inmudalgi
ಸೆಪ್ಟೆಂಬರ್ 10, 2022 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ: ಕಳೆದ ಜುಲೈ ತಿಂಗಳಲ್ಲಿ ಜರುಗಿದ ರಾಷ್ಟ್ರ ಮಟ್ಟದ ನೀಟ್ ಪರೀಕ್ಷೆಯಲ್ಲಿ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಕುಮಾರಿ ಪೂಜಾ ಸುರೇಶ ಮುಧೋಳ ಉತ್ತಮ ಸಾಧನೆ ಮಾಡಿದ್ದಾರೆ. ವೈದ್ಯಕೀಯ ಅರ್ಹತಾ ಪರೀಕ್ಷೆಯಲ್ಲಿ ಅವರು 720ರ ಪೈಕಿ 568 ಅಂಕ ಪಡೆದುಕೊಂಡು, ಗೋಕಾಕ ತಾಲೂಕು ಹಾಗೂ ಬೆಟಗೇರಿಗ್ರಾಮಕ್ಕೆ ಕೀರ್ತಿ ತಂದಿದ್ದಾಳೆ. ವಿದ್ಯಾರ್ಥಿನಿಯ ಈ ಸಾಧನೆಗೆ ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಶಿಕ್ಷಣ ಪ್ರೇಮಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Read More »
inmudalgi
ಸೆಪ್ಟೆಂಬರ್ 10, 2022 Recent Posts, ತಾಲ್ಲೂಕು, ಬೆಳಗಾವಿ
ಗೋಕಾಕ್: ಕಳೆದ ಜುಲೈ ತಿಂಗಳಲ್ಲಿ ಜರುಗಿದ ರಾಷ್ಟ ಮಟ್ಟದ ನೀಟ್ ಪರೀಕ್ಷೆಯಲ್ಲಿ ೭೨೦ ರ ಪೈಕಿ ೬೬೫ ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿದ್ದಾಳೆ. ತಾಲೂಕಿನ ನಲ್ಲಾನಟ್ಟಿ ಗ್ರಾಮದ ಕೆ.ವೈ. ಕುಳ್ಳೂರ ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿನಿಯಾದ ದೀಪಾ, ಕನ್ನಡ ಮಾಧ್ಯಮದ ವಿದ್ಯಾರ್ಥಿನಿ ಎಂಬುದು ವಿಶೇಷ. ದೀಪಾ ಕುಳ್ಳೂರ ಸಾಧನೆಗೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ, ಕ್ಷೇತ್ರ ಶಿಕ್ಣಣಾಧಿಕಾರಿ ಅಜೀತ ಮನ್ನಿಕೇರಿ, ನಿವೃತ್ತ ಶಿಕ್ಷಕ ಕೆ.ವೈ.ಕುಳ್ಳೂರ ಸೇರಿದಂತೆ ಗ್ರಾಮದ ಹಲವು ಗಣ್ಯರು …
Read More »
inmudalgi
ಸೆಪ್ಟೆಂಬರ್ 8, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ : 110/11 ಕೆವ್ಹಿ ಮೂಡಲಗಿ, 110/11 ಕೆವ್ಹಿ ನಾಗನೂರ, ಹಾಗೂ 110/11 ಕೆವ್ಹಿ ಮತ್ತು 33/11ಕೆವಿ ಯಾದವಾಡ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಎರಡನೇ ತ್ರೈಮಾಸಿಕ ಕಾರ್ಯ ನಿರ್ವಹಣೇಯನ್ನು ಕೈಗೋಳ್ಳುವದರಿಂದ ದಿ. ಸೆ 9 ರಂದು ಮುಂಜಾನೆ 10 ಘಂಟೆಯಿಂದ ಸಾಯಂಕಾಲ 5 ಘಂಟೆಯವರೆಗೆ ವಿದ್ಯುತ್ ಪೊರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತದೆ. ಆದ್ದರಿಂದ 110/11 ಕೆವ್ಹಿ ಮೂಡಲಗಿ, 110/11 ಕೆವ್ಹಿ ನಾಗನೂರ ಹಾಗೂ 110/11 ಕೆವ್ಹಿ ಮತ್ತು 33/11ಕೆವ್ಹಿ ಯಾದವಾಡ ವಿದ್ಯುತ್ …
Read More »
inmudalgi
ಸೆಪ್ಟೆಂಬರ್ 8, 2022 Recent Posts, ತಾಲ್ಲೂಕು, ಬೆಳಗಾವಿ
ಗೋಕಾಕ : ಅರಣ್ಯ ಹಾಗೂ ಆಹಾರ ಸಚಿವರಾಗಿದ್ದ ಉಮೇಶ ಕತ್ತಿ ಅವರ ನಿಧನದ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕತ್ತಿಯವರ ಬೆಲ್ಲದ ಬಾಗೇವಾಡಿ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಗುರುವಾರದಂದು ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿರುವ ನಿವಾಸದಲ್ಲಿ ದಿ.ಉಮೇಶ ಕತ್ತಿ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮೃತ ಉಮೇಶ ಕತ್ತಿ ಸಹೋದರ ರಮೇಶ …
Read More »
inmudalgi
ಸೆಪ್ಟೆಂಬರ್ 7, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಸಚಿವ ಉಮೇಶ ಕತ್ತಿ ಅವರ ನಿಧನಕ್ಕೆ ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ಮೂಡಲಗಿ ಘಟಕದಿಂದ ಶ್ರದ್ಧಾಂಜಲಿಯನ್ನು ಅರ್ಪಿಸಿದರು. ಈ ಸಂದರ್ಭದಲ್ಲಿ ನುಡಿ ನಮನ ಸಲ್ಲಿಸಿದ ಬಾಲಶೇಖರ ಬಂದಿ ಹಾಗೂ ಎ.ಜಿ. ಶರಣಾರ್ಥಿ ಮಾತನಾಡಿ ‘ಉಮೇಶ ಕತ್ತಿ ಅವರು ಅಪ್ರತಿಮ ರಾಜಕಾರಣಿಯಾಗಿದ್ದರು. ಜನಪರ ಕಾರ್ಯಗಳನ್ನು ಮಾಡುವ ಮೂಲಕ ನಾಡಿನ ಹೃದಯದಲ್ಲಿ ಶಾಶ್ವತವಾಗಿ ಉಳಿದುಕೊಂಡಿದ್ದಾರೆ’ ಎಂದರು. ‘ಎಲ್ಲರೊಂದಿಗೆ ಬೆರೆಯುವ ಅಜಾತಶತ್ರುವಾಗಿದ್ದ ಅವರ ನಿಧನದಿಂದ ಸಮಾಜಕ್ಕೆ ಹಾಗೂ ನಾಡಿಗೆ ತುಂಬಲಾರದಷ್ಟು …
Read More »
inmudalgi
ಸೆಪ್ಟೆಂಬರ್ 7, 2022 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದ ಸನ್ 2021-22ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ ಸಭೆ ಸಂಘದ ಅಧ್ಯಕ್ಷ ಹನುಮಂತ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಸೆ.12ರಂದು ಮುಂಜಾನೆ 11ಗಂಟೆಗೆ ಸಂಘದ ಕಾರ್ಯಾಲಯದಲ್ಲಿ ನಡೆಯಲಿದೆ. ಸಂಘದ ವಾರ್ಷಿಕ ಆಯಾ-ವ್ಯಯ ಅನುಮೋದನೆ, ಕಾರ್ಯ ಚಟುವಟಿಕೆ, ವಾರ್ಷಿಕ ವರದಿ, 2021-22ನೇ ಸಾಲಿನ ನಿವ್ಹಳ ಲಾಭದ ವಿಭಾಗಣೆ, ಇತರೆ ಸಹಕಾರ ಸಂಘಗಳಲ್ಲಿ ಸಂಘದ ಸದಸ್ಯತ್ವದ ಅನುಮೋದನೆ ಸೇರಿದಂತೆ 27 …
Read More »
inmudalgi
ಸೆಪ್ಟೆಂಬರ್ 7, 2022 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ:ಪ್ರತಿಯೊಬ್ಬ ಮನುಷ್ಯನಲ್ಲಿರುವ ಅಜ್ಞಾನದ ಅಂಧಕಾರ ಕಳೆದು, ಸುಜ್ಞಾನದ ಬೆಳಕು ನೀಡುವ ಶಕ್ತಿ ಸದ್ಗುರುವಿನಲ್ಲಿದೆ. ಸದ್ಗುರುವಿನ ಕೃಪಾ ಆರ್ಶೀವಾದಕ್ಕೆ ಪಾತ್ರರಾಗಬೇಕು ಎಂದು ಇಂಚಲ ಸಾಧು ಸಂಸ್ಥಾನ ಮಠದ ಡಾ. ಶಿವಾನಂದ ಭಾರತಿ ಮಹಾಸ್ವಾಮಿಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಗಜಾನನ ವೇದಿಕೆಯಲ್ಲಿ ಇಚೆಗೆ ನಡೆದ 38ನೇ ಸತ್ಸಂಗ ಸಮ್ಮೇಳನ ಸಮಾರಂಭದ ದಿವ್ಯಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು, ನಾವೆಲ್ಲರೂ ಮೊದಲು ಸದ್ಗುರುವಿನಿಂದ ಸುಜ್ಞಾನ ಪಡೆದು ಪುನೀತರಾಗೋಣ ಎಂದರು. ಹಳಕಟ್ಟಿಯ ನಿಜಗುಣ …
Read More »
inmudalgi
ಸೆಪ್ಟೆಂಬರ್ 7, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ರಾಜ್ಯ ಮಟ್ಟದ ಟಗರಿನ ಕಾಳಗಕ್ಕೆ ಅದ್ದೂರಿ ಚಾಲನೆ. ಟಗರಿನ ಕಾಳಗದಲ್ಲಿ ಸೊಲು ಗೆಲವು ಒಂದು ನಾಣ್ಯದ ಎರಡು ಮುಖಗಳಿದಂತೆ ಸೊತವರು ಕುಗ್ಗದೆ ಗೆದ್ದವರು ಹಿಗ್ಗದೆ ಆಟದ ಮನೊಬಾವ ಬೇಳಸಿಕೊಳಬೇಕು ಎಂದು ಮೂಡಲಗಿ ಪುರಸಭೆ ಅಧ್ಯಕ್ಷರಾದ ಹಣಮಂತ ಗುಡ್ಲಮನಿ ಹೇಳಿದರು. ಪಟ್ಟಣದ ಶಾಬಣ್ಣವರ ಗವಿತೋಟ ಶಾಲೆಯ ಮೈದಾನದಲ್ಲಿ ಗಣೇಶ ಚತುರ್ಥಿ ನಿಮಿತ್ಯವಾಗಿ ಹಮ್ಮಿಕೊಂಡಿದ ರಾಜ್ಯ ಮಟ್ಟದ ಟಗರಿನ ಕಾಳಗ ವೈಭವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ನಮ್ಮ ಭಾಗದ ಶಾಸಕರು …
Read More »
inmudalgi
ಸೆಪ್ಟೆಂಬರ್ 7, 2022 Recent Posts, ತಾಲ್ಲೂಕು, ಬೆಳಗಾವಿ
ಗೋಕಾಕ್- ರಾಜ್ಯದ ಹಿರಿಯ ಶಾಸಕ, ಆಹಾರ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ಅವರ ಅಕಾಲಿಕ ನಿಧನಕ್ಕೆ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಕತ್ತಿ ಅವರ ನಿಧನದಿಂದ ಮುತ್ಸದ್ದಿ, ಕ್ರಿಯಾಶೀಲ ವ್ಯಕ್ತಿತ್ವದ ಆಪ್ತ ಸ್ನೇಹಿತನೊಬ್ಬನನ್ನು ಕಳೆದುಕೊಂಡಿದ್ದೇನೆ. ನನ್ನ ಮತ್ತು ಕತ್ತಿ ಅವರ ಮಧ್ಯೆ ಸುಮಾರು ೨ ದಶಕದ ಒಡನಾಟವೂ ಎಂದೂ ಮರೆಯದ ಘಟನೆ ಎಂದೂ ಅವರು ತಿಳಿಸಿದ್ದಾರೆ. ಉತ್ತಮ ಹೃದಯವಂತಿಕೆಯ ವ್ಯಕ್ತಿತ್ವ. …
Read More »
inmudalgi
ಸೆಪ್ಟೆಂಬರ್ 6, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ರಾಜ್ಯದಲ್ಲಿ 70 ರಿಂದ 80 ಲಕ್ಷ ಜನಸಂಖ್ಯೆ ಹೊಂದಿದ್ದರೂ 40 ವರ್ಷದಿಂದ ಉಪ್ಪಾರ ಸಮಾಜವನ್ನು ಗುರುತಿಸಿ ಗೌರವ ಸ್ಥಾನಮಾನ ಅಥವಾ ರಾಜಕೀಯ ಸ್ಥಾನಮಾನ ನೀಡುವಂತಹ ಕೆಲಸ ನಮ್ಮ ರಾಜ್ಯದಲ್ಲಿ ಯಾವುದೇ ಪಕ್ಷದಿಂದ ಅಥವಾ ಸರ್ಕಾರದಿಂದ ಆಗಿಲ್ಲ ಎಂದು ರಾಜ್ಯ ಉಪ್ಪಾರ ಮಹಾಸಭಾದ ರಾಜ್ಯಾಧ್ಯಕ ವಿಷ್ಣು ಲಾತೂರ ಹೇಳಿದರು. ಅವರು ಮಂಗಳವಾರ ಪ್ರೆಸ್ ಕ್ಲಬ್ ಕಾರ್ಯಾಲಯದಲ್ಲಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ನಾವು ಸರ್ಕಾರದ ಗಮನ …
Read More »