ಗೋಕಾಕ : ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡಲು ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರೀಯ ಆಡಳಿತವೇ ಕಾರಣ. ಹೀಗಾಗಿ ಮೋದಿ ಅವರು ವಿಶ್ವಮಾನ್ಯ ನಾಯಕರು ಎಂದು ಬಿಜೆಪಿ ರಾಷ್ಟ್ರೀಯ ಓಬಿಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಲಕ್ಷ್ಮಣ ತಪಸಿ ಹೇಳಿದರು.
ಇಲ್ಲಿಯ ಎನ್‍ಎಸ್‍ಎಫ್ ದಲ್ಲಿ ಅರಭಾವಿ ಮಂಡಲ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರೀಯ ಯೋಜನೆಗಳನ್ನು ಜನರ ಬಳಿ ಮುಂದಿಡುವಂತೆ ಕಾರ್ಯಕರ್ತರಿಗೆ ಸಲಹೆ ಮಾಡಿದರು.
ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಗುರುತಿಸಲು ಪ್ರಧಾನಿ ಮೋದಿ ಅವರು ಉತ್ತಮ ಆಡಳಿತ ಹಾಗೂ ಜನಪರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದಾರೆ. ಮೋದಿ ಅವರ ಆಡಳಿತದಲ್ಲಿ ಭಾರತ ದೇಶ ವಿಶ್ವದಲ್ಲಿಯೇ ಪ್ರಗತಿಶೀಲ ರಾಷ್ಟ್ರವಾಗಲು ದಾಪುಗಾಲು ಹಾಕುತ್ತಿದೆ. ದೇಶದಲ್ಲಿ ಯಾರೂ ನೀಡದ ಆಡಳಿತವನ್ನು ಮೋದಿ ಅವರು ತಮ್ಮ ಆಡಳಿತದಲ್ಲಿ ಅನುಷ್ಠಾನ ಮಾಡುವ ಮೂಲಕ ಇಡೀ ದೇಶಾದ್ಯಂತ ಬಿಜೆಪಿ ಅರಳಲು ಕಾರಣರಾಗಿದ್ದಾರೆ. ಮೋದಿ ಕೇವಲ ವ್ಯಕ್ತಿಯಲ್ಲ. ಅವರು ಶಕ್ತಿ ಎಂದು ಬಣ್ಣಿಸಿದರು.
ಮುಂಬರುವ ದಿನಗಳಲ್ಲಿ ಜಿಲ್ಲಾ ಪಂಚಾಯತ, ತಾಲೂಕಾ ಪಂಚಾಯತ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಹಾಗೂ ವಿಧಾನಸಭಾ ಚುನಾವಣೆಗಳು ಕೂಡ ಸಾಲುಸಾಲಾಗಿ ನಡೆಯಲಿವೆ. ಹೀಗಾಗಿ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಧನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಮಾಡಬೇಕು. 2023 ರಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ತಪಸಿ ವಿಶ್ವಾಸ ವ್ಯಕ್ತಪಡಿಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ ಮಾತನಾಡಿ, ಕೋವಿಡ್ ಸಮಯದಲ್ಲಿ ಅರಭಾವಿ ಕ್ಷೇತ್ರದ ಪ್ರತಿ ಕುಟುಂಬಗಳಿಗೆ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಆಹಾರ ಧಾನ್ಯಗಳ ಕಿಟ್‍ಗಳನ್ನು ವಿತರಿಸಿ ಇಡೀ ರಾಜ್ಯಕ್ಕೆ ಮಾದರಿಯಾದರು. ಇದರಲ್ಲಿ ಯಾವುದೇ ಪಕ್ಷಪಾತ ಮಾಡದೇ ಇಡೀ ಕ್ಷೇತ್ರದ ಎಲ್ಲ ಕುಟುಂಬಗಳಿಗೂ ಬಡವ-ಶ್ರೀಮಂತ ಬೇಧ-ಭಾವ ಮಾಡದೇ ಸರ್ವರಿಗೂ ಕಿಟ್‍ಗಳನ್ನು ವಿತರಿಸಿದರು. ಕೋವಿಡ್ ಸಮಯದಲ್ಲಿ ಬಿಜೆಪಿ ಕೇವಲ ರಾಜಕಾರಣ ಮಾಡದೇ ಸಾಮಾಜಿಕ ತಳಹದಿಯ ತತ್ವದಲ್ಲಿ ಜನರ ನೋವುಗಳಿಗೆ ಸ್ಪಂದಿಸುತ್ತಿರುವ ಏಕೈಕ ಪಕ್ಷ ಬಿಜೆಪಿ ಎಂದು ಹೇಳಿದರು.
ಅಧ್ಯಕ್ಷತೆಯನ್ನು ಅರಭಾವಿ ಮಂಡಲ ಬಿಜೆಪಿ ಅಧ್ಯಕ್ಷ ಮಹಾದೇವ ಶೆಕ್ಕಿ ವಹಿಸಿದ್ದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೀಪ ದೇಶಪಾಂಡೆ, ಜಿಲ್ಲಾ ಉಪಾಧ್ಯಕ್ಷ ಬಸನಗೌಡ ಕೊಳದೂರ, ಶಾಸಕರ ಆಪ್ತ ಸಹಾಯಕ ನಿಂಗಪ್ಪ ಕುರಬೇಟ, ಜಿಲ್ಲಾ ಕಾರ್ಯದರ್ಶಿ ಮುತ್ತೆಪ್ಪ ಮನ್ನಾಪೂರ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪರಸಪ್ಪ ಬಬಲಿ, ಮಹಾಂತೇಶ ಕುಡಚಿ, ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆನಂದ ಮೂಡಲಗಿ, ಓಬಿಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭೀಮಶಿ ಮಾಳೇದವರ, ಎಸ್‍ಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಈರಪ್ಪ ಢವಳೇಶ್ವರ, ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿ ಗುರು ಹಿರೇಮಠ, ಅರಭಾವಿ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ವಾಸಂತಿ ತೇರದಾಳ, ಓಬಿಸಿ ಮೋರ್ಚಾ ಅಧ್ಯಕ್ಷ ಸಂಗಣ್ಣ ಕಂಠಿಕಾರ, ಯುವ ಮೋರ್ಚಾ ಅಧ್ಯಕ್ಷ ಪ್ರಮೋದ ನುಗ್ಗಾನಟ್ಟಿ, ಎಸ್‍ಸಿ ಮೋರ್ಚಾ ಅಧ್ಯಕ್ಷ ನಾಗರಾಜ ಕುದರಿ, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಇಕ್ಬಾಲ್ ಸರ್ಕಾವಸ್, ದುಂಡಪ್ಪ ನಂದಗಾಂವ, ಸೇರಿದಂತೆ ಪಕ್ಷದ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
Home / Recent Posts / ನರೇಂದ್ರ ಮೋದಿ ವಿಶ್ವಮಾನ್ಯ ನಾಯಕ : ಲಕ್ಷ್ಮಣ ತಪಸಿ ಅರಭಾವಿ ಕ್ಷೇತ್ರದ ಎಲ್ಲ ಕುಟುಂಬಗಳಿಗೂ ಕೋವಿಡ್-19 ಸಮಯದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಆಹಾರ ಧಾನ್ಯಗಳ ಕಿಟ್ ವಿತರಣೆಗೆ ಶ್ಲಾಘನೆ ಗೋಕಾಕದಲ್ಲಿ ಶುಕ್ರವಾರದಂದು ಜರುಗಿದ ಬಿಜೆಪಿ ಅರಭಾವಿ ಮಂಡಲ ಕಾರ್ಯಕಾರಿಣಿ ಸಭೆ
Check Also
‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’
Spread the love‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’ ಜನಮನ ಸೇಳೆದ ಕನ್ನಡ ಬುತ್ತಿ ಜಾತ್ರೆ ಕಾರ್ಯಕ್ರಮ …