Breaking News
Home / Recent Posts / ಅರುಣ ಶಹಾಪೂರ ಹಾಗೂ ಹನಮಂತ ನಿರಾಣಿ ಆಯ್ಕೆ ಖಚಿತ : ಎನ್. ರವಿಕುಮಾರ ಶಾಸಕರಾದ ರಮೇಶ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಅವರ ರಣತಂತ್ರದಿಂದ ಬಿಜೆಪಿ ಅಭ್ಯರ್ಥಿಗಳಿಗೆ ಸುಲಭದ ಜಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಜರುಗಿದ ಬಿಜೆಪಿ ಪ್ರಮುಖರ ಮತ್ತು ಕಾರ್ಯಕರ್ತರ ಸಭೆಯಲ್ಲಿ ಈ ಹೇಳಿಕೆ

ಅರುಣ ಶಹಾಪೂರ ಹಾಗೂ ಹನಮಂತ ನಿರಾಣಿ ಆಯ್ಕೆ ಖಚಿತ : ಎನ್. ರವಿಕುಮಾರ ಶಾಸಕರಾದ ರಮೇಶ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಅವರ ರಣತಂತ್ರದಿಂದ ಬಿಜೆಪಿ ಅಭ್ಯರ್ಥಿಗಳಿಗೆ ಸುಲಭದ ಜಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಜರುಗಿದ ಬಿಜೆಪಿ ಪ್ರಮುಖರ ಮತ್ತು ಕಾರ್ಯಕರ್ತರ ಸಭೆಯಲ್ಲಿ ಈ ಹೇಳಿಕೆ

Spread the love

ಗೋಕಾಕ : ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವ್ಯವಸ್ಥಿತ ಸಂಘಟನೆಯಿಂದಾಗಿ ಗೋಕಾಕ ಮತ್ತು ಅರಭಾವಿ ಕ್ಷೇತ್ರಗಳಲ್ಲಿ ಬಿಜೆಪಿಗೆ ಅತ್ಯಧಿಕ ಮತಗಳ ಮುನ್ನಡೆ ದೊರಕಲಿದ್ದು, ಪದವೀಧರ ಕ್ಷೇತ್ರದ ಅಭ್ಯರ್ಥಿ ಹನಮಂತ ನಿರಾಣಿ 50 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಆಯ್ಕೆಯಾಗಲಿದ್ದಾರೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ ಹೇಳಿದರು.


ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಗುರುವಾರ ಸಂಜೆ ವಾಯುವ್ಯ ಶಿಕ್ಷಕರ ಮತ್ತು ಪದವೀಧರ ಮತಕ್ಷೇತ್ರಗಳ ಚುನಾವಣೆ ನಿಮಿತ್ಯ ಜರುಗಿದ ಬಿಜೆಪಿ ಪ್ರಮುಖರ ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪದವೀಧರ ಕ್ಷೇತ್ರದಿಂದ ಸ್ಪರ್ಧಿಸಿರುವ ಹನಮಂತ ನಿರಾಣಿ ಅವರಿಗೆ ಪ್ರಮುಖ ಎದುರಾಳಿ ಯಾರಿಲ್ಲವೆಂದು ಹೇಳಿದರು.
ಶಿಕ್ಷಕರ ಕ್ಷೇತ್ರ ಈ ಬಾರಿ ಸ್ವಲ್ಪ ಕಠಿಣದಿಂದ ಕೂಡಿದ್ದು, ಆದರೂ ಬಿಜೆಪಿ ಅಭ್ಯರ್ಥಿ ಅರುಣ ಶಹಾಪೂರ ಅವರು ಆಯ್ಕೆಯಾಗಲಿದ್ದಾರೆ ಎಂದು ಹೇಳಿದ ಅವರು, ಈಗಾಗಲೇ ಸಮೀಕ್ಷೆಯಲ್ಲಿ ಮುನ್ನಡೆ ಮತಗಳನ್ನು ಕಾಯ್ದುಕೊಂಡಿದ್ದಾರೆ. ಗುಪ್ತಚರ ಮಾಹಿತಿಯಂತೆ ಶಹಾಪೂರ ಅವರು ಜಯಶಾಲಿಯಾಗಲಿದ್ದಾರೆ ಎಂದು ಅವರು ತಿಳಿಸಿದರು.
ಬೆಳಗಾವಿ, ಬಾಗಲಕೋಟ ಮತ್ತು ವಿಜಯಪುರ ಜಿಲ್ಲೆಗಳನ್ನೊಳಗೊಂಡ ವಾಯುವ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳು ಈ ಬಾರಿಯೂ ಬಿಜೆಪಿ ಪಾಲಾಗಲಿವೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಧನೆಗಳೇ ಇವರ ಆಯ್ಕೆಗೆ ಕಾರಣವಾಗಲಿವೆ. ಜೊತೆಗೆ ಶಿಕ್ಷಕರ ಮತ್ತು ಪದವೀಧರರ ಜ್ವಲಂತ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತಿರುವ ಶಹಾಪೂರ ಮತ್ತು ನಿರಾಣಿ ಅವರ ಜನಪ್ರೀಯ ಕಾರ್ಯಗಳು ಸಹ ಈ ಚುನಾವಣೆಯಲ್ಲಿ ನೆರವಾಗಲಿವೆ. ಪಕ್ಷದ ಕಾರ್ಯಕರ್ತರು ಮತದಾರರ ಮನೆ-ಮನೆಗಳಿಗೆ ತೆರಳಿ ಅಭ್ಯರ್ಥಿಗಳ ಗೆಲುವಿನಲ್ಲಿ ಮುಖ್ಯ ಪಾತ್ರ ವಹಿಸುವಂತೆ ಅವರು ಮನವಿ ಮಾಡಿಕೊಂಡರು.
ಶಾಸಕರಾದ ರಮೇಶ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಅವರು ಈಗಾಗಲೇ ಮೂರು ಸುತ್ತಿನ ಪ್ರಚಾರ ಕಾರ್ಯಗಳಲ್ಲಿ ಪಾಲ್ಗೊಂಡು ಬಿಜೆಪಿ ಅಭ್ಯರ್ಥಿಗಳ ಗೆಲುವಿಗಾಗಿ ರಣತಂತ್ರ ಹೆಣೆದಿದ್ದಾರೆ. ಜಾರಕಿಹೊಳಿ ಸಹೋದರರ ನಾಯಕತ್ವದಲ್ಲಿ ಅವಿಭಜಿತ ಗೋಕಾಕ ತಾಲೂಕಿನಲ್ಲಿ ಅತ್ಯಧಿಕ ಮತಗಳು ಬಿಜೆಪಿ ಅಭ್ಯರ್ಥಿಗಳಿಗೆ ಬರಲಿದ್ದು, ಈ ಚುನಾವಣೆಯಲ್ಲಿ ನೆಪಕ್ಕೆ ಮಾತ್ರ ಕಾಂಗ್ರೇಸ್ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ ಎಂದು ರವಿಕುಮಾರ ಅವರು ವ್ಯಂಗ್ಯವಾಡಿದರು.
ಈ ಸಂದರ್ಭದಲ್ಲಿ ಅರಭಾವಿ ಮಂಡಲ ಬಿಜೆಪಿ ಅಧ್ಯಕ್ಷ ಮಹಾದೇವ ಶೆಕ್ಕಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ, ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ, ಜಿಪಂ ಮಾಜಿ ಸದಸ್ಯ ಗೋವಿಂದ ಕೊಪ್ಪದ, ರಾಜ್ಯ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಈರಣ್ಣ ಅಂಗಡಿ, ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆನಂದ ಮೂಡಲಗಿ, ಜಿಲ್ಲಾ ಓಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಭೀಮಶಿ ಮಾಳೇದವರ, ಅರಭಾವಿ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಪರಸಪ್ಪ ಬಬಲಿ, ಮಹಾಂತೇಶ ಕುಡಚಿ ಹಾಗೂ ಬಿಜೆಪಿ ಪದಾಧಿಕಾರಿಗಳು ಉಪಸ್ಥಿತರಿದ್ದರು.


Spread the love

About inmudalgi

Check Also

‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’

Spread the love‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’ ಜನಮನ ಸೇಳೆದ ಕನ್ನಡ ಬುತ್ತಿ ಜಾತ್ರೆ ಕಾರ್ಯಕ್ರಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ