Breaking News
Home / Recent Posts / ಮೂಡಲಗಿ ವಲಯದ 197 ಅತಿಥಿ ಶಿಕ್ಷಕರಿಗೆ 34.82 ಲಕ್ಷ ರೂ.ಗಳ ವೈಯಕ್ತಿಕ ಗೌರವ ವೇತನ ವಿತರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಶಿಕ್ಷಕರಿಂದ ಮಾತ್ರ ಸಮಾಜದ ಪರಿವರ್ತನೆ ಸಾಧ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ ವಲಯದ 197 ಅತಿಥಿ ಶಿಕ್ಷಕರಿಗೆ 34.82 ಲಕ್ಷ ರೂ.ಗಳ ವೈಯಕ್ತಿಕ ಗೌರವ ವೇತನ ವಿತರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಶಿಕ್ಷಕರಿಂದ ಮಾತ್ರ ಸಮಾಜದ ಪರಿವರ್ತನೆ ಸಾಧ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love

ಮೂಡಲಗಿ ವಲಯದ 197 ಅತಿಥಿ ಶಿಕ್ಷಕರಿಗೆ 34.82 ಲಕ್ಷ ರೂ.ಗಳ ವೈಯಕ್ತಿಕ ಗೌರವ ವೇತನ ವಿತರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಶಿಕ್ಷಕರಿಂದ ಮಾತ್ರ ಸಮಾಜದ ಪರಿವರ್ತನೆ ಸಾಧ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ರಾಷ್ಟ್ರದ ಭವಿಷ್ಯವನ್ನು ಬದಲಾಯಿಸುವ ಸಾಮಥ್ರ್ಯ ಶಿಕ್ಷಕರಿಗಿದೆ. ಶಿಕ್ಷಕರಿಂದ ಮಾತ್ರ ಈ ಸಮಾಜದ ಬದಲಾವಣೆ ಸಾಧ್ಯವಿದೆ. ಶಿಕ್ಷಕರು ಸಹ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ವಿದ್ಯಾರ್ಥಿಗಳ ಸಾಧನೆಗೆ ಸಹಕಾರಿಯಾಗುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಭಾನುವಾರ ಸಂಜೆ ತಮ್ಮ ಗೃಹ ಕಛೇರಿ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಮೂಡಲಗಿ ಶೈಕ್ಷಣಿಕ ವಲಯದ ಅತಿಥಿ ಶಿಕ್ಷಕರಿಗೆ 34.82 ಲಕ್ಷ ರೂ.ಗಳ ಗೌರವ ವೇತನವನ್ನು ವಿತರಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಉತ್ತಮ ಜ್ಞಾನಾರ್ಜನೆ ನೀಡುವ ಕೆಲಸ ಶಿಕ್ಷಕರು ಮಾಡುವಂತೆ ಅವರು ಹೇಳಿದರು.


ಮೂಡಲಗಿ ಶೈಕ್ಷಣಿಕ ವಲಯವು ಇತ್ತೀಚಿನ ವರ್ಷಗಳಲ್ಲಿ ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡುತ್ತಿದೆ. ವಿವಿಧ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳು ಸೇವೆ ಸಲ್ಲಿಸುತ್ತಿದ್ದಾರೆ. ಅಲ್ಲದೇ ಸಾಕಷ್ಟು ಪ್ರತಿಷ್ಠಿತ ಹುದ್ದೆಗಳನ್ನು ಅಲಂಕರಿಸಿ ಸರ್ಕಾರಿ ಸೇವೆ ಸಲ್ಲಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಹ ಶೈಕ್ಷಣಿಕ ರಂಗದ ಸರ್ವಾಂಗೀಣ ಬೆಳವಣಿಗೆಗೆ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸಿದ್ದಾರೆ. ನಮ್ಮಲ್ಲಿಯೂ ಸಹ ಶೈಕ್ಷಣಿಕವಾಗಿ ಪ್ರಗತಿ ಸಾಧಿಸಲು ಕಳೆದ 15 ವರ್ಷಗಳಿಂದ ಶಿಕ್ಷಣ ಕ್ಷೇತ್ರಕ್ಕೆ ಪ್ರಥಮ ಪ್ರಾಶಸ್ತ್ಯ ನೀಡುತ್ತಿದ್ದೇವೆ. ಸಮಾಜದ ಪರಿವರ್ತನೆಯಲ್ಲಿ ಶಿಕ್ಷಣವೇ ಪ್ರಮುಖ ಅಸ್ತ್ರವಾಗಿದ್ದು, ಶಿಕ್ಷಣಕ್ಕೆ ಅಗತ್ಯವಾಗಿರುವ ಎಲ್ಲ ಮೂಲ ಸೌಕರ್ಯಗಳನ್ನು ಪ್ರಾಮಾಣಿಕವಾಗಿ ನೀಡುತ್ತಿದ್ದೇನೆ ಎಂದು ಹೇಳಿದರು.
ಶಿಕ್ಷಣವನ್ನು ಪಡೆದು ವಿದ್ಯಾವಂತರಾದರೆ ಸರ್ಕಾರದ ಸೌಲಭ್ಯಗಳನ್ನು ಪಡೆಯುವುದರ ಮೂಲಕ ಸಮಾಜದ ಹಕ್ಕನ್ನು ಪಡೆಯಲು ಸಶಕ್ತರಾಗುತ್ತೇವೆ. ಮೂಡಲಗಿ ಶೈಕ್ಷಣಿಕ ವಲಯ ಪ್ರಗತಿ ಸಾಧಿಸಲು ಶಿಕ್ಷಕರು ಉತ್ತಮವಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಗುಣಮಟ್ಟದ ಶಿಕ್ಷಣವನ್ನೂ ಸಹ ನೀಡುವ ಮೂಲಕ ಮಕ್ಕಳ ಕಲಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದಾರೆ. ಅದಕ್ಕಾಗಿ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಮತ್ತು ಅವರ ನೇತೃತ್ವದ ಶಿಕ್ಷಕ ಬಳಗಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.
ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಮಾತನಾಡಿ, ಕೋವಿಡ್ ಸಂದರ್ಭದಲ್ಲಿ ನಮಗೆ ಶಾಸಕರೇ ಸರ್ಕಾರವಾಗಿ ನಮ್ಮೆಲ್ಲ ಕುಂದು-ಕೊರತೆಗಳನ್ನು ನೀಗಿಸಿದ್ದಾರೆ. 197 ಅತಿಥಿ ಶಿಕ್ಷಕರಿಗೆ ಗೌರವ ಸಂಭಾವನೆ ನೀಡುತ್ತಿದ್ದಾರೆ. ಎಲ್ಲಿ ಶಿಕ್ಷಕರ ಕೊರತೆ ಉಂಟಾಗಿದೆಯೋ ಅಲ್ಲಿ ಗೌರವ ಶಿಕ್ಷಕರನ್ನು ನಿಯೋಜಿಸಿ ಅವರಿಗೆ ಪ್ರತಿ ತಿಂಗಳು ವೇತನವನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ನೀಡುತ್ತಾ ಬರುತ್ತಿದ್ದಾರೆ. 245 ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಕೊಠಡಿಗಳನ್ನು 29.40 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದಾರೆ. ಸರ್ಕಾರಿ ಪ್ರೌಢ ಶಾಲೆ ಕೊಠಡಿಗಳನ್ನು ಆರ್‍ಎಂಎಸ್‍ಎ ಯೋಜನೆಗಳಡಿ ನಿರ್ಮಿಸಲು 16 ಕೋಟಿ ರೂ.ಗಳನ್ನು ಮಂಜೂರು ಮಾಡಿಸಿದ್ದಾರೆ. 11 ಪ್ರೌಢ ಶಾಲೆಗಳಿಗೆ ತಲಾ 15 ಲಕ್ಷ ರೂ.ಗಳಂತೆ ಅಟಲ್ ಟಿಂಕರಿಂಗ್ ಲ್ಯಾಬ್‍ಗಳನ್ನು ಮಂಜೂರು ಮಾಡಿಸಿ ವಿದ್ಯಾರ್ಥಿಗಳಿಗೆ ತಾಂತ್ರಿಕ ಜ್ಞಾನ ನೀಡಲು ಈ ಲ್ಯಾಬ್ ಉಪಯುಕ್ತವಾಗಿದೆ. ವಿದ್ಯಾರ್ಥಿಗಳ ಪಾಲಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಾಮಧೇನು ಕಲ್ಪವೃಕ್ಷರಾಗಿದ್ದಾರೆ. ಅವರ ಕಷ್ಟಗಳಲ್ಲಿ ಭಾಗಿಯಾಗಿ ಪ್ರತಿ ಹಂತದಲ್ಲೂ ಆರ್ಥಿಕವಾಗಿ ಸಹಾಯ ಕಲ್ಪಿಸಿಕೊಡುವ ಮೂಲಕ ಶೈಕ್ಷಣಿಕ ರಂಗದ ಮಹತ್ತರ ಬೆಳವಣಿಗೆಗೆ ಕಾರಣೀಕರ್ತರಾಗಿದ್ದಾರೆ ಎಂದು ಹೇಳಿದರು.
ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಇದೇ ಸಂದರ್ಭದಲ್ಲಿ ತಮ್ಮ ಸ್ವಂತ ವೆಚ್ಚದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳ ಸುಮಾರು 197 ಅತಿಥಿ ಶಿಕ್ಷಕರಿಗೆ 34,82,500/- ರೂ.ಗಳ ಗೌರವ ಸಂಭಾವನೆ ವಿತರಿಸಿದರು.
2020-21 ರಲ್ಲಿ ನೀಟ್ ಪರೀಕ್ಷೆ ಮೂಲಕ ಎಂಬಿಬಿಎಸ್, ಎನ್‍ಐಟಿ ಸೂರತ್ಕಲ್ ಮತ್ತು ಧಾರವಾಡ ಐಐಐಟಿಗೆ ಪ್ರವೇಶ ಪಡೆದ ಮೂಡಲಗಿ ವಲಯದ 25 ವಿದ್ಯಾರ್ಥಿಗಳನ್ನು ಸತ್ಕರಿಸಿ, ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ತಜ್ಞ ವೈದ್ಯ ಡಾ.ಆರ್.ಎಸ್. ಬೆಣಚಿನಮರಡಿ, ಘಟಪ್ರಭಾ ಪಿಐ ಶ್ರೀಶೈಲ ಬ್ಯಾಕೋಡ, ಮೂಡಲಗಿ ಸಿಪಿಐ ವೆಂಕಟೇಶ ಮುರನಾಳ ಅವರು ಉಪಸ್ಥಿತರಿದ್ದರು.
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಮೂಡಲಗಿ ಶೈಕ್ಷಣಿಕ ವಲಯದ ಎಲ್ಲ ಸಿಆರ್‍ಸಿ ವಲಯಗಳಿಂದ ಹೃದಯಸ್ಪರ್ಶಿಯಾಗಿ ಸತ್ಕರಿಸಲಾಯಿತು.


Spread the love

About inmudalgi

Check Also

ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ

Spread the love ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ ಮೂಡಲಗಿ: ಕೆರಳಾದ ಶ್ರೀ ಶಟ್ ಶಾಸ್ತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ