inmudalgi
ಮಾರ್ಚ್ 4, 2023 Recent Posts, ತಾಲ್ಲೂಕು, ಬೆಳಗಾವಿ
ಕಲ್ಲೋಳಿ ಲಿಂಗಾಯತ ಪಂಚಮಸಾಲಿ 2ಎ ಮಿಸಲಾತಿಗೆ ಆಗ್ರಹಿಸಿ ಪ್ರತಿಭಟನೆ ಮೂಡಲಗಿ:ಲಿಂಗಾಯತ ಪಂಚಮಸಾಲಿ ಮಹಾಸಭಾ ಕೂಡಲಸಂಗಮ ಪ್ರಥಮ ಜಗದ್ಗುರು ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು ಅವರ ಸಲಹೆಯಂತೆ 2ಎ ಮೀಸಲಾತಿ ಒತ್ತಾಯಿಸಿ ಶನಿವಾರ ಕಲ್ಲೋಳಿ ಪಟ್ಟಣದ ಬಸವೇಶ್ವರ ಸರ್ಕಲ್‍ದಲ್ಲಿ ರಸ್ತೆ ಬಂದ ಮಾಡಿ,ಟಯರ್‍ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿ, ಮಾನವ ಸರಪಳಿ ನಿರ್ಮಿಸಿ ಬೃಹತ್ ಪ್ರತಿಭಟನೆ ನಡೆಯಿತು. ಸಮಾಜದ ಪ್ರಮುಖರಾದ ಬಸವರಾಜ ಕಡಾಡಿ,ರಾವಸಾಹೇಬ ಬೆಳಕೂಡ,ಶಂಕರ ಬೆಳಕೂಡ,ಪ್ರಭು ಕಡಾಡಿ,ಅಜೀತ ಬೆಳಕೂಡ,ಪಂಚಕ್ಷರಿ ಹೆಬ್ಬಾಳ,ಗಿರಮಲ್ಲಪ್ಪ ಸವಸುದ್ದಿ,ಶಂಭೂಲಿಂಗ ಖಾನಾಪೂರ,ಹಣಮಂತ …
Read More »
inmudalgi
ಮಾರ್ಚ್ 4, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ : ಪಂಚಮಸಾಲಿ 2ಎ ಮೀಸಲಾತಿ ಹೋರಾಟ ವಿಚಾರವಾಗಿ ಕೂಡಲಸಂಗಮ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರಿಂದ ಪ್ರತಿಭಟನೆಗೆ ಕರೆ ನೀಡಿದ ಹಿನ್ನಲೆ ನೂರಾರು ಪಂಚಮಸಾಲಿ ಸಮಾಜದ ಜನರು ಹಾಗೂ ತಾಲೂಕಿನ ವಿವಿಧ ಸಮಾಜದ ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿ ಮೂಡಲಗಿ ಸಮೀಪದ ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯನ್ನು ಗುರ್ಲಾಪೂರ ಕ್ರಾಸ್ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪಂಚಮಸಾಲಿ ಸಮಾಜದ ಸಂಘಟನೆಯ ಬೆಳಗಾವಿ …
Read More »
inmudalgi
ಮಾರ್ಚ್ 3, 2023 Recent Posts, ತಾಲ್ಲೂಕು, ಬೆಳಗಾವಿ
ಶ್ರೀ ಸತ್ಯ ಸಾಯಿಬಾಬಾರ 16ನೇ ವಾರ್ಷಿಕೋತ್ಸವ ಮಾ.5ರಂದು ಮೂಡಲಗಿ : ಪಟ್ಟಣದ ಶ್ರೀ ಸತ್ಯ ಸಾಯಿಬಾಬಾ ಸೇವಾ ಸಮಿತಿ ಆಶ್ರಯದಲ್ಲಿ ಶ್ರೀ ಸತ್ಯ ಸಾಯಿಬಾಬಾರ 16ನೇ ವಾರ್ಷಿಕೋತ್ಸವ ಸಮಾರಂಭವು ಮಾ.5 ರಂದು ಆರ್.ಡಿ.ಎಸ್. ಶಿಕ್ಷಣ ಸಂಸ್ಥೆಯ ಸಭಾ ಭವನದಲ್ಲಿ ನಡೆಯಲಿದೆ. ಸಮಾರಂಭದ ಸಾನಿದ್ಯವನ್ನು ಸ್ಥಳೀಯ ಶ್ರೀ ಶಿವಬೋಧರಂಗ ಮಠದ ಶ್ರೀ ದತ್ತಾತ್ರೇಯಬೋಧ, ಶ್ರೀ ಶ್ರೀಧರಬೋಧಬೋಧ ಸ್ವಾಮೀಜಿಗಳು, ಸುಣಧೋಳಿ ಜಡಿಸಿದ್ದೇಶ್ವರ ಮಠದ ಶ್ರೀ ಶಿವಾನಂದ ಸ್ವಾಮಿಗಳು, ಶಿರೂಂಜದ ಶ್ರೀ ಬಸವ ಸಮರ್ಥ …
Read More »
inmudalgi
ಮಾರ್ಚ್ 2, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಶಿಕ್ಷಕರು ಮಕ್ಕಳಿಗೆ ನೈತಿಕ ಶಿಕ್ಷಣ ಬೋಧನೆ ಮಾಡುವ ಕೌಶಲ ಬೆಳೆಸಿಕೊಳ್ಳಬೇಕು. ಪಾಲಕರು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಬೇಕೆಂದು ಹೊಸ ಯರಗುದ್ರಿಯ ಶ್ರೀ ಇರಾಲಿಂಗೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಸಿದ್ಧ ಪ್ರಭು ಶಿವಾಚಾರ್ಯ ಮಹಾ ಸ್ವಾಮೀಜಿಗಳು ಹೇಳಿದರು. ಅವರು ತಾಲೂಕಿನ ಅವರಾದಿಯ ಉದಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶಿರ್ವಚನ ನೀಡಿದ ಅವರು ಗುರುಕುಲ ಮಾದರಿಯಲ್ಲಿ ಶಿಕ್ಷಣ ನೀಡಿ ಯಶಸ್ಸು …
Read More »
inmudalgi
ಮಾರ್ಚ್ 1, 2023 Recent Posts, ತಾಲ್ಲೂಕು, ಬೆಳಗಾವಿ
ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ. ಗೋಕಾಕ: 19.50 ಕೋಟಿ ರೂಪಾಯಿ ವೆಚ್ಚದಲ್ಲಿ ತಪಸಿ ಗ್ರಾಮದಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡಿರುವ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯನ್ನು ಅತೀ ಶೀಘ್ರವಾಗಿ ಉದ್ಘಾಟನೆ ನೆರವೇರಿಸುವುದಾಗಿ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ತಪಸಿ-ಕೆಮ್ಮನಕೋಲ ಗ್ರಾಮದಲ್ಲಿ ಇತ್ತೀಚೆಗೆ ಕರಣೆ ಮಲಕಾರಿ ಸಿದ್ಧೇಶ್ವರ ಜಾತ್ರೆಯ ನಿಮಿತ್ತವಾಗಿ ಜರುಗಿದ ಕಬಡ್ಡಿ ಪಂದ್ಯಾವಳಿಯಲ್ಲಿ ವಿಜೇತರಾದವರಿಗೆ ಬಹುಮಾನ …
Read More »
inmudalgi
ಫೆಬ್ರವರಿ 28, 2023 Recent Posts, ತಾಲ್ಲೂಕು, ಬೆಳಗಾವಿ
*12 ಕೋಟಿ ರೂಗಳ ವೆಚ್ಚದಲ್ಲಿ ಕೌಜಲಗಿಯಲ್ಲಿ ಅಮೃತ ಸಮುದಾಯ ಆರೋಗ್ಯ ಕೇಂದ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ* ಶೀಘ್ರದಲ್ಲಿಯೇ ಬಹುನಿರೀಕ್ಷಿತ ಕಲ್ಮಡ್ಡಿ ಏತ ನೀರಾವರಿ ಯೋಜನೆ ಲೋಕಾರ್ಪಣೆ-ಬಾಲಚಂದ್ರ ಜಾರಕಿಹೊಳಿ ಗೋಕಾಕ: ಕೌಜಲಗಿ ಮತ್ತು ಸುತ್ತಲಿನ ಸಾರ್ವಜನಿಕರಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡಲು ಈಗಿರುವ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಅಮೃತ ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೆ ಏರಿಸಲಾಗಿದ್ದು, ಈ ಹೊಸ ಕಟ್ಟಡ ನಿರ್ಮಾಣಕ್ಕಾಗಿ 12ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಅರಭಾವಿ ಶಾಸಕ ಹಾಗೂ …
Read More »
inmudalgi
ಫೆಬ್ರವರಿ 27, 2023 Recent Posts, ತಾಲ್ಲೂಕು, ಬೆಳಗಾವಿ
‘ಜಾನಪದ ಕಲೆಗಳ ಉಳಿಸಿ ಬೆಳೆಸುವ ಜವಾಬ್ದಾರಿ ಎಲ್ಲರ ಮೇಲಿದೆ’ ಮೂಡಲಗಿ: ಮುಂದಿನ ಪೀಳಿಗೆಗೆ ಗೊತ್ತಾಗಬೇಕಾಗಿರುವ ಜಾನಪದ ಕಲೆಗಳು ನಶಿಸಿ ಹೋಗುತ್ತಲಿವೆ. ಅವುಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿಯು ಎಲ್ಲರ ಮೇಲಿದೆ’ ಎಂದು ಕಲ್ಲೋಳಿಯ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಸಗೌಡ ಪಾಟೀಲ ಹೇಳಿದರು. ತಾಲ್ಲೂಕಿನ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಆತಿಥ್ಯದಲ್ಲಿ ಬೆಂಗಳೂರಿನ ಕರ್ನಾಟಕ ಜಾನಪದ ಅಕಾಡೆಮಿ ಮತ್ತು ವೀರಭದ್ರೇಶ್ವರ ಜಾನಪದ ಕಲಾ ಪೋಷಕ ಸಂಘ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಗ್ರಾಮೀಣ …
Read More »
inmudalgi
ಫೆಬ್ರವರಿ 27, 2023 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ ಪತ್ರೇಪ್ಪನ ತೋಟದ ಶಾಲೆಯಲ್ಲಿ ಕೊಠಡಿ ನಿರ್ಮಾಣಕ್ಕೆ ಗುದ್ದಲಿ ಪೂಜೆ ಬೆಟಗೇರಿ:ಅರಭಾಂವಿ ಮತಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಪತ್ರೇಪ್ಪನ ತೋಟದ ಸರ್ಕಾರಿ ಕಿರಿಯ ಪ್ರಾಥಮಿಕ ಕನ್ನಡ ಶಾಲೆಯ ಆವರಣದಲ್ಲಿ 1 ಶಾಲಾ ಕೊಠಡಿ ನಿರ್ಮಾಣ ಕಾಮಗಾರಿ ಗುದ್ದಲಿ ಪೂಜೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಶಾಲೆಯ ಪ್ರಧಾನಗುರು ಬಿ.ಎ.ಕೋಟಿ ಮಾತನಾಡಿ, ಬೆಳಗಾವಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ವತಿಯಿಂದ ಸುಮಾರು …
Read More »
inmudalgi
ಫೆಬ್ರವರಿ 27, 2023 Recent Posts, ತಾಲ್ಲೂಕು, ಬೆಳಗಾವಿ
ಹಡಗಿನಾಳದಲ್ಲಿ 15.22 ಕೋಟಿ ರೂಗಳ ವೆಚ್ಚದ 110/11 ಕೆ.ವ್ಹಿ. ವಿದ್ಯುತ್ ವಿತರಣಾ ಕೇಂದ್ರಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಗುದ್ದಲಿ ಪೂಜೆ ಗೋಕಾಕ: ಹಡಗಿನಾಳ ಮತ್ತು ಸುತ್ತಮುತ್ತಲಿನ ಗ್ರಾಮಗಳಿಗೆ ಗುಣಮಟ್ಟದ ಗೃಹ ಹಾಗೂ ನೀರಾವರಿ ಬಳಕೆಗಾಗಿ ವಿದ್ಯುತ್ತ್ ಬೇಡಿಕೆ ಈಡೇರಿಸಲು ಹಡಗಿನಾಳ ಗ್ರಾಮದಲ್ಲಿ 110/11 ಕೆ.ವ್ಹಿ. ವಿದ್ಯುತ್ ವಿತರಣಾ ಕೇಂದ್ರವನ್ನು ನಿರ್ಮಿಸಲಾಗುತ್ತಿದ್ದು, ನವೆಂಬರ್ ತಿಂಗಳೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಅರಭಾವಿ ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸೂಚಿಸಿದರು. ರವಿವಾರದಂದು …
Read More »
inmudalgi
ಫೆಬ್ರವರಿ 24, 2023 Recent Posts, ತಾಲ್ಲೂಕು, ಬೆಳಗಾವಿ
ವಿದ್ಯಾರ್ಥಿಗಳಿಗೆ ಅಕ್ಷರದ ಜೊತೆಗೆ ಸಂಸ್ಕಾರವೂ ಮುಖ್ಯ: ಗಿರೆಣ್ಣವರ ಮೂಡಲಗಿ: ವಿದ್ಯಾರ್ಥಿಗಳು ತಮ್ಮ ಪಠ್ಯಕ್ರಮದ ಅಭ್ಯಾಸದ ಜೊತೆಗೆ ಉತ್ತಮ ಸಂಸ್ಕøತಿ, ಸಂಸ್ಕಾರ ಬೆಳೆಸಿಕೊಂಡು ತಮ್ಮ ಭವಿಷ್ಯವನ್ನು ಕಟ್ಟಿಕೊಳ್ಳಬೇಕು ಅಕ್ಷರದೊಂದಿಗೆ ಉತ್ತಮ ಸಂಸ್ಕಾರವೂ ದೊರೆಯಬೇಕೆಂದು ಮುಖ್ಯಾಧ್ಯಾಪಕ ಎ.ವ್ಹಿ. ಗಿರೆಣ್ಣವರ ಹೇಳಿದರು. ಅವರು ತಾಲೂಕಿನ ತುಕ್ಕಾನಟ್ಟಿಯ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆದ ತಾಯಂದಿರ ಸಭೆ ಹಾಗೂ ತಾಯಂದಿರ ಪಾದ ಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿ, ದ್ಯಾರ್ಥಿಗಳು ಸಮಯವನ್ನು ವ್ಯರ್ಥಗೊಳಿಸದೆ ಶೃದ್ಧೆಯಿಂದ ಪಾಠ …
Read More »