿಲ್ಲ. ಬೇರೆ ಪಕ್ಷ ಸೇರುವುದಿಲ್ಲ. ಇದು ವಿರೋಧಿಗಳ ಅಪಪ್ರಚಾರವೆಂದ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಯಾರು ಎಷ್ಟೇ ಸುಳ್ಳು ವದಂತಿಗಳನ್ನು ಹಬ್ಬಿಸುತ್ತಿದ್ದರೂ 2023 ರಲ್ಲಿ ನಡೆಯುವ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಅರಭಾವಿ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟಪಡಿಸಿದರು.
ನಗರದಲ್ಲಿ ಗುರುವಾರದಂದು ಜರುಗಿದ ಮಹಾಲಕ್ಷ್ಮೀ ಸಭಾ ಭವನವನ್ನು ಲೋಕಾರ್ಪಣೆಗೊಳಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ಬಗ್ಗೆ ಈಗಾಗಲೇ ಪಕ್ಷ ಬಿಡುತ್ತಿದ್ದೇನೆ ಎಂದು ಸುಳ್ಳು ಸುದ್ಧಿಗಳನ್ನು ಹಬ್ಬಿಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ. ಬೇರೆ ಪಕ್ಷ ಸೇರುವುದಿಲ್ಲವೆಂದು ಸ್ಪಷ್ಟಪಡಿಸಿದರು.
ಇತ್ತೀಚೆಗೆ ಬೆಳಗಾವಿಯಲ್ಲಿ ನಮ್ಮ ಪಕ್ಷದವರೇ ಸಭೆ ನಡೆಸಿದ್ದಾರೆ. ಅದು ಅಧಿಕೃತವೋ ಅಥವಾ ಅನಧೀಕೃತವೋ ಎಂಬುದನ್ನು ಪಕ್ಷದ ಮುಖಂಡರೇ ನಿರ್ಣಯಿಸಬೇಕು. ಒಂದು ವೇಳೆ ಅಧೀಕೃತವಾಗಿದ್ದರೆ ಪಕ್ಷದ ಅಧ್ಯಕ್ಷರು, ಲೋಕಸಭಾ ಸದಸ್ಯರು ಹಾಗೂ ಇನ್ನೀತರ ಶಾಸಕರಿಗೆ ಮಾಹಿತಿ ರವಾನಿಸಬೇಕಿತ್ತು. ಅದೂ ಅಲ್ಲದೇ ಸಭೆಯಲ್ಲಿ ಪಾಲ್ಗೊಂಡಿದ್ದ ಸಂಸದ ಕಡಾಡಿ ಮತ್ತು ಶಾಸಕ ರಾಜೀವ ಅವರೇ ಇದೇನು ಪಕ್ಷದ ಅಧೀಕೃತ ಸಭೆಯಲ್ಲ ಎಂದು ಅವರೇ ಹೇಳಿರುವುದು. ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಹೀಗಾಗಿ ಇದರ ಬಗ್ಗೆ ಹೆಚ್ಚಿನ ಮಾತನಾಡಲಾರೆ. ಆದರೆ ಒಂದಂತೂ ಸ್ಪಷ್ಟ. ಇಂತಹ ಬೆಳವಣಿಗೆಗಳು ನಡೆಯಬಾರದಿತ್ತು. ಪಕ್ಷಕ್ಕೆ ಮುಜುಗರವಾಗಬಹುದು ಎಂದು ಹೇಳಿದರು.
ರಮೇಶ ಜಾರಕಿಹೊಳಿ ಮತ್ತು ಇನ್ನೀತರ 17 ಜನ ಶಾಸಕರ ಬಲದೊಂದಿಗೆ ಇಂದು ಬಿಜೆಪಿಯಲ್ಲಿ ಕೆಲವರು ಅಧಿಕಾರ ಅನುಭವಿಸುತ್ತಿದ್ದಾರೆ. ಈ ಅಧಿಕಾರದ ರುಚಿಯಲ್ಲಿ ರಮೇಶ ಅವರ ಪಾತ್ರ ಬಹು ದೊಡ್ಡದಿದೆ. ಒಂದು ವೇಳೆ ರಮೇಶ ಜಾರಕಿಹೊಳಿ ಮತ್ತು ಸಂಗಡಿಗರು ಕಾಂಗ್ರೇಸ್ ಹಾಗೂ ಜೆಡಿಎಸ್ ಪಕ್ಷ ತೊರೆದು ಬಿಜೆಪಿಗೆ ಬರದಿದ್ದಲ್ಲಿ ನಾವು ಸರ್ಕಾರ ರಚಿಸಲು ಆಗುತ್ತಿರಲಿಲ್ಲ. ಇದನ್ನು ಅಧಿಕಾರ ಅನುಭವಿಸುತ್ತಿರುವವರು ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದರು.
ಪಕ್ಷ ಅಂದ ಮೇಲೆ ಭಿನ್ನಾಭಿಪ್ರಾಯ, ವೈಮನಸ್ಸು ಇರುವುದು ಸ್ವಾಭಾವಿಕವಾಗಿದೆ. ಜಿಲ್ಲೆಯಲ್ಲಿ ಉದ್ಭವಿಸಿರುವ ಸಮಸ್ಯೆಗಳನ್ನು ನಾವೆಲ್ಲರೂ ಕುಳಿತುಕೊಂಡು ಪರಿಹಾರ ಮಾಡಿಕೊಳ್ಳುತ್ತೇವೆ. ಸಚಿವರಾದ ಉಮೇಶ ಕತ್ತಿ, ಶಶಿಕಲಾ ಜೊಲ್ಲೆ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಮತ್ತೀತರರು ಶೀಘ್ರದಲ್ಲಿ ಸಭೆ ಸೇರಿ ಚರ್ಚಿಸುತ್ತೇವೆ. ಮುಂಬರುವ ಎಲ್ಲ ಚುನಾವಣೆಗಳಲ್ಲಿ ಬಿಜೆಪಿ ಗೆಲ್ಲಿಸಲು ಒಗ್ಗಟ್ಟಿನಿಂದ ಕಾರ್ಯತಂತ್ರಗಳನ್ನು ರೂಪಿಸುತ್ತೇವೆ ಎಂದು ಹೇಳಿದರು.
ರಮೇಶ ಜಾರಕಿಹೊಳಿ ಅವರಿಗೆ ಮಂತ್ರಿ ಸ್ಥಾನ ಕೊಡುವುದು ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರವಾಗಿದೆ. ಮುಂಬರುವ ಚುನಾವಣೆ ಹಾಗೂ ಸಂಘಟನೆ ಹಿತದೃಷ್ಟಿಯಿಂದ ರಮೇಶ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂಬುದು ನನ್ನ ವೈಯಕ್ತಿಕ ನಿಲುವಾಗಿದೆ. ಆದರೂ ವರಿಷ್ಠರ ತೀರ್ಮಾನಕ್ಕೆ ಬದ್ಧರಿರುವುದಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.


Spread the love

About inmudalgi

Check Also

ಮೂಡಲಗಿ ಮತ್ತು ಗೋಕಾಕ ತಾಲ್ಲೂಕುಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಅದರ ಆಡಳಿತ ಮಂಡಳಿಯ ಸದಸ್ಯರ ಸೌಹಾರ್ದಯುತ ಸಭೆ

Spread the love ಗೋಕಾಕ- ರೈತರ ಶ್ರೆಯೋಭಿವೃದ್ಧಿಗಾಗಿ ರೈತಮಿತ್ರನಾಗಿ ಕೆಲಸ ಮಾಡುತ್ತಿರುವ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕು ಮೂಡಲಗಿ ಮತ್ತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ