inmudalgi
ನವೆಂಬರ್ 12, 2024 ಬೆಳಗಾವಿ, ರಾಜ್ಯ
ನಿಧನ ವಾರ್ತೆ ಮೂಡಲಗಿ: ತಾಲ್ಲೂಕಿನ ಢವಳೇಶ್ವರ ಗ್ರಾಮದ ಹಿರಿಯರ ಹಾಗೂ ಪ್ರಗತಿ ಪರ ರೈತರಾದ ಪಾಂಡಪ್ಪ ರಂಗಪ್ಪ ಚನ್ನಾಳ(95) ಮಂಗಳವಾರ ನಿಧನರಾದರು ಪಾಂಡಪ್ಪ ರಂಗಪ್ಪ ಚನ್ನಾಳ ಅವರು ತಮ್ಮ ಜೀವಿತ ಅವಧಿಯಲ್ಲಿ ಅರಭಾವಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರಾಗಿ, ಗೋಕಾಕ ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷರಾಗಿ ಹಾಗೂ ಸಮೀರವಾಡಿ ಕಬ್ಬು ಬೆಳೆಗಾರ ಸಂಘದ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದರು. …
Read More »
inmudalgi
ನವೆಂಬರ್ 11, 2024 ಬೆಳಗಾವಿ, ರಾಜ್ಯ
ತಾಲೂಕಾ ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ ಮೂಡಲಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ.ಟ್ರಸ್ಟ್ ಮೂಡಲಗಿ ಯೋಜನಾ ಕಛೇರಿಯ ವ್ಯಾಪ್ತಿಯ ತಾಲೂಕಾ ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶವನ್ನು ಮಂಗಳವಾರ ನ.12 ರಂದು ಬೆಳಿಗ್ಗೆ 9 ಗಂಟೆಗೆ ಮೂಡಲಗಿಯ ಅತ್ತಾರ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಯೋಜನೆಯ ಮೂಡಲಗಿ ತಾಲೂಕಾ ಯೋಜನಾಧಿಕಾರಿ ರಾಜು ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಮಾವೇಶವನ್ನು ಯೋಜನೆಯ ಧಾರವಾಡ ಪ್ರಾದೇಶಿಕ ವ್ಯಾಪ್ತಿ ನಿರ್ದೇಶಕರಾದ ಶ್ರೀಮತಿ ದಯಾಶೀಲ ಅವರು ಉದ್ಘಾಟಿಸುವರು, …
Read More »
inmudalgi
ನವೆಂಬರ್ 11, 2024 ಬೆಳಗಾವಿ, ರಾಜ್ಯ
ಬೆಟಗೇರಿ:ಆನಂದಕಂದ ಕಾವ್ಯನಾಮದಿಂದ ಚಿರಪರಿತರಾಗಿರುವ ಡಾ.ಬೆಟಗೇರಿ ಕೃಷ್ಣಶರ್ಮರು ನಾಡಿನ ಶ್ರೇಷ್ಠ ಸಾಹಿತಿಯಾಗಿದ್ದರು. ಇಂದು ಪ್ರತಿಯೊಬ್ಬರೂ ಸಾಹಿತ್ಯಾಭಿರುಚಿ ಮತ್ತು ಕನ್ನಡಾಭಿಮಾನ ಬೆಳಸಿಕೊಳ್ಳಬೇಕು. ಡಾ.ಬೆಟಗೇರಿ ಕೃಷ್ಣಶರ್ಮರು ಅಪ್ಪಟ ದೇಶಿ ಕವಿಯಾಗಿದ್ದರು ಎಂದು ಸುಣಧೋಳಿ ಅಭಿನವ ಶಿವಾನಂದ ಸ್ವಾಮೀಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಕರ್ನಾಟಕ ರಕ್ಷಣಾ ವೇದಿಕೆ, ಗ್ರಾಮ ಪಂಚಾಯತಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಸ್ಥಳೀಯ ಶ್ರೀ ಗಜಾನನ …
Read More »
inmudalgi
ನವೆಂಬರ್ 10, 2024 ಬೆಳಗಾವಿ, ರಾಜ್ಯ
ಮೂಡಲಗಿ: ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರ ಕನ್ನಡ ಮತ್ತು ಸಂಸ್ಕøತ ಇಲಾಖೆಯಿಂದ “ಸುವರ್ಣ ಮಹೋತ್ಸವ” ಪ್ರಶಸ್ತಿಗೆ ಭಾಜನರಾದ ಬಂಡಿಗಣಿಯ ದಾಸೋಹ ರತ್ನ ಚಕ್ರವರ್ತಿ ದಾನೇಶ್ವರ ಶ್ರೀಗಳನ್ನು ಅರಂಭಾವಿ-ಸಂಗನಕೇರಿಯ ಶ್ರೀ ಚಕ್ರವರ್ತಿ ಕುರಿ ಸಂಗೋಪನೆ ಮತ್ತು ಉಣ್ಣಿ ಉತ್ಪಾದಕರ ಸಹಕಾರಿ ಸಂಘ ಮತ್ತು ಅರಭಾವಿ ಶ್ರೀ ಚಕ್ರವರ್ತಿ ದಾನೇಶ್ವರ ಕೃಪಾ ಸಂಚಾರಿ ಕುರುಬರ ಕುರಿ ಸಂಗೋಪನೆ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಪದಾಧಿಕಾರಿಗಳು ಸತ್ಕರಿಸಿ ಗೌರವಿಸಿದರು. ಶ್ರೀ ಚಕ್ರವರ್ತಿ …
Read More »
inmudalgi
ನವೆಂಬರ್ 10, 2024 ಬೆಳಗಾವಿ, ರಾಜ್ಯ
ಗೋಕಾಕ- ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ೧.೪೦ ಕೋಟಿ ರೂಪಾಯಿಗಳು ಮಂಜೂರಾಗಿದ್ದು, ಕಟ್ಟಡ ಕಾಮಗಾರಿಗಳನ್ನು ಗುಣಮಟ್ಟದಿಂದ ಕೈಗೊಳ್ಳಲು ಈಗಾಗಲೇ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅರಭಾವಿ ಕ್ಷೇತ್ರದ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ತಾಲ್ಲೂಕಿನ ಖಂಡ್ರಟ್ಟಿ ಗ್ರಾಮದಲ್ಲಿ ೨೦ ಲಕ್ಷ ರೂಪಾಯಿಗಳ ವೆಚ್ಚದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಅಂಗನವಾಡಿ ಕಟ್ಟಡಕ್ಕೆ ಗುದ್ದಲಿ ಪೂಜೆಯನ್ನು ನೆರವೇರಿಸಿ ಮಾತನಾಡಿದ ಅವರು, ಇದಕ್ಕಾಗಿ ನರೇಗಾ ಯೋಜನೆಯಡಿ ಅನುದಾನವನ್ನು ನೀಡಲಾಗಿದೆ ಎಂದವರು ತಿಳಿಸಿದರು. …
Read More »
inmudalgi
ನವೆಂಬರ್ 9, 2024 Uncategorized
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ನ.9ರಂದು ಸ್ಥಳೀಯ ಕರ್ನಾಟಕ ರಕ್ಷಣಾ ವೇದಿಕೆ, ಗ್ರಾಮ ಪಂಚಾಯತಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಅದ್ಧೂರಿಯಾಗಿ ಜರುಗಿತು. ಗ್ರಾಮದ ವಿವಿಧ ವೃತ್ತದಲ್ಲಿರುವ ಪುತ್ಥಳಿಗಳಿಗೆ ಪೂಜೆ, ಪುಷ್ಪಾರ್ಪಣೆ ಸಮರ್ಪಣೆ ಸ್ಥಳೀಯ ಕರವೇ ಕಾರ್ಯಕರ್ತರ ನೇತೃತ್ವದಲ್ಲಿ ನಡೆದ ಬಳಿಕ ಇಲ್ಲಿಯ ಅಶ್ವಾರೂಢ ಬಸವೇಶ್ವರ ವೃತ್ತದಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ಶಾಲಾ …
Read More »
inmudalgi
ನವೆಂಬರ್ 9, 2024 ಬೆಳಗಾವಿ, ರಾಜ್ಯ
ಗೋಕಾಕ: ನಮ್ಮ ಹೆತ್ತವರೇ ನಮಗೆ ನಿಜವಾದ ದೇವರು. ದೇವರ ಸ್ವರೂಪಿಯಾಗಿರುವ ತಂದೆ- ತಾಯಿಯವರಿಗೆ ಗೌರವ ನೀಡುವ ಮೂಲಕ ತಮ್ಮ ಜೀವನವನ್ನು ಸಾರ್ಥಕಗೊಳಿಸುವಂತೆ ಅರಭಾವಿ ಶಾಸಕ ಮತ್ತು ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕರೆ ನೀಡಿದರು. ಶುಕ್ರವಾರ ಸಂಜೆ ತಾಲ್ಲೂಕಿನ ಕಪರಟ್ಟಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಶ್ರೀದೇವಿ ಮತ್ತು ಭರಮದೇವರ ದೇವಸ್ಥಾನದ ಉದ್ಘಾಟನೆ ಮತ್ತು ಮೂರ್ತಿ ಪ್ರಾಣ ಪ್ರತಿಷ್ಟಾಪನೆ ನೆರವೇರಿಸಿ ಮಾತನಾಡಿದ …
Read More »
inmudalgi
ನವೆಂಬರ್ 8, 2024 ಬೆಳಗಾವಿ, ರಾಜ್ಯ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ನ.9 ರಂದು ಸ್ಥಳೀಯ ಕರ್ನಾಟಕ ರಕ್ಷಣಾ ವೇದಿಕೆ, ಗ್ರಾಮ ಪಂಚಾಯತಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಡಾ.ಬೆಟಗೇರಿ ಕೃಷ್ಣಶರ್ಮರ ದಿವ್ಯ ಸ್ಮರಣೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ ಆಚರಣೆ ಸಮಾರಂಭ ಜರುಗಲಿದೆ. ಸ್ಥಳೀಯ ಕರವೇದವರ ನೇತೃತ್ವದಲ್ಲಿ ಅಂದು ಮುಂಜಾನೆ 8:30ಗಂಟೆಗೆ ಗ್ರಾಮದ ವಿವಿಧ ವೃತ್ತದಲ್ಲಿರುವ ಪುತ್ಥಳಿಗಳಿಗೆ ಪೂಜೆ, ಪುಷ್ಪಾರ್ಪಣೆ ಸಮರ್ಪಣೆ ಬಳಿಕ ಇಲ್ಲಿಯ …
Read More »
inmudalgi
ನವೆಂಬರ್ 8, 2024 Uncategorized
ಮೂಡಲಗಿ: ಇಡಿ ದೇಶದ ಜನ ಮಹಾರಾಷ್ಟç ರಾಜ್ಯದ ಚುನಾವಣೆಯನ್ನು ಅತ್ಯಂತ ಕುತೂಹಲದಿಂದ ಗಮನಿಸುತ್ತಿದ್ದು ಸ್ಥಿರ ಸರ್ಕಾರಕ್ಕಾಗಿ ಈ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈಗಳನ್ನು ಬಲಪಡಿಸಬೇಕು ಮತ್ತು ಮಹಾರಾಷ್ಟçದಲ್ಲಿ ಅಭಿವೃದ್ದಿ ಪರ್ವ ಪ್ರಾರಂಭವಾಗಬೇಕು ಈ ಹಿನ್ನಲೆಯಲ್ಲಿ ನಮ್ಮೆಲ್ಲ ಕಾರ್ಯಕರ್ತರು ಈ ಚುನಾವಣೆಯನ್ನು ಸವಾಲಾಗಿ ಸ್ವೀಕಾರ ಮಾಡಿ ಅತೀ ಹೆಚ್ಚು ಬಹುಮತದಿಂದ ಗೆಲ್ಲಲು ಪರಿಶ್ರಮ ಹಾಕಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಕರೆ ನೀಡಿದರು. ನೆರೆಯ …
Read More »
inmudalgi
ನವೆಂಬರ್ 8, 2024 ಬೆಳಗಾವಿ, ರಾಜ್ಯ
ಮೂಡಲಗಿಯ ಮಾರ್ನಿಂಗ್ ಸ್ಟಾರ್ ಕ್ರಿಕೆಟರ್ಸ ಮತ್ತು ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಆಯೋಜಿಸಿದ್ದ ಎಂಪಿಎಲ್-2024 ಕ್ರಿಕೆಟ್ ಟೂರ್ನಿಯನ್ನು ಮೂಡಲಗಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ವೆಂಕಟೇಶ ಸೋನವಾಲಕರ ಉದ್ಘಾಟಿಸಿದರು. ಮೂಡಲಗಿ: ‘ಕ್ರೀಡೆಗಳ ಆಯೋಜನೆಯಿಂದ ಜನರಲ್ಲಿ ಪರಸ್ಪರ ಸೌಹಾರ್ದತೆ ಬೆಳೆಯುತ್ತದೆ’ ಎಂದು ಮೂಡಲಗಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವೆಂಕಟೇಶ ಆರ್. ಸೋನವಾಲಕರ ಹೇಳಿದರು. ಇಲ್ಲಿಯ ಮೂಡಲಗಿ ಶಿಕ್ಷಣ ಮೈದಾನದಲ್ಲಿ ಮೂಡಲಗಿ ಮಾರ್ನಿಂಗ್ ಸ್ಟಾರ್ ಕ್ರಿಕೆಟರ್ಸ್ ಮತ್ತು ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಸಂಯುಕ್ತವಾಗಿ …
Read More »