ಗೋಕಾಕ: ಮುಂಗಾರ ಹಂಗಾಮಿಗಾಗಿ ರೈತರಿಗೆ ಬಿತ್ತನೆ ಬೀಜಗಳು ಅವಶ್ಯಕತೆಗಣುನವಾಗಿ ಹಾಗೂ ರಸಗೋಬ್ಬರದ ದಾಸ್ತಾನು ಮಾಡಲು ಕೃಷಿ ಇಲಾಖೆಗೆ ನೀಡಿದ ನಿರ್ದೇಶನದಂತೆ ದಾಸ್ತಾನವಿದ್ದು, ಅದನ್ನು ರೈತರು ಕೃಷಿ ಇಲಾಖೆಯಿಂದ ಪಡೆದು ಹೆಚ್ಚಿನ ಇಳುವರಿ ಪಡೆಯುವಂತೆ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಬುಧವಾರದಂದು ನಗರದ ತಮ್ಮ ಕಛೇರಿ ಆವರಣದಲ್ಲಿ ಕೃಷಿ ಇಲಾಖೆಯಿಂದ ಸಹಾಯಧನದಲ್ಲಿ ಬಿತ್ತನೆ ಬೀಜ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರೈತರಿಗೆ ಯಾವುದೇ ರೀತಿಯ ತೊಂದರೆಗಳಾದಂತೆ ಗಮನ ಹರಿಸಲು ಈಗಾಗಲೇ ಎಲ್ಲ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಸಹಾಯಕ ಕೃಷಿ ನಿರ್ದೇಶಕ ಎಂ.ಎಂ ನದಾಫ ಮಾತನಾಡಿ, ಮುಂಗಾರು ಹಂಗಾಮಿಗೆ ರೈತರಿಗೆ ಅನುಕೂಲವಾಗುವ ದೃಷ್ಟಿಯಿಂದ ರೈತ ಸಂರ್ಪಕ ಕೇಂದ್ರಗಳಾದ ಗೋಕಾಕ, ಅರಭಾವಿ, ಕೌಜಲಗಿ ಹಾಗೂ ಬೀಜ ಮಾರಾಟ ಕೇಂದ್ರಗಳ ಜೊತೆಗೆ 18 ಉಪ ಮಾರಾಟ ಕೇಂದ್ರಗಳಲ್ಲಿಯೂ ಬೀಜಗಳನ್ನು ವಿತರಿಸಲಾಗುತ್ತಿದೆ ರೈತರಿಗೆ ಬೇಕಾಗುವ ಸಾಕಷ್ಟು ಪ್ರಮಾಣದಲ್ಲಿ ಸೋಯಾಬಿನ, ಗೋವಿನ ಜೋಳ, ಹೆಸರು, ಸೂರ್ಯಕಾಂತಿ, ಹೈಬ್ರೀಡ್ ಜೋಳ ಇತ್ಯಾದಿ ಬೆಳೆಗಳ ಬೀಜಗಳನ್ನು ದಾಸ್ತಾನು ಮಾಡಿ ವಿತರಿಸಲಾಗುತ್ತಿದ್ದು, ರೈತರು ಆಧಾರ ಕಾರ್ಡ, ಪಹಣಿ ಪತ್ರಿಕೆ, ಬ್ಯಾಂಕ್ ಪಾಸಬುಕ್ಕುಗಳ ಝರಾಕ್ಸ ಪ್ರತಿಗಳೊಂದಿಗೆ ಬಂದು ಕೋವಿಡ್-19 ನಿಯಮಾವಳಿಗಳ ಪ್ರಕಾರ ಮಾಸ್ಕ ಧರಿಸಿ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಸಹಾಯಧನದಲ್ಲಿ ಬಿತ್ತನೆ ಬೀಜಗಳನ್ನು ಪಡೆಯಬೇಕು. ಸೋಯಾಬಿನ ಬಿತ್ತನೆ ಮಾಡಲು ಜೂ-1 ರಿಂದ ಜುಲೈ 15ರ ವರೆಗೆ ಸಮಯವಕಾಶವಿದ್ದು ಹದವಾದ ಮಳೆಯಾದ ಮೇಲೆ ಬಿತ್ತನೆ ಮಾಡಬೇಕು. ನೀರಾವರಿ ಸೌಲಭ್ಯ ವಿರುವವರು ಮೊದಲು ನೀರು ಹಾಯಿಸಿ ನಂತರ ಬಿತ್ತನೆ ಮಾಡಬೇಕೆಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಸದಸ್ಯ ಟಿ.ಆರ್.ಕಾಗಲ, ಮುಖಂಡರಾದ ಸುರೇಶ ಸನದಿ, ಲಕ್ಷೀಕಾಂತ ಎತ್ತನಮನಿ, ಕೃಷಿ ಅಧಿಕಾರಿ ಅಶೋಕ ಮೆಸ್ತ್ರಿ ಸೇರಿದಂತೆ ಅನೇಕರು ಇದ್ದರು.
Home / Recent Posts / ರಸಗೋಬ್ಬರದ ದಾಸ್ತಾನು ಮಾಡಲು ಕೃಷಿ ಇಲಾಖೆಗೆ ನೀಡಿದ ನಿರ್ದೇಶನದಂತೆ ದಾಸ್ತಾನವಿದ್ದು, ರೈತರು ಕೃಷಿ ಇಲಾಖೆಯಿಂದ ಪಡೆದು ಹೆಚ್ಚಿನ ಇಳುವರಿ ಪಡೆಯಿರಿ- ಶಾಸಕ ರಮೇಶ ಜಾರಕಿಹೊಳಿ
Check Also
ಖಾನಟ್ಟಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಉತ್ತಮ ಸಹಕಾರ ಸಂಘ ಪ್ರಶಸ್ತಿ
Spread the loveಮೂಡಲಗಿ : ಬೆಳಗಾವಿ ಜಿಲ್ಲಾ ಉತ್ತಮ ಸಹಕಾರಿ ಸಂಘ ಪ್ರಶಸ್ತಿ ಬೆಳಗಾವಿಯಲ್ಲಿ ನಡೆದ 71ನೇ ಅಖಿಲ ಭಾರತ …