inmudalgi
ಅಕ್ಟೋಬರ್ 29, 2025 ಬೆಳಗಾವಿ, ರಾಜ್ಯ
ಬೆಟಗೇರಿ:ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಯಾರಿಗೂ ಮೋಸಮಾಡದೇ ಹಾಗೂ ದುಶ್ಚಟಗಳ ದಾಸರಾಗದೇ ಉತ್ತಮ ರೀತಿಯಲ್ಲಿ ಬದುಕಬೇಕು ಎಂದು ಮಾನವ ಕಂಪ್ಯೂಟರ್ ಎಂದು ಖ್ಯಾತರಾದ ಅಥಣಿಯ ಬಸವರಾಜ ಉಮರಾಣಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಅ.28ರಂದು ಹಮ್ಮಿಕೊಂಡ ಪ್ರೇರಣಾ ಕಾರ್ಯಾಗಾರ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಾಗಿ ಮಾತನಾಡಿ, ಪ್ರತಿಯೊಬ್ಬರ ಬದುಕಿನಲ್ಲಿ ವಿದ್ಯಾರ್ಥಿ ಜೀವನ ಅಮೂಲ್ಯವಾಗಿದೆ ಎಂದರು. ಮಾನವ ಕಂಪ್ಯೂಟರ್ ಎಂದು ಖ್ಯಾತರಾದ ಬಸವರಾಜ ಉಮರಾಣಿ ಅವರು ತಮ್ಮ ಬದುಕಿನ ಕೇಲವು …
Read More »
inmudalgi
ಅಕ್ಟೋಬರ್ 29, 2025 ಬೆಳಗಾವಿ, ರಾಜ್ಯ
ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಲಕ್ಷ್ಮೀದೇವಿ ಜಾತ್ರಾಮಹೋತ್ಸವ ಸೋಮವಾರ ಅ.27 ಮತ್ತು ಮಂಗಳವಾರ ಅ.28ರಂದು ಸಂಭ್ರಮದಿಂದ ನಡೆಯಿತು. ಸೋಮವಾರ ಅ.27 ರಂದು ಬೆಳಗ್ಗೆ, ಸಂಜೆ 6ಗಂಟೆಗೆ ಇಲ್ಲಿಯ ಲಕ್ಷ್ಮೀದೇವಿಯ ಗದ್ಗುಗೆಗೆ ಪೂಜೆ, ನೈವೇದ್ಯ ಸಮರ್ಪಿಸುವ, ದೇವರನ್ನು ಗದ್ಗುಗೆಗೊಳಿಸುವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಮಂಗಳವಾರ ಅ.28ರಂದು ಬೆಳಗ್ಗೆ 6ಗಂಟೆಗೆ ಲಕ್ಷ್ಮೀದೇವಿಯ ಗದ್ಗುಗೆಗೆ ಮಹಾಪೂಜೆ, ಮಹಾಭಿಷೇಕ, ನೈವೇದ್ಯ ಸಮರ್ಪಿಸುವ, ಲಕ್ಷ್ಮೀದೇವಿಯ ಆರಾಧನೆ, ಸುಮಂಗಲೆಯರಿಂದ ಶ್ರೀದೇವಿಗೆ ಉಡಿ ತುಂಬುವುದು, ವಿಶೇಷ …
Read More »
inmudalgi
ಅಕ್ಟೋಬರ್ 29, 2025 ಬೆಳಗಾವಿ, ರಾಜ್ಯ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಲಕ್ಷ್ಮೀದೇವಿ ಜಾತ್ರಾಮಹೋತ್ಸವ ಪ್ರಯುಕ್ತ ಅ.28ರಂದು ಶ್ರೀದೇವಿ ಗದ್ಗುಗೆ ವಿಶೇಷ ಅಲಂಕಾರ ಮಾಡಲಾಗಿತ್ತು.
Read More »
inmudalgi
ಅಕ್ಟೋಬರ್ 28, 2025 ಬೆಳಗಾವಿ, ರಾಜ್ಯ
ಮೂಡಲಗಿ- ಅರಭಾವಿ ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಪ್ರಥಮ ಪ್ರಾಶಸ್ತ್ಯ ನೀಡಿದ್ದು, ಅದರಲ್ಲೂ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ವಸತಿ ಶಾಲೆಗಳನ್ನು ಆರಂಭಿಸಿದ್ದು, ಇದರಿಂದ ಶಿಕ್ಷಣದ ಗುಣಮಟ್ಟವು ದಿನದಿಂದ ದಿನಕ್ಕೆ ಸುಧಾರಣೆಗೊಳ್ಳುತ್ತಿದೆ ಎಂದು ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಪ್ರಶಂಸೆ ವ್ಯಕ್ತಪಡಿಸಿದರು. ತಾಲ್ಲೂಕಿನ ಸುಣಧೋಳಿ (ಬಳೋಲ ಮಡ್ಡಿ) ಗ್ರಾಮದಲ್ಲಿ ಸುಮಾರು 16 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಿರುವ ಅಲ್ಪ ಸಂಖ್ಯಾತರ ಮೋರಾರ್ಜಿ ದೇಸಾಯಿ ವಸತಿ ಶಾಲೆಗೆ ಭೂಮಿ ಪೂಜೆಯನ್ನು ನೆರವೇರಿಸಿ …
Read More »
inmudalgi
ಅಕ್ಟೋಬರ್ 25, 2025 ಬೆಳಗಾವಿ, ರಾಜ್ಯ
ಮೂಡಲಗಿ: ಕ್ರೀಡಾಪಟುಗಳು ರಾಜ್ಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆದಾಗ ಮಾತ್ರ ಜನಮಾನಸದಲ್ಲಿ ಉಳಿಯುತ್ತಾರೆ. ಕ್ರೀಡಾಪಟುಗಳು ಕ್ರೀಡೆಯ ಜೊತೆಗೆ ಶೈಕ್ಷಣಿಕವಾಗಿ ಬೆಳೆಯಬೇಕು . ಅಂದಾಗ ಮಾತ್ರ ಕ್ರೀಡೆಗೆ ಮೆರಗು ಬರುತ್ತದೆ ಜನ್ಮ ನೀಡಿದ ತಂದೆ ತಾಯಿ ಹಾಗೂ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳಬೇಕು .ಕ್ರೀಡೆಯಲ್ಲಿ ಬೆಳೆಯುವುದರಿಂದ ಉತ್ತಮ ನಾಯಕರಾಗುತ್ತಾರೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು . ಅವರು ತಾಲ್ಲೂಕಿನ ನಾಗನೂರು ಪಟ್ಟಣದಲ್ಲಿ ಬೆಳಗಾವಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ …
Read More »
inmudalgi
ಅಕ್ಟೋಬರ್ 24, 2025 ಬೆಳಗಾವಿ, ರಾಜ್ಯ
ಅ.26 ರಂದು ಹೇಮ-ವೇಮ ಸೊಸಾಯಿಟಿ ಉದ್ಘಾಟನೆ ಮೂಡಲಗಿ: ತಾಲೂಕಿನ ಕಮಲದಿನ್ನಿ ಗ್ರಾಮದಲ್ಲಿ ನೂತನವಾಗಿ ಅಸ್ಥಿತ್ವಕ್ಕೆ ಬಂದ ಶ್ರೀ ಹೇಮ-ವೇಮ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿ ಉದ್ಘಾಟನಾ ಸಮಾರಂಭ ರವಿವಾರ ಅ.26ಂದು ಮುಂಜಾನೆ 9 ಗಂಟೆಗೆ ಶ್ರೀ ಮಹಾಲಕ್ಷ್ಮೀ ಹಾಗೂ ಮಹಾಸರಸ್ವತಿ ಪೂಜೆಯೊಂದಿಗೆ ಜರುಗಲಿದೆ. ಸಮಾರಂಭದ ಸಾನ್ನಿಧ್ಯವನ್ನು ಮೂಡಲಗಿಯ ಶ್ರೀ ದತ್ತಾತ್ರಯಬೋಧ ಸ್ವಾಮಿ, ರಂಗಪೂರ-ಮುನ್ಯಾಳದ ಶ್ರೀ ಡಾ.ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮಿಜಿ, ಸುಣಧೋಳಿಯ ಶ್ರೀ ಶಿವಾನಂದ ಸ್ವಾಮಿಜಿ, ಶ್ರೀ ಚಿದಾನಂದ ಅಜ್ಜಾ, …
Read More »
inmudalgi
ಅಕ್ಟೋಬರ್ 24, 2025 ಬೆಳಗಾವಿ, ರಾಜ್ಯ
ಮೂಡಲಗಿ: ಗ್ರಾಮೀಣ ಭಾಗದ ಕ್ರೀಡಾಪಟುಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಬೇಕು ಕ್ರೀಡಾಪಟುಗಳ ಮೂಲಭೂತ ಸೌಕರ್ಯಗಳಿಗಾಗಿ ಸರ್ಕಾರ ಹಾಗೂ ಸಂಘ -ಸಂಸ್ಥೆಗಳು ಸಹಾಯ ಸಹಕಾರ ನೀಡಬೇಕೆಂದು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು . ಅವರು ತಾಲೂಕಿನ ನಾಗನೂರು ಪಟ್ಟಣದಲ್ಲಿ ಬೆಳಗಾವಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಾರ್ಯಾಲಯ ಚಿಕ್ಕೋಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮೂಡಲಗಿ ಶ್ರೀ ಮಹಾಲಿಂಗೇಶ್ವರ ಶಿಕ್ಷಣ ಸಂಸ್ಥೆ ನಾಗನೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಪ್ರಾಥಮಿಕ …
Read More »
inmudalgi
ಅಕ್ಟೋಬರ್ 20, 2025 ಬೆಳಗಾವಿ, ರಾಜ್ಯ
ಮೂಡಲಗಿ: ತಾಲ್ಲೂಕಿನ ಅರಭಾವಿಯ ಜಗದ್ಗುರು ದುರದುಂಡೀಶ್ವರ ಮಠದಲ್ಲಿ ಅ. 21ರಂದು ಸಂಜೆ 6.30ಕ್ಕೆ ಅಮವಾಸ್ಯೆಯ ಶಿವಾನುಭವ ಗೋಷ್ಠಿಯು ಜರುಗಲಿದೆ. ಪೀಠಾಧಿಪತಿ ಗುರುಬಸವಲಿಂಗ ಸ್ವಾಮೀಜಿ ಸಾನ್ನಿಧ್ಯವಹಿಸುವರು. ಮುಖ್ಯ ಅತಿಥಿಗಳಾಗಿ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಶಿದ್ಧಲಿಂಗಪ್ಪ ಕಂಬಳಿ, ಉಪಾಧ್ಯಕ್ಷ ಮಲ್ಲಿಕಾರ್ಜುನ ಕಬ್ಬೂರ, ಹುಬ್ಬಳ್ಳಿಯ ನೈರುತ್ಯ ರೈಲ್ವೆ ಇಲಾಖೆಯ ಲಲಿತಾ ಬೆಳವಿ, ಕೆಂಚಪ್ಪ ಅಂಬೆನ್ನವರ ಭಾಗವಹಿಸುವರು. ಭಾರತೀಯ ಸಾಹಿತ್ಯ ಪರಿಷತ ವಿಭಾಗ ಸಂಯೋಜಕ ರಾಮಚಂದ್ರ ಕಾಕಡೆ ಅವರು ‘ಉರಿಲಿಂಗಪೆದ್ದಿ ವಚನಗಳು’ ಕುರಿತು …
Read More »
inmudalgi
ಅಕ್ಟೋಬರ್ 18, 2025 ಬೆಳಗಾವಿ, ರಾಜ್ಯ
ಮೂಡಲಗಿ: ‘ವೃತ್ತಿ ರಂಗಭೂಮಿಯನ್ನು ಮತ್ತು ನಾಟಕ ಕಲಾವಿದರನ್ನು ಉಳಿಸಿ ಬೆಳೆಸಿರುವ ಶ್ರೇಯಸ್ಸು ಉತ್ತರ ಕರ್ನಾಟಕಕ್ಕೆ ಸಲ್ಲುತ್ತದೆ’ ಎಂದು ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು. ಇಲ್ಲಿಯ ಗುರ್ಲಾಪುರ ರಸ್ತೆಯಲ್ಲಿ ತೆಗ್ಗಿಹಳ್ಳಿಯ ಸಂತ ಶರೀಫ ಶಿವಯೋಗಿ ನಾಟ್ಯ ಸಂಘದವರ ಹಾಸ್ಯಭರಿತ ‘ಹಸಿರು ಬಳೆ’ ನಾಟಕದ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ರಂಗಭೂಮಿ ಸಾಕಷ್ಟು ಸಂಕಷ್ಟದಲ್ಲಿದ್ದರೂ ಸಹ ಉತ್ತರ ಕರ್ನಾಟಕದಲ್ಲಿ ಈಗಲೂ ಅವುಗಳಿಗೆ ಆಶ್ರಯ ನೀಡಿತ್ತಿರುವುದು ಇಲ್ಲಿಯ ಕಲಾಭಿಮಾನಿಗಳ …
Read More »
inmudalgi
ಅಕ್ಟೋಬರ್ 17, 2025 ಬೆಳಗಾವಿ, ರಾಜ್ಯ
ವರದಿ *ಅಡಿವೇಶ ಮುಧೋಳ. ಬೆಟಗೇರಿ ಬೆಳಗಾವಿ ಜಿಲ್ಲೆಯ ಕರದಂಟೂರು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಮನೆ-ಮನೆಗಳಲ್ಲಿ ಬೆಳಕಿನ ಹಬ್ಬ ದೀಪಾವಳಿ ಪ್ರಯುಕ್ತ ಗ್ರಾಮದಲ್ಲಿ ರವಿವಾರ ಅ.19ರಂದು ಭರಮ ಹಬ್ಬ (ನೀರು ತುಂಬುವ ಹಬ್ಬ) ಸೇರಿದಂತೆ ಬುಧವಾರ ಅ.22 ದೀಪಾವಳಿ ಪಾಡ್ಯ ದಿನದವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ವಿಭಿನ್ನ ವೈಭವ, ಸಡಗರದಿಂದ ಅದ್ಧೂರಿಯಾಗಿ ದೀಪಾವಳಿ ಹಬ್ಬ ಆಚರಿಸಲಾಗುತ್ತಿದೆ. ಗ್ರಾಮದಲ್ಲಿ ಮಂಗಳವಾರ ಅ.21 ಅಮವಾಸ್ಯೆ ಮತ್ತು ಬುಧವಾರ ಅ.22 ದೀಪಾವಳಿ ಪಾಡ್ಯ ದಿನ …
Read More »