inmudalgi
ಆಗಷ್ಟ್ 5, 2025 ಬೆಳಗಾವಿ, ರಾಜ್ಯ
ರಾಯಬಾಗ: ರೈತರಿಗೆ ಒಳ್ಳೆಯದಾಗಬೇಕು ಎಂಬ ನಿಟ್ಟಿನಲ್ಲಿ ಚುನಾವಣೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ, ಡಾ.ಪ್ರಭಾಕರ ಕೋರೆ, ರಮೇಶ ಜಾರಕಿಹೊಳಿ, ಲಕ್ಷ್ಮಣ ಸವದಿ, ಅಣ್ಣಾಸಾಹೇಬ ಜೊಲ್ಲೆ ಅವರ ಮುಂದಾಳತ್ವದಲ್ಲಿ ಬಿಡಿಸಿಸಿ ಬ್ಯಾಂಕ್ ಚುನಾವಣೆ ಮಾಡಲು ತೀರ್ಮಾನಿಸಿದ್ದೇವೆ. ಯಾವುದೇ ಪಕ್ಷ ಇಲ್ಲದೆ, ಸಮಾನತೆ ಮಾಡಿಕೊಂಡು ಜಾತ್ಯತೀತವಾಗಿ ಚುನಾವಣೆಯನ್ನು ಎದುರಿಸಲು ನಾವೆಲ್ಲ ಸಜ್ಜಾಗಿದ್ದೇವೆ ಎಂದು ಬೆಮುಲ್ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ರಾಯಬಾಗ ಪಟ್ಟಣದ ಮಹಾವೀರ ಭವನದಲ್ಲಿ ಮಂಗಳವಾರ ನಡೆದ ರಾಯಬಾಗ ತಾಲೂಕಿನ …
Read More »
inmudalgi
ಆಗಷ್ಟ್ 1, 2025 ಬೆಳಗಾವಿ, ರಾಜ್ಯ
ನಿಡಸೋಸಿ- (ತಾ. ಹುಕ್ಕೇರಿ)- ಮೂರು ಶತಮಾನಗಳ ಭವ್ಯ ಇತಿಹಾಸ ಹೊಂದಿರುವ ನಿಡಸೋಸಿ ಶ್ರೀ ಮಠವು ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ರಂಗಗಳಲ್ಲಿ ಮಹತ್ತರ ಕೊಡುಗೆ ನೀಡಿದೆ ಎಂದು ಬೆಮುಲ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಶ್ಲಾಘನೆ ವ್ಯಕ್ತಪಡಿಸಿದರು. ಗುರುವಾರದಂದು ಸಂಜೆ ನಿಡಸೋಸಿ ಮಠಕ್ಕೆ ಭೇಟಿ ನೀಡಿ ಗದ್ದುಗೆ ದರ್ಶನ ಪಡೆದು ಮಾತನಾಡಿದ ಅವರು, ಧಾರ್ಮಿಕತೆಯ ಜತೆ ಶಿಕ್ಷಣ ಕ್ಷೇತ್ರಕ್ಕೆ ಅಮೂಲ್ಯ ಕಾಣಿಕೆಯನ್ನು ನೀಡುತ್ತಿರುವದನ್ನು ಗುಣಗಾನ ಮಾಡಿದರು. ಗಡಿ ಪ್ರದೇಶದಲ್ಲಿ …
Read More »
inmudalgi
ಜುಲೈ 31, 2025 ಬೆಳಗಾವಿ, ರಾಜ್ಯ
ಗೋಕಾಕ- ಮನ್ನಿಕೇರಿ ಗ್ರಾಮದ ಸಾರ್ವಜನಿಕರಿಗೆ ಅನುಕೂಲವಾಗಲು ಕೆರೆಗೆ ನೀರು ತುಂಬಿಸುವ ಯೋಜನೆಯನ್ನು ಹಮ್ಮಿಕೊಂಡಿದ್ದು, ಮುಂದಿನ ದಿನಗಳಲ್ಲಿ ಈ ಯೋಜನೆಯಿಂದ ರೈತರಿಗೆ ಎಲ್ಲ ರೀತಿಯಿಂದ ಅನುಕೂಲವಾಗಲಿದೆ ಎಂದು ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಈಚೆಗೆ ಮನ್ನಿಕೇರಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಲಕ್ಷ್ಮೀದೇವಿ ದೇವಸ್ಥಾನವನ್ನು ಉದ್ಘಾಟಿಸಿ ಮಾತನಾಡಿದರು. ಈಗಾಗಲೇ ಈ ಭಾಗಕ್ಕೆ ಕಲ್ಮಡ್ಡಿ ಏತ ನೀರಾವರಿ ಯೋಜನೆಯನ್ನು ಜಾರಿ ಮಾಡಲಾಗಿದೆ. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ರೈತರಿಗೆ ಅನುಕೂಲ …
Read More »
inmudalgi
ಜುಲೈ 30, 2025 ಬೆಳಗಾವಿ, ರಾಜ್ಯ
ಮೂಡಲಗಿ: ಕೇರಳದ ಪವಿತ್ರ ಕ್ಷೇತ್ರ ಶಬರಿಮಲೆಯಲ್ಲಿ ಆಯೋಜಿಸಲಾದ ನೀರಪುತ್ರಿ ಮಹೋತ್ಸವದಲ್ಲಿ ರಾಜ್ಯದ ಬೆಳಗಾವಿ ಮತ್ತು ಬಾಗಲಕೋಟ ಅಯ್ಯಪ್ಪ ಸ್ವಾಮಿ ಸನ್ನಿಧಾನದ ಗುರುಸ್ವಾಮಿಗಳು ಅತಿಥಿಗಳಾಗಿ ಬಾಗಿಯಾಗಿದರು. ಕಾರ್ಯಕ್ರಮದಲ್ಲಿ ಅತಿಥಿಗಲಾಗಿ ಭಾವಹಿಸಿದ್ದ ಭಾರತಿಯ ಅಯ್ಯಪ್ಪ ಸ್ವಾಮಿ ಸೇವಾ ಸಂಘದ ರಾಜ್ಯ ಧರ್ಮ ಪ್ರಚಾರಕರಾದ ಬೆಳಗಾವಿಯ ಮಾರುತಿ ಕೋಳಿ ಅವರು ಶಬರಿಮಲೆಯಲ್ಲಿ ನೀರಪುತ್ರಿ ಮಹೋತ್ಸವ ಈ ವರ್ಷ ಬಹಳ ವೈಭವದಿಂದ, ಆಧ್ಯಾತ್ಮಿಕ ಉತ್ಕರ್ಷದಿಂದ ಹಾಗೂ ವಿವಿಧ ರಾಜ್ಯಗಳಿಂದ ಆಗಮಿಸಿದ ಭಕ್ತಮಂಡಳಿಯಿಂದ ಯಶಸ್ವಿಯಾಗಿ ನಡೆಯಿತು. ಯಾತ್ರೆಯು …
Read More »
inmudalgi
ಜುಲೈ 30, 2025 ಬೆಳಗಾವಿ, ರಾಜ್ಯ
ಗೋಕಾಕ: ಆರ್ಡಿಪಿಆರ್ ಇಲಾಖೆಯಿಂದ ರಸ್ತೆ ಸುಧಾರಣಾ ಕಾಮಗಾರಿಗಳಿಗಾಗಿ ೧೦ ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಮಂಗಳವಾರದಂದು ೧.೨೦ ಕೋಟಿ ರೂಪಾಯಿ ವೆಚ್ಚದ ತಾಲ್ಲೂಕಿನ ಕೌಜಲಗಿ- ಹೊನಕುಪ್ಪಿ ರಸ್ತೆ ಸುಧಾರಣೆಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. ಯಾದವಾಡ ಮುಖ್ಯ ರಸ್ತೆಯಿಂದ ಕುಲಗೋಡ ಹಣಮಂತ ದೇವಸ್ಥಾನ ಹೊಸಟ್ಟಿ ಕೂಡು ರಸ್ತೆಗೆ ೬೦ ಲಕ್ಷ ರೂಪಾಯಿ, ಮುನ್ಯಾಳ ಲಕ್ಷ್ಮೀದೇವಿ ಗುಡಿಯಿಂದ ರಂಗಾಪೂರ …
Read More »
inmudalgi
ಜುಲೈ 30, 2025 ಬೆಳಗಾವಿ, ರಾಜ್ಯ
ಬೆಳಗಾವಿ: ಈಗ ಬಹಳ ಜನರ ಬಯಕೆ ಬಿಡಿಸಿಸಿ ಬ್ಯಾಂಕ್‌ಗೆ ಬರುವುದು. ಆದರೆ, ನಾನು ಬಿಡಿಸಿಸಿ ಬ್ಯಾಂಕ್‌ಗೆ ಸ್ಪರ್ಧೆ ಮಾಡುವುದಿಲ್ಲ. ಮುಂದಿನ ದಿನಗಳಲ್ಲಿಯೂ ನಾನು ಅಧ್ಯಕ್ಷ ಸ್ಥಾನ ಆಕಾಂಕ್ಷಿಯೂ ಅಲ್ಲ. ಮುಂದೆ ಲಿಂಗಾಯತ ಸಮಾಜದವರನ್ನೇ ಅಧ್ಯಕ್ಷ, ಉಪಾಧ್ಯಕ್ಷರನ್ನಾಗಿ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಜಾರಕಿಹೊಳಿ ಕುಟುಂಬದಿಂದ ಅಧ್ಯಕ್ಷರಾಗುವ ಮಾತೇ ಇಲ್ಲ ಎಂದು ಬೆಮುಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದಲ್ಲಿ ಬುಧವಾರ ನಡೆದ ಬಿಡಿಸಿಸಿ ಬ್ಯಾಂಕ್‌ನ ಸಾಮಾನ್ಯ ಸಭೆಯ ನಂತರ ಸುದ್ದಿಗಾರರೊಂದಿಗೆ …
Read More »
inmudalgi
ಜುಲೈ 29, 2025 ಬೆಳಗಾವಿ, ರಾಜ್ಯ
inmudalgi
ಜುಲೈ 29, 2025 ಬೆಳಗಾವಿ, ರಾಜ್ಯ
ಕೌಜಲಗಿ: ಕೌಜಲಗಿ ಭಾಗದಲ್ಲಿ ಬಡ ರೋಗಿಗಳ ಅನುಕೂಲಕ್ಕಾಗಿ ಅತ್ಯಾಧುನಿಕ ಸೌಲಭ್ಯಗಳುಳ್ಳ ಸಮುದಾಯ ಆರೋಗ್ಯ ಕೇಂದ್ರವನ್ನು ಲೋಕಾರ್ಪಣೆ ಮಾಡಿದ್ದು, ಇದನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳುವಂತೆ ಶಾಸಕ ಹಾಗೂ ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಮಂಗಳವಾರದಂದು ಗೋಕಾಕ ತಾಲೂಕಿನ ಕೌಜಲಗಿ ಪಟ್ಟಣದಲ್ಲಿ ೧೨ ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ೩೦ ಹಾಸಿಗೆಗಳ ಸಮುದಾಯ ಆರೋಗ್ಯ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಹೊಸ ಆಸ್ಪತ್ರೆಯನ್ನು ನೋಡುತ್ತಿದ್ದರೆ ದೂರದ ಬೆಳಗಾವಿ, ಬೆಂಗಳೂರು ಆಸ್ಪತ್ರೆಗಳನ್ನು …
Read More »
inmudalgi
ಜುಲೈ 29, 2025 ಬೆಳಗಾವಿ, ರಾಜ್ಯ
ಮೂಡಲಗಿ: ‘ಬಸವಣ್ಣನವರ ತತ್ವ, ವ್ಯಕ್ತತ್ವದಿಂದ ಪ್ರಭಾವಿತರಾದ ಮೋಳಿಗೆ ಮಾರಯ್ಯ ತಮ್ಮ ವಚನಗಳಲ್ಲಿ ಡಂಭಾಚಾರವನ್ನು ಕಟುವಾಗಿ ಟೀಕಿಸಿದ ಕಾಯಕನಿಷ್ಠ ಶರಣ ಎಂದು ಗುರುತಿಸಿಕೊಂಡಿದ್ದರು’ ಎಂದು ಮಕ್ಕಳ ಸಾಹಿತಿ ಪ್ರೊ. ಸಂಗಮೇಶ ಗುಜಗೊಂಡ ಹೇಳಿದರು. ತಾಲ್ಲೂಕಿನ ಅರಭಾವಿಯ ಜಗದ್ಗುರು ದುರದುಂಡೀಶ್ವರ ಮಠದ 19ನೇ ಮಾಸಿಕ ಶಿವಾನುಭವ ಗೋಷ್ಠಿಲ್ಲಿ ಮೋಳಿಗೆ ಮಾರಯ್ಯ ಅವರ ಜೀವನ ಚರಿತ್ರೆ ಕುರಿತು ಉಪನ್ಯಾಸ ನೀಡಿದ ಅವರು ಮಾರಯ್ಯನವರು ಅಂತರಂಗ, ಬಹಿರಂಗದ ಶುದ್ಧತೆಯೇ ಭಕ್ತಿಯ ನಿಜವಾದ ಮಾರ್ಗವೆಂದು ಪ್ರತಿಪಾದಿಸಿದ್ದರು ಎಂದರು. …
Read More »
inmudalgi
ಜುಲೈ 29, 2025 ಬೆಳಗಾವಿ, ರಾಜ್ಯ
ಮೂಡಲಗಿ: ‘ಮಕ್ಕಳ ಶಿಕ್ಷಣ ಕಲಿಕೆಯಲ್ಲಿ ಶಿಕ್ಷಕರೊಂದಿಗೆ ಪಾಲಕರ ಜವಾಬ್ದಾರಿಯು ಮುಖ್ಯವಾಗಿದೆ’ ಎಂದು ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು. ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ಪ್ರಾರಂಭಿಸಿರುವ ನರ್ಸರಿ ಶಾಲೆ ಉದ್ಘಾಟನೆ ಮತ್ತು ಪಾಲಕರ ಸಭೆಯ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ದೇಶದ ಭವಿಷ್ಯದ ರೂವಾರಿಗಳಾಗುವ ಮಕ್ಕಳನ್ನು ನಿರ್ಲಕ್ಷಿಸಬಾರದು ಎಂದರು. ಪ್ರಾಥಮಿಕ ಶಾಲಾ ಹಂತದಲ್ಲಿರುವ ಮಕ್ಕಳ ಮೇಲೆ ಹೆಚ್ಚು ಪ್ರೀತಿ ಇರಬೇಕು. ಬೆಳೆಯುತ್ತಾ …
Read More »