Breaking News
Home / Recent Posts / ಡೆಪ್ಯುಟಿ ಸ್ಪೀಕರ್ ಮಾಮನಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ

ಡೆಪ್ಯುಟಿ ಸ್ಪೀಕರ್ ಮಾಮನಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ

Spread the love

*ಡೆಪ್ಯುಟಿ ಸ್ಪೀಕರ್ ಮಾಮನಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ*

ಗೋಕಾಕ್- ವಿಧಾನಸಭೆಯ ಉಪ ಸಭಾಪತಿ ಹಾಗೂ ಸವದತ್ತಿ ಶಾಸಕ ಆನಂದ ಮಾಮನಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ.
ಕಳೆದ ಮೂರು ಅವಧಿಯಿಂದ ಸವದತ್ತಿ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಮಾಮನಿ ಅವರು ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸಿದ್ದರು. ಸವದತ್ತಿ ಯಲ್ಲಮ್ಮ ದೇವಸ್ಥಾನದ ಪ್ರಗತಿಗಾಗಿಯೂ ಸಾಕಷ್ಟು ಕೊಡುಗೆ ನೀಡಿದ್ದರು. ಇವರ ನಿಧನದಿಂದ ರಾಜ್ಯಕ್ಕೆ ತುಂಬಲಾರದ ಹಾನಿಯಾಗಿದೆ.
ಮೃತರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಮಾಮನಿ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಶೋಕ ಸಂತಾಪ ಸೂಚಕದಲ್ಲಿ ತಿಳಿಸಿದ್ದಾರೆ.


Spread the love

About inmudalgi

Check Also

ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ. ಮುಖ್ಯೋಪಾದ್ಯಾಯ — ಚಂದ್ರಕಾಂತ ಬಿ. ಪೂಜೇರಿ

Spread the loveಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ